CM Siddaramaiah: ಖಾಸಗಿ ಸಂಸ್ಥೆಗಳ ಎಫ್‌ಎಸ್‌ಎಲ್ ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. 


COMMERCIAL BREAK
SCROLL TO CONTINUE READING

ಇಂದು  ಉತ್ತರ ಕನ್ನಡ  ಜಿಲ್ಲೆಯ ಶಿರಸಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಖಾಸಗಿ ಸಂಸ್ಥೆಯೊಂದರ ಎಫ್‌ಎಸ್‌ಎಲ್ ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸಿದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. 


ಇದನ್ನೂ ಓದಿ- ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಮರಳು ಮಾಡಿ ಅಧಿಕಾರ ನಡೆಸುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ಸಂದರ್ಭದಲ್ಲಿ ಖಾಸಗಿ ಸಂಸ್ಥೆ ನೀಡುವ ಎಫ್‌ಎಸ್‌ಎಲ್ ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 


ಇದನ್ನೂ ಓದಿ- ನನ್ನ ಅಧಿಕಾರಾವಧಿಯಲ್ಲಿ LOCಗಾಗಿ ಯಾರಾದರೂ ನನಗೆ ಐದು ಪೈಸೆ ಲಂಚ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ ಸವಾಲು


ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಆದ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ. ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು. ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್  ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.  ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.