ಬೆಂಗಳೂರು: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನೂತನ ಸಮ್ಮಿಶ್ರ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು, ಪದವಿವರೆಗೆ ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಒದಗಿಸಳು ನಿರ್ಧರಿಸಲಾಗಿದೆ. ಈ ಸೌಲಭ್ಯದಿಂದ ರಾಜ್ಯದ ಸುಮಾರು 19.6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎಂದು ಡಿ.ಸಿ.ತಮ್ಮಣ್ಣ ತಿಳಿಸಿದರು.
ಸದ್ಯಕ್ಕೆ ಬಸ್ ಟಿಕೆಟ್ ದರದಲ್ಲಿ ಏರಿಕೆ ಇಲ್ಲ: ಸಚಿವ ಡಿ.ಸಿ.ತಮ್ಮಣ್ಣ
ಮುಂದುವರೆದು ಮಾತನಾಡಿದ ಅವರು, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಬೇಕೆಂಬ ಪ್ರಸ್ತಾವನೆಯಿದೆ. ಆದರೆ ಸದ್ಯಕ್ಕೆ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಜೂ.27 ಮತ್ತು 28 ರಂದು ಇಲಾಖೆಯ ಬಜೆಟ್ ಪೂರ್ವ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.