ಬೆಳಗಾವಿ:- ಸಂವಿಧಾನದ ವಿರುದ್ಧ ಬಿಜೆಪಿ, ಮಂತ್ರಿಗಳು, ಸಂಘಪರಿವಾರದ ಸದಸ್ಯರು ಷಡ್ಯಂತ್ರ ಮಾಡುವುದನ್ನ ನೋಡುತ್ತಿದ್ದೇವೆ. ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದಾಳಿ ನಡಸುತ್ತಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಮಂತ್ರಿಗಳಿಂದ ಶಾಂತಿ ಸುವ್ಯವಸ್ಥೆಗೆ ಭಂಗ ತರುತ್ತಿದ್ದಾರೆ ಎಂದು ವಿಧಾನಪರಿಷತ್‌ ವಿಪಕ್ಷನಾಯಕ ಬಿ.ಕೆ.ಹರಿಪ್ರಸಾದ್‌ ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

ಧಾರವಾಡದ ದೇವಸ್ಥಾನದ ಎದುರು ನಭಿಸಾಬಿ ಎಂಬ ವೃದ್ಧ ಮುಸ್ಲಿಂ ವೃದ್ದ ಓರ್ವರು ಕಲ್ಲಂಗಡಿ ವ್ಯಾಪಾರ ಮಾಡುತ್ತಿದ್ದನ್ನು ಶ್ರೀರಾಮ ಸೇನೆಯ ರಣಹೇಡಿಗಳು ಬಲವಂತದಿಂದ ಕಲ್ಲಂಗಡಿ ಹಣ್ಣನ್ನು ರಸ್ತೆಗೆ ಎಸೆದಿದ್ದಾರೆ.ಸಿಎಂ ಬೊಮ್ಮಾಯಿಗೆ ಮಾನವೀಯತೆ ಇದ್ರೆ ಶ್ರೀರಾಮ ಸೇನೆ ಗೂಂಡಾಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. 


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು. ಸ್ವಾತಂತ್ರ್ಯ ಹೋರಾಟಗಾರರ ಉದ್ದೇಶ ಶಾಂತಿ, ಸಹಬಾಳ್ವೆಯಿಂದ, ಸಹೋದರತೆಯಿಂದ ಬದುಕಬೇಕೆಂಬ ಆಶಯವಿತ್ತು. ಅವರ ಆಶಯಗಳಿಗೆ ವಿರುದ್ಧವಗಿ ರಾಷ್ಟ್ರವನ್ನು ಸ್ಥಾಪನೆ ಮಾಡಿದವರಿಗೂ ಅಪಮಾನ ಮಾಡುವಂತ ಘಟನೆ ನಡೆಯುತ್ತಿದೆ.


ಇದನ್ನೂ ಓದಿ: ಶೋಷಿತ ಸಮುದಾಯಗಳಿಗೆ ಮೀಸಲಾತಿ ನೀಡುವುದಕ್ಕೆ ಮೀನಾಮೇಷ ಮಾಡಬಾರದು- ಬಿ.ಕೆ.ಹರಿಪ್ರಸಾದ್


ಸ್ವಾತಂತ್ರ್ಯ ಹೋರಾಟ ಕೇವಲ ಒಂದು ಜಾತಿ, ಭಾಷೆ, ಪ್ರಾಂತ್ಯದ ವಿಚಾರ ಆಗಿರಲಿಲ್ಲ. ಲಕ್ಷಾಂತರ ಜನ ತ್ಯಾಗ ಬಲಿದಾನ ಮಾಡಿ ಸ್ವಾತಂತ್ರ್ಯ ಪಡೆದಿರುವಂತಹದ್ದು. ಅಲ್ಲದೇ ಮೊಟ್ಟಮೊದಲಿನ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದ್ದು ಬಹದೂರ್ ಎಸ್.ಜಾಫರ್. ಇದನ್ನು ಯಾರೂ ಸಹ ಮರೆಯಲು ಆಗೋದಿಲ್ಲ. ತದನಂತರ 1857ರಲ್ಲಿ ಝಾನ್ಸಿ ರಾಣಿ ಯಾವುದೇ ಧರ್ಮ, ಜಾತಿ, ಭಾಷೆ, ಪ್ರಾಂತ್ಯ ಲೆಕ್ಕಿಸದೇ ಸ್ವಾತಂತ್ರ್ಯ ಹೋರಾಟ ಮಾಡಿದ್ರು. ಏನೂ ನಿರೀಕ್ಷೆ ಇಲ್ಲದೇ ಈ ಭಾರತ ದೇಶವನ್ನ ನಮ್ಮ ಕೈಗೆ ಕೊಟ್ಟಿದ್ದಾರೆ. ಭಾರತ ದೇಶ ಉಳಿಸುವ ಕೆಲಸ ನಾವೆಲ್ಲ ಮಾಡಬೇಕಿದೆ. ಏನಾದರೂ ಒಳ್ಳೆಯ ಕೆಲಸ ಮಾಡೋಣ. ಮುಂದಿನ ಪೀಳಿಗೆಗೆ ಈ ಭಾರತ ದೇಶ ಸಂವಿಧಾನ ಕೊಟ್ಟು ಹೋಗಬೇಕು ಎಂದರು.  


ಇನ್ನು ಮುಂದುವರೆದು ಮಾತನಾಡಿದ ಅವರು, ಧಾರವಾಡ, ರಾಯಚೂರು, ಕೋಲಾರದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಲ್ಲೆ ಬಹುದೊಡ್ಡ ಷಡ್ಯಂತ್ರ. ಮೊದಲು ದಲಿತರ ಮೇಲೆ, ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿ, ಬಳಿಕ ಹಿಂದುಳಿದ ವರ್ಗದವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಈ ಮೂಲಕ ಮೀಸಲಾತಿ ರದ್ದು ಮಾಡಿ ಅವಕಾಶ ತಪ್ಪಿಸುವಂತಹ ಕೆಲಸ ನಡೀತಿದೆ. ಈಗ ಅಲ್ಪಸಂಖ್ಯಾತರ ಮೇಲೆ ನೇರವಾಗಿ ದೌರ್ಜನ್ಯ ನಡೆಸಿ, ಬಹುಸಂಖ್ಯಾತರ ಭಾವನೆ ಕೆರಳಿಸಿ ಕೆಲವು ಸಮುದಾಯಗಳನ್ನು ಎರಡನೇ ದರ್ಜೆ ನಾಗರಿಕರನ್ನಾಗಿಸಲು ಪ್ರಯತ್ನ ನಡೆಯುತ್ತಿದೆ.


ಇದನ್ನೂ ಓದಿ: ನಾನು ಹಿಂದೂ ಅಲ್ಲ- ಯಾರಾದ್ರು ಕೇಸ್‌ ಹಾಕಿದ್ರೆ ನನ್ನ ಪರವಾಗಿ ನ್ಯಾಯಮೂರ್ತಿ ಇದ್ದಾರೆ- ಕುಂ.ವೀರಭದ್ರಪ್ಪ


ಭ್ರಷ್ಟಾಚಾರದಲ್ಲಿ ಈ ಸರ್ಕಾರ ಮುಳುಗಿದೆ. ಹಿರಿಯ ಐಪಿಎಸ್ ಮಾಜಿ ಅಧಿಕಾರಿ ಸಚಿವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಭಾಷೆಗಳ ಮೇಲೆ ದಾಳಿ ಮಾಡಲು ಹೊರಟಿದೆ. ದೇಶದಲ್ಲಿ ಸಾವಿರಾರು ಭಾಷೆಗಳಿವೆ, ತ್ರಿ ಭಾಷಾ ಸೂತ್ರ ಅಳವಡಿಸಿಕೊಡಿದ್ದೇವೆ. ಕೋರ್ಟ್ ನಿಂದ ಗಡಿಪಾರದ ವ್ಯಕ್ತಿಯಿಂದ ನಾವು ಪಾಠ ಕಲಿಯಬೇಕಿಲ್ಲ. 


ಮನುಸ್ಮೃತಿ ಸಂವಿಧಾನ ಅಡಿಯಲ್ಲಿ ಪ್ರಬಲ ಜಾತಿ ಬಿಟ್ರೆ ಎಲ್ಲರೂ ಎರಡನೇ ದರ್ಜೆ ನಾಗರಿಕರು, ಅವರೆಲ್ಲ ಜೀತದಾಳರು, ಗುಲಾಮರು ಅನ್ನೋ ಭಾವನೆ ಮೂಡಿಸಲು ಬಿಜೆಪಿ,ಆರ್‌ಎಸ್ಎಸ್ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 


ದೇವಸ್ಥಾನದ ಹತ್ತಿರ ವ್ಯಾಪಾರ ಮಾಡಲು ಯಾರೂ ನಿರ್ಬಂಧ ಹೇರಕ್ಕಾಗಲ್ಲ. 2002ರಲ್ಲಿ ಕಾಂಗ್ರೆಸ್ ಪಕ್ಷ ಕಾನೂನು ತಂದಿದೆ ಅಂತಾ ಹೇಳಬಹುದು. ದೇವಾಲಯದ ಕಟ್ಟಡದಲ್ಲಿ ಅನ್ಯಧರ್ಮೀಯರು ಮಾತ್ರ ವ್ಯಾಪಾರ ಮಾಡಬಾರದು ಅಂತಾ ಇತ್ತು. ರಸ್ತೆಯಲ್ಲಿ ವ್ಯಾಪಾರ ಮಾಡಬಾರದು ಎಂದು ಹೇಳಿಲ್ಲ. ಬಿಜೆಪಿಗೆ ಅಷ್ಟೊಂದು ಕಳಕಳಿ ಇದ್ರೆ ಜಾತಿ ಹೆಸರಿನಲ್ಲಿ ಇರೋ ಹೋಟೆಲ್, ಮಾರ್ಕೆಟ್ ಮುಚ್ಚಲಿ ಎಂದು ಸವಾಲು ಹಾಕಿದರು. 


ಇದನ್ನೂ ಓದಿ: ಕಾಂಗ್ರೆಸ್ ವಿರೋಧಿ ಬಿಜೆಪಿ ಅಲ್ಲ, ಆರ್ ಎಸ್ ಎಸ್..! -ಬಿ.ಕೆ. ಹರಿಪ್ರಸಾದ್


130 ಕೋಟಿ ಭಾರತೀಯರಿಗೆ ಸಮಾನವಾದ ಹಕ್ಕು ಇದೆ. ಸಮಾನವಾದ ಅವಕಾಶ ಇದೆ ಅದನ್ನ ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ದೇಶದಲ್ಲಿ ಬೆಲೆ ಏರಿಕೆ ನಿರಂತರವಾಗಿ ಹೆಚ್ಚಾಗಿದೆ. ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕದಡಿದೆ.ರಾಷ್ಟ್ರದ ಗಡಿ ರಕ್ಷಣೆ ಮಾಡಲು ವಿಫಲರಾದ ಮೋದಿ ವೈಫಲ್ಯತೆ ಮುಚ್ಚಲು ಷಡ್ಯಂತ್ರ ಮಾಡಲಾಗುತ್ತಿದೆ. ಇದನ್ನು ಮರೆಮಾಚಲು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ವಿನಯ್ ನಾವಲಗಟ್ಟಿ ಉಪಸ್ಥಿತರಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.