ಬೆಂಗಳೂರು : ಕ್ರೀಡಾಇಲಾಖೆಯ ಅಪರಮುಖ್ಯಕಾರ್ಯದರ್ಶಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಯೋಜನೆಗೆ ಮುಂದಿನ ಸಚಿವಸಂಪುಟದಲ್ಲಿ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪದವೀಧರರಾದ ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ ಉದ್ಯೋಗ ನೀಡಲಾಗುವುದು  ಎಂದು ಅವರು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಏಕಲವ್ಯ ಕ್ರೀಡಾ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಮಾತನಾಡುತ್ತಿದ್ದರು. ಪದವೀಧರರಾಗಿರುವ ಏಷಿಯನ್ ಗೇಮ್ಸ್ ಹಾಗೂ ಕಾಮನ್ ವೆಲ್ತ್ ಪದಕ ವಿಜೇತರಿಗೆ ಗ್ರೂಪ್ ಬಿ ಉದ್ಯೋಗ, ಇದಕ್ಕಿಂತ ಕಡಿಮೆ ಸ್ತರದ ಕ್ರೀಡಾಕೂಟದ ಪದಕವಿಜೇತರಿಗೆ ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಉದ್ಯೋಗವನ್ನು ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡುವ ನೀತಿ ಕರ್ನಾಟಕದ ಹೊರತು ಬೇರೆ ಯಾವುದೇ ರಾಜ್ಯದಲ್ಲಿಲ್ಲ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ. 


ಇದನ್ನೂ ಓದಿ : “ಶೀಘ್ರವೇ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸಿ”: ಸಚಿವ ಸೋಮಣ್ಣ ಖಡಕ್ ಸೂಚನೆ


ರಾಜ್ಯ ಸರ್ಕಾರದಿಂದ 75 ಕ್ರೀಡಾಪಟುಗಳಿಗೆ ತರಬೇತಿ :
ಕಳೆದ ಆಗಸ್ಟ್ 15 ರಂದು 75 ಕ್ರೀಡಾಪಟುಗಳನ್ನು ದತ್ತುಪಡೆದು, ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ತರಬೇತಿ ನೀಡಲಾಗುತ್ತಿದೆ. 4 ವರ್ಷದ ತರಬೇತಿ, ಉತ್ತಮ ತರಬೇತಿದಾರರು, ಶಾಲಾ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 10 ಲಕ್ಷ ವಿನಿಯೋಗಿಸಲಾಗಿದ್ದು, ಅವಶ್ಯಕತೆಗೆ ಅನುಸಾರ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು ಉತ್ತಮ ಸಾಧನೆಗಳನ್ನು ಮಾಡಬೇಕು ಎಂದು ಆಶಿಸಿದ್ದಾರೆ. 


ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆಗೆ ಯುವನೀತಿ :
ಮುಂದಿನ ದಿನಗಳಲ್ಲಿ ಯುವನೀತಿಯನ್ನು ತರಲಾಗುವುದು. ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆ ಪ್ರಮುಖವಾಗಿದ್ದು, ಇವೆರಡಕ್ಕೂ ಸಮಾನ ಮಹತ್ವವನ್ನು ನೀಡುವಂತಹ ನೀತಿಯನ್ನು ರೂಪಿಸಲಾಗುತ್ತಿದೆ. ಕ್ರೀಡೆಗೆ ದೇಹದ ಹಾಗೂ ಮನಸ್ಸಿನ ಆರೋಗ್ಯದ ಜೊತೆಗೆ ಗೆಲ್ಲಲೇಬೇಕೆಂದು ಆಡುವುದು ಬಹಳ ಮುಖ್ಯ. ಕೇವಲ ಸೋಲಬಾರದು ಎಂದು ಆಡುವ ಭಾವನೆ ಕ್ರೀಡಾಪಟುಗಳಲ್ಲಿರಬಾರದು. ಗೆಲ್ಲಲೇಬೇಕೆಂಬ ಸಕಾರಾತ್ಮಕ ಭಾವನೆಯಿಂದ ಆಡಿದರೆ ಗೆಲುವು ನಿಮ್ಮದಾಗುತ್ತದೆ ಎಂದು ಕಿವಿ ಮಾತು ಹೇಳಿದ್ದಾರೆ. ರಾಜ್ಯ ಸರ್ಕಾರ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಬಹಳ ಮಹತ್ವ ನೀಡುತ್ತಿದೆ. ಗೃಹ ಇಲಾಖೆಯ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ರ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ.  ರಾಜ್ಯ ಸರ್ಕಾರದಲ್ಲಿ ಕ್ರೀಡೆಗಳಿಗೆ ಪ್ರಾಶಸ್ತ್ಯ ನೀಡುವ ನಾಯಕರು, ಆಡಳಿತಗಾರರು ನಮ್ಮಲ್ಲಿದ್ದಾರೆ. ಇದರಿಂದಾಗಿ ಕ್ರೀಡೆಗೆ ಉತ್ತೇಜನ ನೀಡುವಂತಹ ನೀತಿಗಳನ್ನು ಜಾರಿಗೆ ತರಲು ಸಾಧ್ಯವಾಗಿದೆ ಎಂದಿದ್ದಾರೆ. 


ಇದನ್ನೂ ಓದಿ : ಡಾ.ಬಿ.ಆರ್.ಅಂಬೇಡ್ಕರ್ 66ನೇ ಪರಿನಿಬ್ಬಾಣ: ನ್ಯಾಷನಲ್ ಕಾಲೇಜಿನಲ್ಲಿ ಬೃಹತ್ ಸಮಾವೇಶ


ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ:
ಗ್ರಾಮಗಳಲ್ಲಿ ನಿಜವಾದ ಕ್ರೀಡಾಪ್ರತಿಭೆಗಳಿದ್ದು, ಅವರಿಗೆ ಸೂಕ್ತ ತರಬೇತಿ ನೀಡಿದ್ದಲ್ಲಿ ಮಹತ್ತರ ಸಾಧನೆಗಳನ್ನು ಮಾಡಲು ಶಕ್ತರಾಗಿರುತ್ತಾರೆ. ಆದ್ದರಿಂದ ಗ್ರಾಮ, ತಾಲ್ಲೂಕು, ಜಿಲ್ಲಾಪಂಚಾಯತಿ ಹಂತಗಳಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಈ ವರ್ಷದಿಂದ ಪ್ರಾರಂಭಿಸಲಾಗಿದ್ದು, ಕೋಕೋ, ಕಬ್ಬಡ್ಡಿ, ಕುಸ್ತಿ, ವಾಲಿಬಾಲ್, ಕಂಬಳ ದಂತಹ ಕ್ರೀಡೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.