ಬೀದರ್: ರಾಜ್ಯ ಸರ್ಕಾರ ರೈತರಿಗೆ ಶೀಘ್ರವೇ ಸಿಹಿಸುದ್ದಿ ನೀಡುವ ನಿರೀಕ್ಷೆ ಇದೆ. ವಾಸ್ತವವಾಗಿ ರೈತರು ನೀಡುವ ಪ್ರತಿ ಲೀಟರ್ ಹಾಲಿಗೆ 1 ರೂ. ಹೆಚ್ಚಿಸುವ ಬಗ್ಗೆ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸುಳಿವು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಚಾಲನೆಗೊಂಡ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಮತ್ತು ರಾಷ್ಟ್ರೀಯ ಕೃತಕ ಗರ್ಭದಾರಣೆ ಕಾರ್ಯಕ್ರಮಗಳ ನೇರ ಪ್ರಸಾರದ ಬಳಿಕ  ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಭು ಚೌವ್ಹಾಣ್, ಕೇಂದ್ರ ಸರ್ಕಾರವು ಉದ್ಘಾಟಿಸಿದ 2 ಯೋಜನೆಗಳಿಗಾಗಿ ಒಟ್ಟು 13,300 ಕೋಟಿ ರೂ. ಗಳನ್ನು ಮೀಸಲಿಡಲಾಗಿದೆ. ಈ ಯೋಜನೆಯಡಿರಾಜ್ಯಕ್ಕೂ ಅಧಿಕ ಪಾಲನ್ನು ತರಲು ಪ್ರಯತ್ನಿಸುವುದಾಗಿ ತಿಳಿಸಿದರು.


ಈ ಸಂದರ್ಭದಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಹಾಗೂ ರೈತರ ಏಳಿಗೆಗಾಗಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ರೈತರು ನೀಡುವ ಹಾಲಿಗೆ 1 ರೂ. ಹೆಚ್ಚಿಸುವ ಕುರಿತು ಶೀಘ್ರವೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.