'ಬಿಜೆಪಿ ನಾಯಕರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ'-ಸಚಿವ ರಾಮಲಿಂಗಾರೆಡ್ಡಿ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ ಒತ್ತಡ ಇದ್ದು, ಅವರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದ್ದು, ರಾಜ್ಯಪಾಲರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

Written by - Manjunath N | Last Updated : Aug 17, 2024, 04:09 PM IST
  • ಎಚ್.ಡಿ ಕುಮಾರಸ್ವಾಮಿಯವರ ಗಣಿ ಹಗರಣದ ತನಿಖೆಗೆ ಲೋಕಾಯುಕ್ತ ಸಂಸ್ಥೆಯೇ ಅನುಮತಿ ಕೇಳಿದ್ದರೂ ರಾಜ್ಯಪಾಲರು ಕಳೆದ 10 ತಿಂಗಳಿಂದ ಕಡತವನ್ನು ಮೂಲೆಗೆ ತಳ್ಳಿ ಕೂತಿದ್ದಾರೆ.
  • ಶಶಿಕಲಾ ಜೊಲ್ಲೆಯ ಮೊಟ್ಟೆ ಹಗರಣದ ವಿರುದ್ಧದ ತನಿಖೆಗೆ ಅನುಮತಿ ಕೋರಿದ ಕಡತವನ್ನು ಸಹ ಸುಮಾರು 2 ವರ್ಷಗಳಿಂದ ರಾಜ್ಯಪಾಲರು ಬಾಕಿ ಉಳಿಸಿಕೊಂಡಿದ್ದಾರೆ.
'ಬಿಜೆಪಿ ನಾಯಕರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ'-ಸಚಿವ ರಾಮಲಿಂಗಾರೆಡ್ಡಿ ಕಿಡಿ title=
file photo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ ಒತ್ತಡ ಇದ್ದು, ಅವರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದ್ದು, ರಾಜ್ಯಪಾಲರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಈಗ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಟೀಕಾ ಪ್ರಹಾರ ನಡೆಸಿ ಅವರು ಸರಣಿ ಆರೋಪಗಳನ್ನು ಮಾಡಿದ್ದಾರೆ.

◘ ಎಚ್.ಡಿ ಕುಮಾರಸ್ವಾಮಿಯವರ ಗಣಿ ಹಗರಣದ ತನಿಖೆಗೆ ಲೋಕಾಯುಕ್ತ ಸಂಸ್ಥೆಯೇ ಅನುಮತಿ ಕೇಳಿದ್ದರೂ ರಾಜ್ಯಪಾಲರು ಕಳೆದ 10 ತಿಂಗಳಿಂದ ಕಡತವನ್ನು ಮೂಲೆಗೆ ತಳ್ಳಿ ಕೂತಿದ್ದಾರೆ.

ಇದನ್ನೂ ಓದಿ- ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ‍ ಘೋಷಿಸಿಕೊಂಡ ಈ ಹಳ್ಳಿಯ ಬಗ್ಗೆ ನಿಮಗೆಷ್ಟು ಗೊತ್ತು?

◘ ಶಶಿಕಲಾ ಜೊಲ್ಲೆಯ ಮೊಟ್ಟೆ ಹಗರಣದ ವಿರುದ್ಧದ ತನಿಖೆಗೆ ಅನುಮತಿ ಕೋರಿದ ಕಡತವನ್ನು ಸಹ ಸುಮಾರು 2 ವರ್ಷಗಳಿಂದ ರಾಜ್ಯಪಾಲರು ಬಾಕಿ ಉಳಿಸಿಕೊಂಡಿದ್ದಾರೆ.  

◘ ಮುರುಗೇಶ್‌ ನಿರಾಣಿ ಮಂತ್ರಿಯಾಗಿದ್ದಾಗ ಬೃಹತ್‌ ಕೈಗಾರಿಕೆ ಇಲಾಖೆ ವ್ಯಾಪ್ತಿಯಡಿ ಬರುವ ಮಾರ್ಕೆಟಿಂಗ್‌, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರ ನಡುವೆ ನಡೆದ ಅಕ್ರಮ ನೇಮಕಾತಿಯ ತನಿಖೆಗೆ ಅನುಮತಿ ಕೋರಿರುವ ಕಡತ ನಿದ್ರಾವಸ್ಥೆಯಲ್ಲಿದೆ. 

◘ ಜನಾರ್ಧನ್ ರೆಡ್ಡಿಯ ಗಣಿ ಹಗರಣದ ಕಡತ ರಾಜಭವನದಲ್ಲಿ ಧೂಳು ಹಿಡಿದಿದೆ.  

ಬಿಜೆಪಿ ಮತ್ತು ಮಿತ್ರಪಕ್ಷದ ಬಗೆದಷ್ಟು ಲೆಕ್ಕ ಹಾಕದಷ್ಟು ಹಗರಣಗಳ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜಭವನದಲ್ಲಿ ವರ್ಷಗಳಿಂದ ಇದ್ದು, ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರಾಜ್ಯಪಾಲರು ಸಿದ್ದರಾಮಯ್ಯ ನವರ ವಿಚಾರದಲ್ಲಿ ಮಾತ್ರ ತಮ್ಮ ಮಂತ್ರದಂಡವನ್ನು ಉಪಯೋಗಿಸಿ ಹೇಗಾದರೂ ಮಾಡಿ ಈ ಜನಪರ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಬೇಕೆಂದು ಹೊರಟಿರುವುದು ಕಾನೂನು ಬಾಹಿರವಾಗಿದ್ದು, ಇದು ನಮ್ಮ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ನಾಶ ಮಾಡುವ ಪ್ರಯತ್ನವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News