ಹಾಸನ: ಸರ್ಕಾರಿ ಶಾಲೆ-ಕಾಲೇಜುಗಳನ್ನು ಉಳಿಸಬೇಕಾದ ಶಿಕ್ಷಕರೇ ಖಾಸಗಿ ಶಿಕ್ಷಣ ಸಂಸ್ಥೆಗಳ ಆಮಿಷಕ್ಕೆ ಬಲಿಯಾಗಿ ಮಕ್ಕಳನ್ನು ಬಲವಂತವಾಗಿ ಖಾಸಗಿ ಕಾಲೇಜುಗಳಿಗೆ ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಅರಕಲಗೂಡು ತಾಲ್ಲೂಕಿನ ಅನುದಾನಿತ ಹಾಗೂ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂತಹ ಪ್ರಕರಣಗಳು ಬೆಳಕಿಗೆ ಬಂದಿದೆ.
ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ನಮ್ಮ ಕಾಲೇಜಿಗೆ ಸೇರಿಸಿದರೆ ಇಂತಿಷ್ಟು ಹಣ ಇಲ್ಲವೇ ಉಡುಗೊರೆ ನೀಡುತ್ತೇವೆ ಎಂದು ಖಾಸಗಿ ಕಾಲೇಜುಗಳ ಮುಖ್ಯಸ್ಥರು ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಆಮಿಷವೊಡ್ಡಿದ್ದಾರೆ.
ಇದನ್ನೂ ಓದಿ: Congress Government: 34 ಸಚಿವರು ಮತ್ತು ಖಾತೆ..! ಸಿದ್ದು ಸಂಪೂರ್ಣ ಸಂಪುಟ ಮಾಹಿತಿ ಇಲ್ಲಿದೆ
ಇದರಿಂದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಬಲವಂತವಾಗಿ ಮನವೊಲಿಸಿ ಖಾಸಗಿ ಕಾಲೇಜಿಗೆ ಸೇರಿಸುವಂತೆ ಪ್ರರೇಪಿಸುತ್ತಿದ್ದಾರೆ. ಇದರಿಂದ ಸರ್ಕಾರಿ ಪದವಿಪೂರ್ವ ಕಾಲೇಜುಗಳಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆಯೂ ಕ್ಷೀಣಿಸುತ್ತಿದೆ. ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ ಸ್ವಾಭಿಮಾನದ ಬದುಕು ಕಟ್ಟಿಕೊಡಲು ಸರ್ಕಾರಿ ಶಾಲೆ-ಕಾಲೇಜುಗಳನ್ನು ಉಳಿಸಲು ಕೆಲವರು ಶ್ರಮಿಸುತ್ತಿದ್ದಾರೆ.
ಸರ್ಕಾರವೂ ಸಹ ಹಲವು ಯೋಜನೆಗಳ ಮೂಲಕ ಅನುದಾನ ನೀಡಿ ಕನಿಷ್ಠ ಸವಲತ್ತುಗಳನ್ನು ಪುರೈಸುತ್ತಿದೆ. ಈ ನಡುವೆ ನಾಯಿ ಕೊಡೆಯಂತೆ ಎಲ್ಲದರಲ್ಲಿ ತಲೆ ಎತ್ತಿರುವ ಖಾಸಗಿ ಕಾಲೇಜು ವಿದ್ಯಾರ್ಥಿಗಳನ್ನು ತಮ್ಮತ್ತ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಇದೀಗ ಸರ್ಕಾರಿ ಶಾಲಾ ಶಿಕ್ಷಕರುಗಳನ್ನೇ ಖಾಸಗಿಯವರು ಬುಟ್ಟಿಗೆ ಹಾಕಿಕೊಂಡಿದ್ದಾರೆ.
ಸರ್ಕಾರಿ ಶಾಲೆ ಶಿಕ್ಷಕರು ಖಾಸಗಿ ಶಿಕ್ಷಣ ಸಂಸ್ಥೆಗಳೊAದಿಗೆ ಶಾಮೀಲಾಗಿ ಬಡ ಮಕ್ಕಳ ಪೋಷಕರಿಗೆ ಡೊನೇಷನ್ ಭಾರ ಹೊರಿಸಲು ಮುಂದಾಗಿದ್ದಾರೆ. ಈ ಬಗ್ಗೆ ಕೆಲವು ವಿದ್ಯಾರ್ಥಿಗಳು ಹಾಗು ಪೋಷಕರು ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Karnataka Cabinet List: ʼಶೆಟ್ಟರ್ ಹಾಗೂ ಸವದಿಗೆ ಅವಕಾಶ ಮಾಡಿಕೊಡೋದು ಪಕ್ಷಕ್ಕೆ ಒಳ್ಳೆದುʼ
ಖಾಸಗಿ ಶಿಕ್ಷಣ ಸಂಸ್ಥೆಯವರ ಹಣದಾಸೆಗೆ ಒಳಗಾಗಿರುವ ಸರ್ಕಾರಿ ಶಾಲೆ ಶಿಕ್ಷಕರು ತಾವು ಸೂಚಿಸಿದ ಕಾಲೇಜಿಗೆ ದಾಖಲಿಸಿದರಷ್ಟೇ ವರ್ಗಾವಣೆ ಪ್ರಮಾಣ ಪತ್ರ ಹಾಗು ಮೂಲ ಅಂಕಪಟ್ಟಿ ನೀಡುತ್ತೇವೆ ಎಂದು ಬೆದರಿಕೆವೊಡ್ಡುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಪ್ರಕರಣ ಹಿನ್ನೆಲೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಸಂಬAಧಿಸಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರೂ ಈ ವರೆಗೆ ಕ್ರಮವಾಗಿಲ್ಲ ಎಂದು ಪೋಷಕರು ಆರೋಪಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ