COVID -19 ನಿಯಮಗಳನ್ನು ಮೀರಿದರೆ ಬೀಳಲಿದೆ ಭಾರೀ ದಂಡ ..!
ಎಲ್ಲರೂ COVID ನಿಯಮಗಳನ್ನು ತಪ್ಪದೇ ಪಾಲಿಸುವಂತೆ ಸರ್ಕಾರ ಮನವಿ ಮಾಡಿದೆ. ನಿಯಮವನ್ನು ಉಲ್ಲಂಘಿಸಿದವರ ಮೇಲೆ ಭಾರಿ ದಂಡವನ್ನು ವಿಧಿಸಲಾಗುವುದು ಎಂದು ಸರ್ಕಾರ ಹೇಳಿದೆ.
ಬೆಂಗಳೂರು : ರಾಜ್ಯದಲ್ಲಿ ಕೊರೊನಾ (Coronavirus) ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಕಟ್ಟು ನಿಟ್ಟಾಗಿ ನಿಯಮಗಳನ್ನು (Corona guidlines) ಜಾರಿಗೊಳಿಸುತ್ತಿದೆ. ಈ ಮಧ್ಯೆ, ಎಲ್ಲರೂ COVID ನಿಯಮಗಳನ್ನು ತಪ್ಪದೇ ಪಾಲಿಸುವಂತೆ ಸರ್ಕಾರ ಮನವಿ ಮಾಡಿದೆ. ನಿಯಮವನ್ನು ಉಲ್ಲಂಘಿಸಿದವರ ಮೇಲೆ ಭಾರಿ ದಂಡವನ್ನು ವಿಧಿಸಲಾಗುವುದು ಎಂದು ಸರ್ಕಾರ ಹೇಳಿದೆ.
ಸಭೆ-ಸಮಾರಂಭಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ, ಮಾಲ್ (Mall), ಹೋಟೆಲುಗಳಲ್ಲಿ ನಿಯಮಿತ ಜನಸಂದಣಿ ಇರಬೇಕು ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ (DR. K Sudhakar) (AC) ಹೇಳಿದ್ದಾರೆ. ಸಾಮಾಜಿಕ ಅಂತರ (Social distancing) ನಿಯಮಗಳು ಉಲ್ಲಂಘನೆಯಾದಲ್ಲಿ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ. ನಿಯಮ ಉಲ್ಲಂಘನೆಯಾದರೆ ಹವಾ ನಿಯಂತ್ರಿತವಲ್ಲದ ಸಭಾಂಗಣ ಅಥವಾ ಸ್ಥಳಗಳ ಮಾಲೀಕರಿಗೆ 5,000 ರೂ ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೋಟೆಲ್ ಹಾಗೂ ಸಾರ್ವಜನಿಕ ಸಭೆಗಳ ಆಯೋಜಕರಿಗೆ 10,000ರೂ ದಂಡ ವಿಧಿಸಲಾಗುವುದು ಎಂದು ಸುಧಾಕರ್ ಹೇಳಿದ್ದಾರೆ. ಅಲ್ಲದೆ, ಮಾಸ್ಕ್ (mask) ಧರಿಸದಿದ್ದರೆ ಬಿಬಿಎಂಪಿ (BBMP) ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ₹250 ಹಾಗೂ ಇತರೆ ಪ್ರದೇಶಗಳಲ್ಲಿ ₹100 ದಂಡ ವಿಧಿಸಲಾಗುವುದುಎಂದು ಅವರು ಎಚ್ಚರಿಕೆ ನೀಡಿದ್ದಾರೆ.
"ಸಚಿವ ಡಾ.ಸುಧಾಕರ್ ಉದ್ದಟತನದ ಹೇಳಿಕೆಯಿಂದ 225 ಶಾಸಕರ ಮಾನಹಾನಿ"
ನಿನ್ನೆ ತಡರಾತ್ರಿ ರಾಜಕ್ಕೆ 4 ಲಕ್ಷ ಡೋಸ್ ಕೊರೊನಾ ಲಸಿಕೆ (Corona Vaccine) ಆಗಮಿಸಿದ್ದು, ಕೇಂದ್ರ ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ ಎಂದು ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಸಿಕೆಯ ಕೊರತೆ ಉಂಟಾಗದಂತೆ ಕ್ರಮ ಕೈಗೊಂಡಿದ್ದು, ಎಲ್ಲ ಅರ್ಹ ನಾಗರೀಕರು ಕೂಡಲೇ ನೋಂದಣಿ ಮಾಡಿಕೊಂಡು ಸದುಪಯೋಗ ಪಡೆಯಬೇಕೆಂದು ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : K Sudhakar: ರಾಜ್ಯದಲ್ಲಿ ಮತ್ತೆ 'ಲಾಕ್‌ಡೌನ್ ಎಚ್ಚರಿಕೆ' ನೀಡಿದ ಆರೋಗ್ಯ ಸಚಿವ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.