ಸರ್ಕಾರದ ಕೆಲಸಗಳನ್ನು ಇನ್ನೂ ಉತ್ತಮವಾಗಿ ಜನರಿಗೆ ತಲುಪಿಸಬೇಕಿದೆ: ಅಶ್ವಥನಾರಾಯಣ
ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ರಾಜ್ಯ ಘಟಕ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅಶ್ವಥನಾರಾಯಣ, ಪಕ್ಷ ಮತ್ತು ಸರಕಾರದ ನಡುವೆ ಸಂಪರ್ಕದ ಅಂತರ ಇರಬಾರದು. ಅದನ್ನು ಹೋಗಲಾಡಿಸಲು ಇಂಥ ಮಾಧ್ಯಮ ಕಾರ್ಯಗಾರಗಳು ಹೆಚ್ಚು ಪೂರಕವಾಗುತ್ತವೆ ಎಂದು ಹೆಳಿದರು.
ಬೆಂಗಳೂರು : ರಾಜ್ಯ ಬಿಜೆಪಿ ಸರಕಾರ ಮಾಡುತ್ತಿರುವ ಜನಪರ ಕೆಲಸಗಳನ್ನು ಇನ್ನೂ ಉತ್ತಮವಾಗಿ ಜನರಿಗೆ ತಲುಪಿಸುವ ಕೆಲಸ ಆಗಬೇಕು. ಇದು ಅತ್ಯಂತ ಡೊಡ್ಡ ಟಾಸ್ಕ್ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ಹೇಳಿದರು.
ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ರಾಜ್ಯ ಘಟಕ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷ ಮತ್ತು ಸರಕಾರದ ನಡುವೆ ಸಂಪರ್ಕದ ಅಂತರ ಇರಬಾರದು. ಅದನ್ನು ಹೋಗಲಾಡಿಸಲು ಇಂಥ ಮಾಧ್ಯಮ ಕಾರ್ಯಗಾರಗಳು ಹೆಚ್ಚು ಪೂರಕವಾಗುತ್ತವೆ ಎಂದು ಹೆಳಿದರು.
ಇದನ್ನೂ ಓದಿ - D.K.Shivakumar: 'ವಲಸಿಗರಿಗೆ ಡಮ್ಮಿ ಖಾತೆ ನೀಡಿ ಯೂಸ್ ಅಂಡ್ ಥ್ರೋ ಮಾಡಿದ್ದಾರೆ'
ರಾಜ್ಯದಲ್ಲಿ ಬಿಜೆಪಿ (BJP) ನೇತೃತ್ವದ ಸರಕಾರ ಬಂದಾಗಿನಿಂದ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ಶೈಕ್ಷಣಿಕ, ಕೈಗಾರಿಕೆ, ಕೃಷಿ, ಮಾರುಕಟ್ಟೆ ಸೇರಿದಂತೆ ಹತ್ತಾರು ಕ್ಷೇತ್ರಗಳಲ್ಲಿ ಕಳೆದ ಎಪ್ಪತ್ತು ವರ್ಷಗಳಿಂದ ಸಾಧ್ಯವಾಗದ ಸುಧಾರಣಾ ಕ್ರಮಗಳನ್ನು ಜಾರಿ ಮಾಡಲಾಗಿದೆ. ಜತೆಗೆ ಅನೇಕ ಕಾಯ್ದೆಗಳನ್ನು ಕೂಡ ಜಾರಿಗೆ ತರಲಾಗಿದೆ. ಇವೆಲ್ಲಾ ಅಂಶಗಳ ಬಗ್ಗೆ ಆಳವಾಗಿ ಆಧ್ಯಯನ ಮಾಡಿ ಜನರಿಗೆ ಮುಟ್ಟಿಸುವ ಕೆಲಸ ಆಗಬೇಕು ಎಂದರೆ ಮೊದಲು ನಾವು ಪೂರ್ಣವಾಗಿ ತಿಳಿದುಕೊಳ್ಳಬೇಕು. ಪಕ್ಷದ ಹಾಗೂ ಸರಕಾರದ ವೇದಿಕೆಯಲ್ಲಿ ಕೆಲಸ ಮಾಡುವ ನಾವು ಚೆನ್ನಾಗಿ ಗ್ರಹಿಸಿಕೊಂಡರೆ ಮಾತ್ರ ಜನಸಾಮಾನ್ಯರಿಗೂ ಸುಲಭವಾಗಿ ವಿಷಯ ದಾಟಿಸಬಹುದು ಎಂದು ಅಶ್ವಥನಾರಾಯಣ ಹೇಳಿದರು.
ಮಾಧ್ಯಮಗಳಲ್ಲಿ (Media) ಪಕ್ಷದ ನಿಲುವುಗಳು ಹಾಗೂ ಸರಕಾರದ ಕೆಲಸಗಳು ಪರಿಣಾಮಕಾರಿಯಾಗಿ ಧ್ವನಿಸಬೇಕು. ಅದಕ್ಕೆ ಸಾಕಷ್ಟು ಪೂರ್ವಸಿದ್ಧತೆ ಹಾಗೂ ಅಧ್ಯಯನ ಅಗತ್ಯ. ಈ ಕೆಲಸವನ್ನು ಉತ್ತಮವಾಗಿ ಮಾಡಿದರೆ ಪಕ್ಷ ಮತ್ತಷ್ಟು ಗಟ್ಟಿಗೊಳ್ಳುತ್ತದೆ ಎಂದು ಡಿಸಿಎಂ ಅಭಿಪ್ರಾಯಪಟ್ಟರು.
ಇದನ್ನೂ ಓದಿ - Pramod Muthalik: ಬೆಳಗಾವಿ ಲೋಕಸಭಾ ಬೈಎಲೆಕ್ಷನ್: ಬಿಜೆಪಿ ಟಿಕೆಟ್‌ಗೆ ಪಟ್ಟು ಹಿಡಿದ ಮುತಾಲಿಕ್!
ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalinkumar Katil) ಕಾರ್ಯಗಾರವನ್ನು ಉದ್ಘಾಟನೆ ಮಾಡಿದರು. ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ (Rajeev Chandrashekar), ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಪಕ್ಷದ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ (Noopur Sharma) ಮುಂತಾದವರು ಪಾಲ್ಗೊಂಡಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.