ನಲಪಾಡ್'ಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ನಲ್ಲಿ ಕೇವಿಯಟ್ ಸಲ್ಲಿಕೆ

ಮೊಹಮ್ಮದ್ ನಲಪಾಡ್'ಗೆ ಜಾಮೀನು ನೀಡದಂತೆ ಸಿಸಿಬಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. 

Last Updated : Mar 21, 2018, 07:15 PM IST
ನಲಪಾಡ್'ಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ನಲ್ಲಿ ಕೇವಿಯಟ್ ಸಲ್ಲಿಕೆ title=

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್'ಗೆ ಜಾಮೀನು ನೀಡದಂತೆ ಸಿಸಿಬಿ ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. 

ಈಗಾಗಲೇ ಕರ್ನಾಟಕ ಹೈಕೋರ್ಟ್ನಲ್ಲಿ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ನಲಪಾಡ್'ಗೆ ಜಾಮೀನು ನೀಡದಂತೆ ಸಿಸಿಬಿ ಪರ ವಕೀಲ ಸಂಜಯ್‌ ನೂಲಿ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್‌ ಸಲ್ಲಿಸಿದ್ದಾರೆ. 

ಈ ಮಧ್ಯೆ, ಪ್ರಕರಣ ಸಂಬಂಧ ವಿಚಾರಣೆಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ನಲಪಾಡ್‌ನ‌ನ್ನು ಇಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ 1 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ನಲಪಾಡ್ ನ್ಯಾಯಾಂಗ ಬಂಧನವನ್ನು ಏ.4ರವರೆಗೆ ವಿಸ್ತರಿಸಿದ್ದಾರೆ. 

Trending News