ಬೆಂಗಳೂರು: ಸಾಲ ಮನ್ನಾ ಬಗ್ಗೆ ರಾಜ್ಯಪಾಲರ ಭಾಷಣದಲ್ಲಾದರೂ ಭರವಸೆ ದೊರೆಯಬಹುದು ಎಂದು ರೈತರು ಕಾಯುತ್ತಿದ್ದರು. ಆದರೆ ಅವರ ನಿರೀಕ್ಷೆ ಹುಸಿಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.
ಸೋಮವಾರ ಆರಂಭವಾದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರದ ಚೊಚ್ಚಲ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು ರೈತರ ಸಾಲ ಮನ್ನಾ ಬಗ್ಗೆ ಯಾವುದೇ ಖಚಿತ ಭರವಸೆ ನೀಡದೆ, ರೈತರ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಬದ್ಧವಾಗಿದೆ ಎಂದಷ್ಟೇ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮೂಲಕ ರಾಜ್ಯಪಾಲರ ಭಾಷಣವನ್ನು ಟೀಕಿಸಿದ್ದಾರೆ.
"ಸಾಲಮನ್ನಾ ಕುರಿತು ರಾಜ್ಯಪಾಲರ ಭಾಷಣದಲ್ಲಾದರೂ ಭರವಸೆ ಸಿಗಬಹುದು ಎಂದು ನಾಡಿನ ರೈತರು ಕಾಯುತ್ತಿದ್ದರು. ಆದರೆ ಅನ್ನದಾತರ ನಿರೀಕ್ಷೆಯನ್ನು ಹುಸಿಗೊಳಿಸಿದ ರಾಜ್ಯ ಸರ್ಕಾರವು ರಾಜ್ಯಪಾಲರ ಭಾಷಣವನ್ನು ಕೇವಲ ಹೊಗಳಿಸಿಕೊಳ್ಳುವುದಕ್ಕೆ ಸೀಮಿತಗೊಳಿಸಿದೆ. ದಿನೇ ದಿನೇ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಈ ಭಂಡ ಸರಕಾರಕ್ಕೆ ಕಾಣುತ್ತಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಲಮನ್ನಾ ಕುರಿತು ರಾಜ್ಯಪಾಲರ ಭಾಷಣದಲ್ಲಾದರೂ ಭರವಸೆ ಸಿಗಬಹುದೆಂದು ನಾಡಿನ ರೈತರು ಕಾಯುತ್ತಿದ್ದರು. ಆದರೆ ಅನ್ನದಾತರ ನಿರೀಕ್ಷೆಯನ್ನು ಹುಸಿಗೊಳಿಸಿದ ರಾಜ್ಯ ಸರಕಾರವು ರಾಜ್ಯಪಾಲರ ಭಾಷಣವನ್ನು ಕೇವಲ ಹೊಗಳಿಸಿಕೊಳ್ಳುವುದಕ್ಕೆ ಸೀಮಿತಗೊಳಿಸಿದೆ. ದಿನೇದಿನೇ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಈ ಭಂಡ ಸರಕಾರಕ್ಕೆ ಕಾಣುತ್ತಿಲ್ಲ. pic.twitter.com/JEWybhEFbW
— B.S. Yeddyurappa (@BSYBJP) July 2, 2018