ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ
ಬೆಂಗಳೂರಿನ ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಟ್ಟೇಗಾರ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ಚಾಲನೆ ನೀಡಿದರು.
ಬೆಂಗಳೂರು : ಇಡೀ ದೇಶದಲ್ಲೆ ಪ್ರಪ್ರಥಮ ಬಾರಿಗೆ ಸರ್ಕಾರಿ ಮಾಂಟೆಸ್ಸರಿ (L.K.G, UKG) ತರಗತಿಗಳಿಗೆ ಚಾಲನೆ ಸಿಕ್ಕಿದೆ. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಸರ್ಕಾರಿ ಮಾಂಟೆಸ್ಸರಿ ಶಾಲೆಗಳಿಗೆ ಚಾಲನೆ ನೀಡಿದರು.ಬೆಂಗಳೂರಿನ ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಟ್ಟೇಗಾರ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ಚಾಲನೆ ನೀಡಿದರು.
ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಚಾಲನೆ ನೀಡಿದ್ದು, ಇನ್ನು ಮುಂದೆ ನಮ್ಮ ಪುಟಾಣಿಗಳು ಅಂಗನವಾಡಿ ಕೇಂದ್ರಗಳಲ್ಲೇ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದಲ್ಲಿ ಪಾಠ ಕಲಿಯಲಿದ್ದಾರೆ.ಇಂದು ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಹಾಗೂ ರಾಜ್ಯಾದ್ಯಂತ 500 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ.
ಇದನ್ನೂ ಓದಿ : 2028ಕ್ಕೆ ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಹೇಶ್
ಈ ವೇಳೆ,ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಕಲಾಂಗ ಇಲಾಖೆಯ ಆಯುಕ್ತರಾದ ದಾಸ್ ಸೂರ್ಯವಂಶಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸೇರಿದಂತೆ ಇಲಾಖೆಯ ಅಧಿಕಾರಿಗಳು, ಕಾವೇರಿಪುರ ವಾರ್ಡ್ ನ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ : ನಮ್ಮ ಹೆಮ್ಮೆಯ ಸೈನಿಕರಿಗೆ ಡಿ.ಕೆ.ಶಿವಕುಮಾರ್ ಅಪಮಾನ ಮಾಡಿದ್ದಾರೆ: ಎಚ್ಡಿಕೆ ಆಕ್ರೋಶ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ