ಬೆಂಗಳೂರು: ನಗರದ ಪ್ರತಿಷ್ಟಿತಾ ಮಾರುಕಟ್ಟೆಯಾದ ಕಲಾಸಿಪಾಳ್ಯ ಮಾರುಕಟ್ಟೆಯನ್ನ ಸ್ಥಳಾಂತರ ಮಾಡುವ ನಿರ್ಧಾರದ ಮೊದಲ ಭಾಗವಾಗಿ ಇಂದು ಪ್ರಕ್ರಿಯೆ ಪ್ರಾರಂಭ ಮಾಡಿದೆ. ಆನೇಕಲ್ ಸಮೀಪದ ಗೂಳಿಮಂಗಲ ಗ್ರಾಮದಲ್ಲಿ ಅತ್ಯಾಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ನಿರ್ಧಾರ ಮಾಡಿದ್ದು, 42 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡುವುದಾಗಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.ಅತ್ಯಾಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ 100 ಕೋಟಿ ರೂ ಅನುಮೋದನೆ ದೊರಕಿದ್ದು,48 ಕೋಟಿ ಭೂಸ್ವಾಧೀನಕ್ಕೆ, 52 ಕೋಟಿ ರೂ ಮಾರುಕಟ್ಟೆ ಅಭಿವೃದ್ಧಿಗೆ ವೆಚ್ಚ ಅಂದಾಜಿಸಲಾಗಿದೆ.
ಇದನ್ನೂ ಓದಿ: ರೈಲ್ವೆ ಪ್ರಯಾಣಿಕೆರಿಗೆ WhatsApp ನಿಂದ ಬಂಪರ್ ಫೀಚರ್
ಹೊಸ ಮಾರುಕಟ್ಟೆ ನಿರ್ಮಾಣ ಬಳಿಕ ಕಲಾಸಿಪಾಳ್ಯ ಮಾರ್ಕೆಟ್ ಶಿಫ್ಟ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗುವುದು ಎಂದು ಸರ್ಕಾರ ತೀರ್ಮಾನ ಮಾಡಿದೆ. ಇನ್ನು ನಗರದ ನಾಲ್ಕು ಕಡೆಯಲ್ಲಿ ಇಂತಹ ಆಧುನಿಕ ಮಾರುಕಟ್ಟೆ ನಿರ್ಮಾಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ತಿಳಿಸಿದರು.
ಮಾಗಡಿ, ಕೋಲಾರ ರಸ್ತೆ ಬಳಿಯೂ ತರಕಾರಿ ಮಾರುಕಟ್ಟೆ ನಿರ್ಮಾಣ ಕ್ಕೆ ಚಿಂತನೆ ಸರ್ಕಾರ ನಡೆಸುತ್ತಿದೆ. ಇದರಿಂದ ರೈತರಿಗೆ ಉತ್ಪನ್ನಗಳನ್ನ ತರಲು ಸಹಾಕಾರಿ ಆಗಲಿದೆ. ಅಭಿವೃದ್ಧಿ ದೃಷ್ಟಿಯಿಂದ ಈ ನಿರ್ಧಾರ ಅವಶ್ಯಕತೆ ಇದೆ ಎಂದು ಸರ್ಕಾರ ತಿಳಿಸಿದೆ.
ಇದನ್ನೂ ಓದಿ: ಸೆರೆ ಸಿಕ್ಕ ಉಗ್ರನಿಗೆ ರಕ್ತದಾನ ಮಾಡಿ ಜೀವ ಉಳಿಸಿ ಮಾನವೀಯತೆ ಮೆರೆದ ಸೈನಿಕರು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.