ಶಿವಮೊಗ್ಗ: ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.


COMMERCIAL BREAK
SCROLL TO CONTINUE READING

ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.


1.18 ಕೋಟಿ ಮಹಿಳಾ ಯಜಮಾನಿಗೆ ತಿಂಗಳಿಗೆ ರೂ.2,000 ನೀಡುತ್ತಿರುವುದು ಸತ್ಯವಲ್ಲವೇ? ಇದುವರೆಗೆ ಯಾವುದೇ ಜಾತಿ, ಧರ್ಮ, ಭಾಷೆಯ ಬೇಧವಿಲ್ಲದೇ ಮಹಿಳೆಯರು ಶಕ್ತಿ ಯೋಜನೆಯಡಿ 130 ಕೋಟಿ ಉಚಿತ ಟಿಕೇಟ್ ಪಡೆದು ಪ್ರಯಾಣಿಸಿರುವುದು ಸುಳ್ಳಾಗಲು ಸಾಧ್ಯವೇ? 200 ಯೂನಿಟ್ ವರೆಗೆ ಉಚಿತ ವಿದ್ಯುತ್ 1.51 ಕೋಟಿ ಜನರಿಗೆ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 170 ರೂ. ಫಲಾನುಭವಿಗಳಿಗೆ ತಲುಪುತ್ತಿದೆ. ಈ ಎಲ್ಲ ಸತ್ಯಗಳನ್ನು ಯಾರು ಬೇಕಾದರೂ ಪರಿಶೀಲನೆ ನಡೆಸಲಿ ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ: Yuva Nidhi: ಕಾಂಗ್ರೆಸ್‌ ಬದ್ಧತೆಯುಳ್ಳ ಪಕ್ಷ, ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ- ರಣದೀಪ್‌ ಸಿಂಗ್ ಸುರ್ಜೇವಾಲ


ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ ಮಾಸಿಕ 4 ರಿಂದ 5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿದ ರೂ.ಗಳು ಸೇರುತ್ತದೆ. ಇದು ಬಡಜನರಿಗೆ ಸೌಲಭ್ಯ ನೀಡುತ್ತದೆ. ಬೆಲೆಯೇರಿಕೆ, ನಿರುದ್ಯೋಗ ಹೆಚ್ಚಾಗಿದ್ದು, ಬಡವರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಈ ಯೋಜನೆಗಳು ಹೆಚ್ಚಿಸುತ್ತವೆ ಎಂದು ಅವರು ತಿಳಿಸಿದರು.


ಇಂದು ನಮ್ಮ ಸರ್ಕಾರದ ಐದನೇ ಗ್ಯಾರಂಟಿಯಾದ ಯುವನಿಧಿಯನ್ನು ಜಾರಿಗೊಳಿಸಲಾಗುತ್ತಿದೆ. ಪದವಿ ಪಡೆದ ನಿರುದ್ಯೋಗಿಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆಯನ್ನು 2 ವರ್ಷಗಳ ಕಾಲ ನೀಡುವ ಯೋಜನೆಯಾಗಿದೆ. ಈ ಅವಧಿಯಲ್ಲಿ ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಕೌಶಲ್ಯ ತರಬೇತಿಯನ್ನು ನೀಡಲಾಗುವುದು ಎಂದು ಹೇಳಿದರು.


ಇದನ್ನೂ ಓದಿ: ಡಾ.ಪುನೀತ್ ರಾಜ್‍ಕುಮಾರ್ ಪುತ್ಥಳಿಗೆ ಕಿಡಿಗೇಡಿಗಳಿಂದ ಹಾನಿ


ಎರಡು ವರ್ಷದೊಳಗೆ ಸರ್ಕಾರಿ, ಖಾಸಗಿ ಅಥವಾ ಸ್ವಯಂ ಉದ್ಯೋಗ ದೊರೆತಲ್ಲಿ ಯುವನಿಧಿ ಭತ್ಯೆಯನ್ನು ನೀಡಲಾಗುವುದಿಲ್ಲ. ಕೈಗಾರಿಕೆಗಳಲ್ಲಿ ಬೇಡಿಕೆಯಿರುವ ಕೌಶಲ್ಯದ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿಯ ಅವಧಿಯನ್ನು ಸಂಬಂಧಪಟ್ಟ ಇಲಾಖೆ ನಿರ್ಧರಿಸಲಿದೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.