ಬೆಂಗಳೂರು: ಯವನಿಕಾದಲ್ಲಿ ಹಮ್ಮಿಕೊಂಡಿದ್ದ 13 ನೇ ಬುಡಕಟ್ಟು ಯುವ ವಿನಿಮಯ ದಕ್ಷಿಣ ಭಾರತ ಮಟ್ಟದ ಕಾರ್ಯಕ್ರಮವನ್ನು ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಯವರು,ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಉದ್ಘಾಟಿಸಿದರು. ‌


COMMERCIAL BREAK
SCROLL TO CONTINUE READING

ಇದನ್ನೂ ಓದಿ: 'ಚಲನಚಿತ್ರಗಳ ಪೋಸ್ಟರ್‌ಗಳನ್ನು ಹಾಕಲು ನೀವು ರಾಜಕೀಯಕ್ಕೆ ಬಂದಿದ್ದೀರಾ?'


ಅವಕಾಶ ವಂಚಿತರಾದ ಬುಡಕಟ್ಟು ಯುವ ಜನರಿಗೆ ಅವಕಾಶ ಒದಗಿಸಿಕೊಟ್ಟು ಬೇರೆ ಬೇರೆ ರಾಜ್ಯಗಳ ಕಲೆ, ಸಂಸ್ಕೃತಿ,ಸಂಪ್ರದಾಯ, ಆಹಾರ ಪದ್ದತಿಗಳು ಹಾಗೂ ಅಭಿವೃದ್ದಿ ಕಾರ್ಯಕ್ರಮಗಳ ವಿನಿಮಯಕ್ಕೆ ಒಂದು ವೇದಿಕೆ ಕಲ್ಪಿಸುವುದಕ್ಕಾಗಿ ಕೇಂದ್ರ ಸರ್ಕಾರದ ಯುವಜನ ವ್ಯವಹಾರ, ಕ್ರೀಡಾ ಸಚಿವಾಲಯ, ಕೇಂದ್ರ ಗೃಹ ಇಲಾಖೆ,ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವಕೇಂದ್ರ ವತಿಯಿಂದ ಆಯೋಜಿಸಲಾಗಿದ್ದು, 7 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ಛತ್ತೀಸ್ಗಡ,ಜಾರ್ಖಂಡ್, ಆಂಧ್ರ ಪ್ರದೇಶದಿಂದ 200 ಕ್ಕೂ ಹೆಚ್ಚು ಬುಡಕಟ್ಟಿನ ಯುವ ಜನರು ಭಾಗವಹಿಸಿದ್ದಾರೆ. 


ಇದನ್ನೂ ಓದಿ: ವಿಧಾನಸೌಧದ 3 ನೇ ಮಹಡಿಯಲ್ಲಿ ಮಂತ್ರಿಯೊಬ್ಬರು ಏನು ಮಾಡುತ್ತಿದ್ದರು ಎಂಬುದು ನಿಮಗೆ ಗೊತ್ತಿಲ್ಲವೇ?


ಯುವ ವಿನಿಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗ್ತಿತ್ತು. ಆದರೆ,ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮ ಆಯೋಜಿಸಿರುವುದು ಸಾಕಷ್ಟು ಖುಷಿ ತಂದಿದೆ. ಬುಡಕಟ್ಟು ಜನಾಂಗದ ಸಿದ್ದಿ ಮಕ್ಕಳಿಗೆ ನಮ್ಮ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಬೆಂಗಳೂರಿನ ವಿದ್ಯಾನಗರದಲ್ಲಿ 25 ಮಕ್ಕಳಿಗೆ ವಿಶೇಷ ಕ್ರೀಡಾ ತರಬೇತಿ ನೀಡಲಾಗುತ್ತಿದೆ.


ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆ ತೆರಳುವ ಬುಡಕಟ್ಟು ವಿದ್ಯಾರ್ಥಿಗಳಿಗೆ ನಮ್ಮ ರಾಜ್ಯ ಸರ್ಕಾರ ಧನ ಸಹಾಯ ಮಾಡುತ್ತಿದೆ. ಕಾನೂನು ವ್ಯಾಸಂಗ ಮಾಡುತ್ತಿರುವ ಬುಡಕಟ್ಟು ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 10 ಸಾವಿರ ಧನ ಸಹಾಯ ನೀಡಲಾಗುತ್ತದೆ.  ನೆಹರು ಯುವ ಕೇಂದ್ರ ಆಯೋಜಿಸಿರುವ ಈ ಕಾರ್ಯಕ್ರಮದಿಂದ ಕರ್ನಾಟಕದ ಕಲೆ, ಸಂಸ್ಕೃತಿ, ಸಂಪ್ರದಾಯದ ಬಗ್ಗೆ ಎಲ್ಲರೂ ತಿಳಿದುಕೊಳ್ಳುವುದಕ್ಕೆ ಸಹಾಯವಾಗಲಿದೆ ಎಂದು ಸಚಿವರು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.