ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಕರ್ನಾಟಕ ಸರ್ಕಾರ ಘೋಷಣೆ

snakebite : ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿನ ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಕರ್ನಾಟಕ ಸರ್ಕಾರ ಘೋಷಿಸಿದೆ.

Written by - Zee Kannada News Desk | Last Updated : Feb 19, 2024, 11:32 PM IST
  • ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಕರ್ನಾಟಕ ಸರ್ಕಾರ ಘೋಷಿಸಿದೆ.
  • ಹಾವು ಕಡಿತವನ್ನು ಅಧಿಸೂಚಿತ ರೋಗವೆಂದು ಘೋಷಿಸಿದ ಭಾರತದ ಮೊದಲ ರಾಜ್ಯ ಎಂಬ ಕೀರ್ತಿಗೂ ಕರ್ನಾಟಕ ಭಾಜನವಾಗಿದೆ
  • ಕರ್ನಾಟಕದಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
 ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಕರ್ನಾಟಕ ಸರ್ಕಾರ ಘೋಷಣೆ title=

Government of Karnataka declares snakebite as a notifiable disease: ಕರ್ನಾಟಕ ಸರ್ಕಾರ, ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿನ ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಹಾವು ಕಡಿತವನ್ನು ರಾಜ್ಯದಲ್ಲಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಿದೆ.

ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಹಾವು ಕಡಿತದ ಎಲ್ಲ ಪ್ರಕರಣಗಳನ್ನು ಅಂದರೆ ಒಳರೋಗಿಗಳು, ಹೊರರೋಗಿಗಳು ಮತ್ತು ಸಾವಿನ ಪ್ರಕರಣಗಳೇ ಆಗಿರಲಿ ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿ ನೋಂದಾಯಿಸಬೇಕು ಎಂದು ಫೆಬ್ರವರಿ 12 ರಂದು ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ. 

ರಾಜ್ಯದ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ ಯಾವುದೇ ಹಾವು ಕಡಿತ ಪ್ರಕರಣವನ್ನುದಾಖಲಾದರೆ, ಅದರ ವಿವರವನ್ನು ರಾಜ್ಯ ಸರ್ಕಾರದ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ದಾಖಲೆ ಕಡತಕ್ಕೆ ವರದಿ ಮಾಡಬೇಕು ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ್ದು, ಕರ್ನಾಟಕದಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನು ಓದಿ :Online Shopping: ಆನ್‌ಲೈನ್ ಶಾಪಿಂಗ್ ಕ್ರೇಜ್ ಮಹಿಳೆಯರಿಗಿಂತ ಪುರುಷರಿಗೇ ಹೆಚ್ಚು! ಇಲ್ಲಿದೆ ವರದಿ

 ಹಾವು ಕಡಿತವನ್ನು ಅಧಿಸೂಚಿತ ರೋಗವೆಂದು ಘೋಷಿಸಿದ ಭಾರತದ ಮೊದಲ ರಾಜ್ಯ ಎಂಬ ಕೀರ್ತಿಗೂ ಕರ್ನಾಟಕ ಭಾಜನವಾಗಿದೆ ಎಂದು ಅದು ಮೆಚ್ಚುಗೆ ಸೂಚಿಸಿದೆ. ಈ ಕ್ರಮವನ್ನು ಸ್ವಾಗತಿಸಿದ ಹ್ಯೂಮನ್ ಸೊಸೈಟಿ ಇಂಟರ್‌ನ್ಯಾಶನಲ್(ಎಚ್‌ಎಸ್‌ಐ) ಇಂಡಿಯಾ, ಹಾವು ಕಡಿತದ ಹೊರೆಯನ್ನು ಕಡಿಮೆ ಮಾಡಲು ಸರ್ಕಾರದ ಕಣ್ಗಾವಲು ಕ್ರಮಗಳನ್ನು ಶ್ಲಾಘಿಸಿದೆ.

ಇದನ್ನು ಓದಿ : :Anupama Parameswaran: ತೆಲುಗು ನಟನಿಗೆ ಮುತ್ತಿಟ್ಟ ಮಲಯಾಳಿ ಬ್ಯೂಟಿ.. ʼನಿಮ್ಮನ್ನು ಸಾವಿತ್ರಿ ಅಂದುಕೊಂಡಿದ್ವಿ..ʼ ಎಂದು ಬೇಸರಗೊಂಡ ಫ್ಯಾನ್ಸ್!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವರದಿ ಮತ್ತು ಮಾಹಿತಿಯ ಪ್ರಕಾರ, 2023 ರಲ್ಲಿ (ಜನವರಿ ಮತ್ತು ಅಕ್ಟೋಬರ್ ನಡುವೆ) ರಾಜ್ಯದಲ್ಲಿ 5,316 ಹಾವು ಕಡಿತಗಳು ದಾಖಲಾಗಿವೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News