ಬೆಂಗಳೂರು : "ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್ ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು.ಏನಾದರು ಸ್ಪಷ್ಟನೆ ಕೇಳಿದರೆ ನೀಡೋಣ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ.ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.  


COMMERCIAL BREAK
SCROLL TO CONTINUE READING

ಯಾರು ಏನೇ ಪ್ರಯತ್ನ ಮಾಡಿದರೂ ಸರ್ಕಾರ ಬೀಳಿಸಲು ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ.ನಾವು ನಮ್ಮ ಕೆಲಸ ಮಾಡುತ್ತೇವೆ ಎಂದು ಖಾರವಾಗಿ ಉತ್ತರಿಸಿದರು.


ಇದನ್ನೂ ಓದಿ : ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ; ದಾಖಲೆ ಇಟ್ಟ ಹೆಚ್.ಡಿ.ಕುಮಾರಸ್ವಾಮಿ


ಜಿಂದಾಲ್ ಗೆ ಭೂಮಿ ಮಾರಾಟ ಮಾಡಿದ್ದನ್ನು ಈ ಹಿಂದೆ ವಿರೋಧಿಸಿದ್ದ ಕಾಂಗ್ರೆಸ್ ಅದೇ ಜಿಂದಾಲ್ ಗೆ ಭೂಮಿ ಮಾರಾಟ ಮಾಡಿರುವ ಬಗ್ಗೆ ಇಉತ್ತರಿಸಿದ ಡಿಕೆಶಿ   "ಉದ್ಯೋಗ ಸೃಷ್ಟಿಯಾಗಬೇಕು.ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು. ಕರ್ನಾಟಕದಲ್ಲಿ ಇರುವ ಕೈಗಾರಿಕಾ ಕಾನೂನಿಗೆ ತಕ್ಕಂತೆ ಅವರಿಗೆ ಭೂಮಿ ನೀಡಿದ್ದೇವೆ. ನಾವು ಅವರಿಗೆ ಹೊಸದಾಗಿ ಭೂಮಿ ಕೊಟ್ಟಿಲ್ಲ.ಈ ಹಿಂದೆ ಕೊಟ್ಟಿದ್ದನ್ನೇ ಪರಿಶೀಲಿಸಿ ಸೇಲ್ ಡೀಡ್ ಮಾಡಿಕೊಟ್ಟಿದ್ದೇವೆ.ಸಾವಿರಾರು ಲಕ್ಷಾಂತರ ಜನ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಟ್ಟಂತೆ ಇಲ್ಲಿಯೂ ಅದನ್ನೇ ಮಾಡಲಾಗಿದೆ. ಬಿಜೆಪಿಯವರು ಮಾಡಿದ್ದನ್ನು ನಾವು ಸರಿ ಮಾಡಿಕೊಟ್ಟಿದ್ದೇವೆ" ಎಂದು ತಿಳಿಸಿದರು.


ಪರಮೇಶ್ವರ್ ಅವರು ಸಹ ದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದಾಗ ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ? ಅವರದೇ ಇಲಾಖೆ ಕೆಲಸ,ಪಕ್ಷದ ಕೆಲಸ ಇರುತ್ತದೆ.ನಮಗೂ ಎರಡು ಕೆಲಸಗಳಿದ್ದು, ಎಲ್ಲರೂ ಒಟ್ಟಿಗೆ ಹೋಗುತ್ತಿದ್ದೇವೆ ಎಂದು ಹೇಳಿದರು.


ಇದನ್ನೂ ಓದಿ : ಲೋಕಾಯುಕ್ತರು ಸಿಬಿಐಗಿಂತ ಹೆಚ್ಚು ಹಿಂಸೆ ಕೊಡ್ತಿದ್ದಾರೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.