ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

ಬೆಂಗಳೂರಿನ ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಟ್ಟೇಗಾರ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ಚಾಲನೆ ನೀಡಿದರು.

Written by - Ranjitha R K | Last Updated : Jul 22, 2024, 03:24 PM IST
  • ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಚಾಲನೆ
  • ದೇಶದಲ್ಲಿಯೇ ಪ್ರಪ್ರಥಮ ಪ್ರಯತ್ನ
  • ಗೋವಿಂದರಾಜನಗರ ಕ್ಷೇತ್ರದ ಪಟ್ಟೇಗಾರದ‌ ಅಂಗನವಾಡಿ ಕೇಂದ್ರದಲ್ಲಿ ಚಾಲನೆ
ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಚಾಲನೆ  title=

ಬೆಂಗಳೂರು : ಇಡೀ ದೇಶದಲ್ಲೆ ಪ್ರಪ್ರಥಮ ಬಾರಿಗೆ ಸರ್ಕಾರಿ ಮಾಂಟೆಸ್ಸರಿ (L.K.G, UKG) ತರಗತಿಗಳಿಗೆ  ಚಾಲನೆ ಸಿಕ್ಕಿದೆ. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಸರ್ಕಾರಿ ಮಾಂಟೆಸ್ಸರಿ ಶಾಲೆಗಳಿಗೆ ಚಾಲನೆ ನೀಡಿದರು.ಬೆಂಗಳೂರಿನ ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಟ್ಟೇಗಾರ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ಚಾಲನೆ ನೀಡಿದರು.

ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಚಾಲನೆ ನೀಡಿದ್ದು, ಇನ್ನು ಮುಂದೆ ನಮ್ಮ ಪುಟಾಣಿಗಳು ಅಂಗನವಾಡಿ ಕೇಂದ್ರಗಳಲ್ಲೇ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದಲ್ಲಿ ಪಾಠ ಕಲಿಯಲಿದ್ದಾರೆ.ಇಂದು ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಹಾಗೂ ರಾಜ್ಯಾದ್ಯಂತ 500 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ. 

ಇದನ್ನೂ ಓದಿ : 2028ಕ್ಕೆ ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಹೇಶ್

ಈ ವೇಳೆ,ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಕಲಾಂಗ ಇಲಾಖೆಯ ಆಯುಕ್ತರಾದ ದಾಸ್ ಸೂರ್ಯವಂಶಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸೇರಿದಂತೆ ಇಲಾಖೆಯ ಅಧಿಕಾರಿಗಳು, ಕಾವೇರಿಪುರ ವಾರ್ಡ್ ನ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ : ನಮ್ಮ ಹೆಮ್ಮೆಯ ಸೈನಿಕರಿಗೆ ಡಿ.ಕೆ.ಶಿವಕುಮಾರ್ ಅಪಮಾನ ಮಾಡಿದ್ದಾರೆ: ಎಚ್‌ಡಿಕೆ ಆಕ್ರೋಶ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

 

Trending News