ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ 3 ವಾರಗಳಲ್ಲಿ ಅಧ್ಯಕ್ಷ ಮತ್ತು ಸದಸ್ಯರ ನೇಮಕ ಹೈಕೋರ್ಟ್ಗೆ ಸರ್ಕಾರ ಭರವಸೆ
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮೇಲ್ಮನವಿ ನ್ಯಾಯಾಧಿಕರಣಕ್ಕೆ ಮುಂದಿನ ಮೂರು ವಾರಗಳಲ್ಲಿ ಅಧ್ಯಕ್ಷರು ಮತ್ತು ಸದಸ್ಯರನ್ನು ಮುಂದಿನ ಮೂರು ವಾರಗಳಲ್ಲಿ ಭರ್ತಿ ಮಾಡುವುದಾಗಿ ಹೈಕೋರ್ಟ್ಗೆ ಸರ್ಕಾರ ಭರವಸೆ ನೀಡಿದೆ.
ಬೆಂಗಳೂರು: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮೇಲ್ಮನವಿ ನ್ಯಾಯಾಧಿಕರಣಕ್ಕೆ ಮುಂದಿನ ಮೂರು ವಾರಗಳಲ್ಲಿ ಅಧ್ಯಕ್ಷರು ಮತ್ತು ಸದಸ್ಯರನ್ನು ಮುಂದಿನ ಮೂರು ವಾರಗಳಲ್ಲಿ ಭರ್ತಿ ಮಾಡುವುದಾಗಿ ಹೈಕೋರ್ಟ್ಗೆ ಸರ್ಕಾರ ಭರವಸೆ ನೀಡಿದೆ.
ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಮುಖ್ಯಸ್ಥರನ್ನು ನೇಮಿಸುವಂತೆ ಕೋರಿ ಬೆಂಗಳೂರಿನ ಮ್ಯಾಥ್ಯೂ ಥಾಮಸ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಹಾಜರಾಗಿದ್ದ ರಾಜ್ಯ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ರೇರಾದ ಒಬ್ಬ ಸದಸ್ಯರು 2024ರ ಏಪ್ರಿಲ್ ತಿಂಗಳಲ್ಲಿ ನಿವೃತ್ತರಾಗಲಿದ್ದಾರೆ. ಆ ಹುದ್ದೆಯೂ ಸೇರಿದಂತೆ ಅಧ್ಯಕ್ಷರೂ ಸೇರಿದಂತೆ ಎಲ್ಲ ಸದಸ್ಯರನ್ನು ಭತಿ ಮಾಡುವುದಾಗಿ ಭರವಸೆ ನೀಡಿದ್ದರು.
ಇದನ್ನೂ ಓದಿ: 2 ಎಕರೆಯಲ್ಲಿ ಪೇರು ಹಣ್ಣು ಬೆಳೆದು 30 ಲಕ್ಷ ರೂ ಆದಾಯ: ನಿಡೋಣಿ ರೈತನ ಯಶೋಗಾಥೆ..!
ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ರೇರಾದ ಅಧ್ಯಕ್ಷರು ಮತ್ತು ಸದಸ್ಯರ ನೇಮಕದಲ್ಲಿ ಯಾವುದೇ ರೀತಿಯ ವಿಳಂಬವಿಲ್ಲದೆ ನೇಮಕ ಮಾಡುವ ಪ್ರಕ್ರಿಯೆ ಪ್ರಾರಂಭಿಸಬೇಕು, ಅವರು ಸದಸ್ಯರ ನಿವೃತ್ತಿಯ ನಂತರ ತಕ್ಷಣವೇ ಅಧಿಕಾರ ವಹಿಸಿಕೊಳ್ಳುವಂತಿರಬೇಕು. ಯಾವುದೇ ರೀತಿಯ ವಿಳಂಬ ಮಾಡಬಾರದು ಎಂದು ಪೀಠ ತಿಳಿಸಿ ವಿಚಾರಣೆಯನ್ನು ಮುಂದೂಡಿತು.
ಈ ಹಿಂದೆ ನಡೆದ ವಿಚಾರಣೆ ವೇಳೆ, ನ್ಯಾಯಪೀಠ, ನ್ಯಾಯಾಧಿಕರಣಕ್ಕೆ ಅಧ್ಯಕ್ಷರನ್ನು ನೇಮಿಸಲು ಹಾಗೂ ಅಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಕ್ರಮಕೈಗೊಂಡಿಲ್ಲ. ರೇರಾದ ಸೆಕ್ಷನ್ 22ರ ಪ್ರಕಾರ ರಾಜ್ಯ ಸರ್ಕಾರ ಹುದ್ದೆಗಳನ್ನು ತುಂಬಿದರೆ ಪ್ರಕ್ರಿಯೆ ಮುಂದುವರಿಯಲಿದೆ. ರೇರಾ ಹೊರಡಿಸಿದ ಆದೇಶಗಳನ್ನು ಕಾಯಿದೆಯ ಸೆಕ್ಷನ್ 44(5)ರ ಅಡಿ ಪ್ರಶ್ನಿಸಬಹುದಾಗಿದೆ. ಮೇಲ್ಮನವಿ ನ್ಯಾಯಾಧಿಕರಣವು 60 ದಿನಗಳ ಒಳಗಾಗಿ ಮೇಲ್ಮನವಿ ಇತ್ಯರ್ಥಪಡಿಸಬೇಕು.ಆದರೆ, ನ್ಯಾಯಾಧಿಕರಣಕ್ಕೆ ಅಧ್ಯಕ್ಷರನ್ನು ನೇಮಕ ಮಾಡದಿರುವುದರಿಂದ ಸಕ್ಷಮ ಪ್ರಾಧಿಕಾರ ಮಾಡಿದ ಆದೇಶಗಳನ್ನು ಬಿಲ್ಡರ್ಸ್ಗಳು ಹೈಕೋರ್ಟ್ಗೆ ಸಲ್ಲಿಸುತ್ತಿದ್ದಾರೆ.
ಅಲ್ಲದೆ, ಈ ಎಲ್ಲ ಅರ್ಜಿಗಳು ನ್ಯಾಯಾಧಿಕರಣದ ಮುಂದೆ ಸಲ್ಲಿಸಬೇಕಾಗಿದೆ. ನ್ಯಾಯಾಧಿಕರಣ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಏಕೈಕ ಕಾರಣಕ್ಕೆ ಈ ನ್ಯಾಯಾಲಯದಲ್ಲಿ ಸಾಕಷ್ಟು ಅರ್ಜಿಗಳು ಬಾಕಿ ಉಳಿದಿವೆ. ರಾಜ್ಯ ಸರ್ಕಾರವು ಅಧ್ಯಕ್ಷರನ್ನು ನೇಮಕ ಮಾಡದಿರುವುದರಿಂದ ನ್ಯಾಯಾಧಿಕರಣ ಕೆಲಸ ಮಾಡುತ್ತಿಲ್ಲ. ಹೀಗಾಗಿ, ಮೇಲ್ನೋಟಕ್ಕೆ ಹೈಕೋರ್ಟ್‌ನಲ್ಲಿ ಬಾಕಿ ಪ್ರಕರಣ ಹೆಚ್ಚಲು ಕಾರಣವಾಗುತ್ತಿದೆ ಎಂದು ಪೀಠ ತಿಳಿಸಿದೆ.
ಇದನ್ನೂ ಓದಿ: ಕಾಲೇಜು ಅಡಳಿತ ಮಂಡಳಿಯಿಂದ ಹಿಂಸೆ ಆರೋಪ: ಆತ್ಮಹತ್ಯೆಗೆ ವಿದ್ಯಾರ್ಥಿ ಶರಣು
ಪ್ರಕರಣದ ಹಿನ್ನೆಲೆ ಏನು?
2021ರ ಮಾರ್ಚ್ ೧೭ರಂದು ನಿರ್ಮಾಣ ಯೋಜನೆಯೊಂದಕ್ಕೆ ಸಂಬಂಧಿಸಿದಂತೆ ರೇರಾ ರಿಯಲ್ಎಸ್ಟೇ ಸಂಸ್ಥೆಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಂಸ್ಥೆ ನ್ಯಾಯಾಧಿಕರಣದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಅದನ್ನು ಪುರಸ್ಕರಿಸಿ ಪ್ರಕರಣವನ್ನು ರೇರಾಕ್ಕೆ ಮರಳಿಸಲಾಗಿತ್ತು. ಆನಂತರ ರೇರಾ ಮತ್ತೆ 2022ರ ಸೆಪ್ಟೆಂಬರ್ 2ರಂದು ಅರ್ಜಿದಾರರ ಪರವಾಗಿ ಆದೇಶಿಸಿದ್ದು, ಇದನ್ನು ಪ್ರಶ್ನಿಸಿ 2023ರ ಫೆಬ್ರವರಿ 2ರಂದು ಸಂಸ್ಥೆ ನ್ಯಾಯಾಧಿಕರಣದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ನ್ಯಾಯಾಧಿಕರಣ ರಚನೆಯಾಗದಿರುವುದರಿಂದ ಅದು ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಅರ್ಜಿದಾರರು ನ್ಯಾಯಾಧಿಕರಣದಲ್ಲಿ ಬಾಕಿ ಇರುವ ಹುದ್ದೆಗಳನ್ನು ತುಂಬುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. 2023ರ ಜೂನ್ 2 ರಂದು ನ್ಯಾಯಾಧಿಕರಣವು ಖಾಲಿಯಿದ್ದು, ಅರ್ಜಿದಾರರು ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಸದಸ್ಯರು ಮತ್ತು ಅಧ್ಯಕ್ಷರನ್ನು ನೇಮಿಸುವಂತೆ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಅರ್ಜಿದಾರರು ಹೈಕೋರ್ಟ್ ಕದತಟ್ಟಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ