ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಪೂರಕ ಕ್ರಮ: ಮುಖ್ಯಮಂತ್ರಿ BS Yediyurappa
ತೋಟಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯವು ತನ್ನ ಸ್ಥಾನವನ್ನು ಕಾಯ್ದುಕೊಂಡು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನುಡಿದರು.
ಬೆಂಗಳೂರು : ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯವು ಹಮ್ಮಿಕೊಂಡಿರುವ ತೋಟಗಾರಿಕಾ ಮೇಳವನ್ನು ಆನ್ ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa), ಸಿಎಫ್ ಟಿ ಆರ್ ಐ ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್ ಗಳ ಬಗ್ಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ. ಒಟ್ಟಾರೆ ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi)ಯವರು 100ನೇ ಕಿಸಾನ್ ರೈಲಿಗೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ (Kisan Rail) ಮೂಲಕ 27 ಸಾವಿರ ಟನ್ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ಶೀಘ್ರವಾಗಿ ಕೊಳೆತುಹೋಗಬಹುದಾದ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಕೃಷಿ ರೈಲ್ ಯೋಜನೆಯ ಸೌಲಭ್ಯವನ್ನು ಬಳಸಿಕೊಳ್ಳಲಾಗುವುದು ಎಂದರು.
ಇದನ್ನೂ ಓದಿ : New Year 2021: ಜ.1ರಿಂದ ಮುಖ್ಯಮಂತ್ರಿ ಸಚಿವಾಲಯದಲ್ಲಿ ಅಹವಾಲು ಸ್ವೀಕಾರಕ್ಕೆ ಒಂದೇ Email ID ಬಳಕೆ
ತೋಟಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯವು ತನ್ನ ಸ್ಥಾನವನ್ನು ಕಾಯ್ದುಕೊಂಡು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ನುಡಿದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ ಅವರು ಮಾತನಾಡಿ 2008 ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರೇ ಈ ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಿದರು. ಇದರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅದರಲ್ಲೂ ಬಾಗಲಕೋಟೆ ವಿಜಯಪುರ ಅವಳಿ ಜಿಲ್ಲೆಗಳ ತೋಟಗಾರಿಕೆ ಬೆಳೆಗಳ ವಿಸ್ತರಣೆ, ಸಂಶೋದನೆ, ತರಬೇತಿಗೆ ನೆರವಾಗಿದೆ. ರೈತ ಕುಟುಂಬದಿಂದ ಬಂದ , ರೈತರ ಧ್ವನಿಯಾಗಿ ರೂಪುಗೊಂಡಿರುವ ಬಿ.ಎಸ್. ಯಡಿಯೂರಪ್ಪ ಅವರು ರೈತರ (Farmers) ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿದ್ದಾರೆ. ರೈತರ ಹಿತ ಕಾಪಾಡಲು ಕಂಕಣ ಬದ್ದರಾಗಿದ್ದಾರೆ. ಈ ತೋಟಗಾರಿಕಾ ಪ್ರದೇಶ ವಿಸ್ತರಣೆಯಾಗುತ್ತಿರುವುದು ರೈತರಿಗೆ ತೋಟಗಾರಿಕೆ ಲಾಭದಾಯಕ ಎಂಬುದಕ್ಕೆ ನಿದರ್ಶನ. ವಿಜ್ಞಾನಿಗಳು ರೈತರಿಗೆ ಇನ್ನೂ ಹೆಚ್ಚು ಹೆಚ್ಚು ಲಾಭ ತರುವ ತಳಿಗಳನ್ನು ಸಂಶೋಧಿಸಿ, ರೈತರ ಬದುಕು ಹಸನುಗೊಳಿಸಬೇಕು. ರೈತರು ಇದರ ಸದುಪಯೋಗ ಪಡೆದು ಮಾದರಿ ರೈತರಾಗಬೇಕು ಎಂದು ಸಲಹೆ ನೀಡಿದರು.
ಈ ನಿಟ್ಟಿನಲ್ಲಿ ತೋಟಗಾರಿಕಾ ವಿವಿಯು ರೈತರಿಗೆ ಹಮ್ಮಿಕೊಳ್ಳುತ್ತಿರುವ ತರಬೇತಿ ಕಾರ್ಯಕ್ರಮಗಳ ಕುರಿತು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ತೋಟಗಾರಿಕಾ ಸಚಿವ ನಾರಾಯಣಗೌಡ (Narayan Gowda) ಅವರು ಮಾತನಾಡಿ, ರಾಜ್ಯದಲ್ಲಿ ತೋಟಗಾರಿಕೆ ಉತ್ತೇಜನಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ತೋಟಗಾರಿಕೆ ಉತ್ಪನ್ನಗಳ ರಫ್ತು ಪ್ರಮಾಣ ಶೇ. 2.5 ರಿಂದ ಶೇ. 5ಕ್ಕೇರಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಿಸಲು ರೈತರಿಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ : ಯಡಿಯೂರಪ್ಪಗೆ ರೈತರ ಹಿತಕ್ಕಿಂತ ಸರ್ಕಾರ ಉಳಿಸಿಕೊಳ್ಳೋದೇ ಮುಖ್ಯವಾಗಿದೆ: ಡಿ.ಕೆ. ಶಿವಕುಮಾರ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.