ಮೂರು ತಿಂಗಳಲ್ಲಿ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ - ಸಚಿವ ಸಿ.ಸಿ.ಪಾಟೀಲ

ಶಿಕ್ಷಕರು ಹಾಗೂ ಶಿಕ್ಷಣರಂಗದ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಕ್ತ ಮನಸ್ಸು ಹೊಂದಿದೆ.ಕೋವಿಡ್ ಕಾರಣದಿಂದ ಶಿಕ್ಷಣ ಕೇತ್ರದ ಮೇಲೆ ಉಂಟಾಗಿರುವ ಪರಿಣಾಮಗಳಿಂದ ಶಿಕ್ಷಕರೂ ಕೂಡ ಪರಿತಪಿಸುವಂತಾಗಿರುವುದು ಸರ್ಕಾರದ ಗಮನದಲ್ಲಿದೆ, ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಶಿಕ್ಷಕರ ಸಂಘಟನೆಗಳು ನಡೆಸುತ್ತಿರುವ ಹೋರಾಟ ಕೈಬಿಡಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಸಿ.ಸಿ.ಪಾಟೀಲ ಹೇಳಿದರು.

Last Updated : Dec 17, 2020, 04:19 PM IST
ಮೂರು ತಿಂಗಳಲ್ಲಿ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ - ಸಚಿವ ಸಿ.ಸಿ.ಪಾಟೀಲ title=
Photo Courtesy: Facebook

ಬೆಂಗಳೂರು: ಶಿಕ್ಷಕರು ಹಾಗೂ ಶಿಕ್ಷಣರಂಗದ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಕ್ತ ಮನಸ್ಸು ಹೊಂದಿದೆ.ಕೋವಿಡ್ ಕಾರಣದಿಂದ ಶಿಕ್ಷಣ ಕೇತ್ರದ ಮೇಲೆ ಉಂಟಾಗಿರುವ ಪರಿಣಾಮಗಳಿಂದ ಶಿಕ್ಷಕರೂ ಕೂಡ ಪರಿತಪಿಸುವಂತಾಗಿರುವುದು ಸರ್ಕಾರದ ಗಮನದಲ್ಲಿದೆ, ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಶಿಕ್ಷಕರ ಸಂಘಟನೆಗಳು ನಡೆಸುತ್ತಿರುವ ಹೋರಾಟ ಕೈಬಿಡಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಸಿ.ಸಿ.ಪಾಟೀಲ ಹೇಳಿದರು.

ಕನ್ನಡದಲ್ಲಿ ಮಾಹಿತಿ ನೀಡದ ಏರ್ ಲೈನ್ಸ್ ವಿರುದ್ಧ ಐಎಎಸ್ ಅಧಿಕಾರಿ ಆಕ್ರೋಶ

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ರಾಜ್ಯದ ವಿವಿಧ ಸಂಘಟನೆಗಳು ನಡೆಸುತ್ತಿರುವ ಸ್ಥಳಕ್ಕೆ ಅವರು ಸರ್ಕಾರದ ಪರವಾಗಿ ಭೇಟಿ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್. ಸುರೇಶಕುಮಾರ ಅವರು ನೀಡಿರುವ ಪತ್ರವನ್ನು ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರಿಗೆ ಹಸ್ತಾಂತರಿಸಿದ ಸಚಿವ ಸಿ.ಸಿ. ಪಾಟೀಲ ಅವರು, ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಇರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವುದು. ಕಾಲ್ಪನಿಕ ವೇತನ ಅನುಷ್ಠಾನದಿಂದ ಆಗುವ ಆರ್ಥಿಕ ಪರಿಣಾಮಗಳನ್ನು ಕೂಲಂಕಷವಾಗಿ ಪರಿಶೀಲಿಸಿ ವರದಿ ತಯಾರಿಸಲಾಗುವುದು.

ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ಈಗಲೇ ಸಲ್ಲಿಸಿ ಅರ್ಜಿ...!

ಅನುದಾನರಹಿತ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಯ ಸೇವಾ ಭದ್ರತೆಗೆ ಕಠಿಣ ಸುತ್ತೋಲೆಯೊಂದಿಗೆ ವಿಚಕ್ಷಣಾ ವ್ಯವಸ್ಥೆ ಮತ್ತಿತರ ಕ್ರಮಗಳ ಬಗ್ಗೆ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಶಿಕ್ಷಕರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸಿ, ಸಚಿವರು ಖುದ್ದಾಗಿ ಬಂದು ಮಾತನಾಡಿರುವುದು ಸಮಾಧಾನ ತಂದಿದೆ. ಸತ್ಯಾಗ್ರಹವನ್ನು ಸದ್ಯ ಮೊಟಕುಗೊಳಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಸೇರಿದಂತೆ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು ಉಪಸ್ಥಿತರಿದ್ದರು.

Trending News