"ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸುಗ್ರಿವಾಜ್ಞೆ ರಾಜ್ಯಪಾಲರ ಅಂಕಿತ ಸಂತಸದ ಸಂಗತಿ"

Written by - Prashobh Devanahalli | Edited by - Manjunath N | Last Updated : Oct 23, 2022, 11:38 PM IST
  • ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ಘನವೆತ್ತ ರಾಜ್ಯಪಾಲರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.
  • ಈ ಆಧ್ಯಾದೇಶಕ್ಕೆ ವಿಧಾನ ಮಂಡಲದ ಎರಡೂ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು
  • ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.
"ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸುಗ್ರಿವಾಜ್ಞೆ ರಾಜ್ಯಪಾಲರ ಅಂಕಿತ ಸಂತಸದ ಸಂಗತಿ" title=

ಬೆಂಗಳೂರು; ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ನ್ಯಾಯಮೂರ್ತಿ ನಾಹಮೋಹನದಾಸ ಅವರ ಶಿಫಾರಸ್ಸನ್ನು ಒಪ್ಪಿ ಆಧ್ಯಾದೇಶವನ್ನು ಮಾಡಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿರುವುದು ಗೊತ್ತಿದೆ. ಇದಕ್ಕೆ ಇಂದು ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವುದು ಸಂತಸದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.

ಇದನ್ನೂ ಓದಿ: Rohit Sharma: ಎಂಟು T20 ವಿಶ್ವಕಪ್ ನಲ್ಲಿ ಆಡಿದ ಟೀಂ ಇಂಡಿಯಾದ ಮೊದಲ ಸ್ಟಾರ್ ಆಟಗಾರ ಈತ!

ಈ ಕುರಿತು ಇಂದು ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಅನುಸೂಚಿತ ಜಾತಿಯ ಮೀಸಲಾತಿ ಪ್ರಮಾಣ 15 ರಿಂದ 17 ಕ್ಕೆ ಏರಲಿದ್ದು, ಅನುಸೂಚಿತ ಪಂಗಡಗಳ ಮೀಸಲಾತಿ ಪ್ರಮಾಣ ಶೇ 3 ರಿಂದ 7 ಕ್ಕೆ ಏರಿಸಲಾಗಿದೆ.ನಮ್ಮ ಸರ್ಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ದತೆಯಿದ ನಡೆದುಕೊಂಡಿದೆ.ಈ ಮೂಲಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ಕೊಟ್ಟಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Rohit Sharma Emotional Expression: ರಾಷ್ಟ್ರಗೀತೆ ಕೇಳುತ್ತಿದ್ದಂತೆ ಮೈದಾನದಲ್ಲೇ ಕಣ್ಣೀರು ಹಾಕಿದ ರೋಹಿತ್ ಶರ್ಮಾ! ವಿಡಿಯೋ ನೋಡಿ

ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ಘನವೆತ್ತ ರಾಜ್ಯಪಾಲರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.ಈ ಆಧ್ಯಾದೇಶಕ್ಕೆ ವಿಧಾನ ಮಂಡಲದ ಎರಡೂ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News