ಬೆಂಗಳೂರು: ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ  ಬಾಕಿ ಉಳಿದಿರುವ ಸಾಲವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ.


COMMERCIAL BREAK
SCROLL TO CONTINUE READING

ರೈತರು ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ಸರ್ಕಾರ ಮಹತ್ವಪೂರ್ಣ ಆದೇಶ ಹೊರಡಿಸಿದೆ.


ಎನ್ಪಿಎ ಸಾಲಗಳು ಮತ್ತು ದಿನಾಂಕ 1-1-2018 ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಈ ಆದೇಶ ತಿಳಿಸಿದೆ. ಸರ್ಕಾರಿ ಆದೇಶವನ್ನು ಇದರೊಂದಿಗೆ ಲಗತ್ತಿಸಲಾಗಿದೆ.