ಶುಭ ಸುದ್ದಿ: ಬೈಕ್ ಖರೀದಿಗೆ ಸರ್ಕಾರದಿಂದ ₹ 25 ಸಾವಿರ ಸಹಾಯಧನ!

2020-21 ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ

Last Updated : Nov 26, 2020, 11:33 AM IST
  • 2020-21 ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ
  • ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬೈಕ್ ಖರೀದಿಗೆ ಸಹಾಯಧನ
  • ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ 25,000 ರೂ.ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ
ಶುಭ ಸುದ್ದಿ: ಬೈಕ್ ಖರೀದಿಗೆ ಸರ್ಕಾರದಿಂದ ₹ 25 ಸಾವಿರ ಸಹಾಯಧನ! title=

ಧಾರವಾಡ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬೈಕ್ ಖರೀದಿಗೆ ಸಹಾಯಧನ ನೀಡಲಾಗುತ್ತಿದೆ.

2020-21 ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗ(JOB) ಪಡೆದು, ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಎ ಮತ್ತು 3 ಬಿ ಗೆ ಸೇರಿದ(ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ 25,000 ರೂ.ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯುವುದು. ಈ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಾಳೆಯಿಂದ 3 ದಿನ ರಾಜ್ಯದಲ್ಲಿ ಭಾರಿ ಮಳೆ: ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್!

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

Google Sites: Freeಯಾಗಿ ವೆಬ್ ಸೈಟ್ ರಚಿಸಿ ನಿಮ್ಮ ಬಿಸಿನೆಸ್ ಹಾಗೂ ಸ್ಟಾರ್ಟ್ ಅಪ್ ಗೆ ಹೊಸ ಮೆರಗು ನೀಡಿ

ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು, ಧಾರವಾಡ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಉಚಿತ ಅರ್ಜಿಗಳನ್ನು ಪಡೆಯುವುದು. ಅಲ್ಲದೆ ನಿಗಮದ ವೆಬ್‍ಸೈಟ್ www.dbcdc.karnataka.gov.in ಇಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆನ್‍ಲೈನ್ ಅಥವಾ ಆಫ್‍ಲೈನ್ ಮೂಲಕ ಡಿಸೆಂಬರ್ 19 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.dbcdc.karnataka.gov.in ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

'ನನ್ನ ಜತೆ ಮುಂಬೈಗೆ ಬಂದವರೆಲ್ಲರಿಗೂ ಸಚಿವ ಸ್ಥಾನ ಖಚಿತ'

Trending News