ಮಾತ್ರೆ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಆನೆ ಕಾಲು ರೋಗ ತಡೆ ಮಾತ್ರೆ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿಯ ತಾಲ್ಲೂಕಿನ  ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಶೆಟ್ಟಿಗೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಆನೆಕಾಲು ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಬಳಿಕ ಕೆಲವು ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಆರಂಭವಾಗಿ, ಸುಮಾರು 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದರಿಂದ ತಕ್ಷಣ ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇದನ್ನೂ ಓದಿ- 243 ವಾರ್ಡ್ ಗಳಲ್ಲಿ ನೂತನ ಗ್ರಂಥಾಲಯ ತೆರೆಯಲು ಪಾಲಿಕೆ ಚಿಂತನೆ


ಪ್ರಾಥಮಿಕ ವೈದ್ಯಾಧಿಕಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ:
ಇನ್ನು ಶೆಟ್ಟಿಗೇರಿ ಗ್ರಾಮದ ಸಮೀಪದ ಕೌಳೂರ ಪ್ರಾಥಮಿಕ ವೈದ್ಯಾಧಿಕಾರಿ ತಕ್ಷಣ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿಲ್ಲ, ಮಕ್ಕಳು ವಾಂತಿ-ಭೇದಿಯಿಂದ ಪರದಾಡುತ್ತಿದ್ದ ಸಂದರ್ಭದಲ್ಲಿ ವೈದ್ಯರು ಸರಿಯಾಗಿ ಸ್ಪಂದನೆ ನೀಡಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.


ಇದನ್ನೂ ಓದಿ- DK Shivakumar : 'ರಾಜ್ಯ ಸರ್ಕಾರದ ಲೋಪಗಳ ಬಗ್ಗೆ ಪಿಎಂಗೆ ಪತ್ರ, ಇದಕ್ಕೆ ಪ್ರಧಾನಿಗಳು ಉತ್ತರ ನೀಡಬೇಕು'


ವೈದ್ಯಾಧಿಕಾರಿ ವಿರುದ್ಧ ಪ್ರತಿಭಟನೆ:
ಗ್ರಾಮಕ್ಕೆ ಅನುಕೂಲವಾಗುವಂತೆ ಪ್ರಾಥಮಿಕ ಆಸ್ಪತ್ರೆ ಇದ್ದರೂ ಸಹ ಸೂಕ್ತ ಸಮಯದಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ದೊರೆಯಲಿಲ್ಲ, ಇದಕ್ಕೆ ಪ್ರಾಥಮಿಕ ವೈದ್ಯಾಧಿಕಾರಿಯೇ ನೇರ ಹೊಣೆ ಎಂದು ಕೌಳೂರ ವೈದ್ಯಾಧಿಕಾರಿ ಸುನೀಲ್ ರಾಯಚೂರಕರ್ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಜಯ ಕರ್ನಾಟಕ ಸಂಘಟನೆ  ಕಾರ್ಯಕರ್ತರಿಂದ ‌ವೈದ್ಯಾಧಿಕಾರಿ ವಿರುದ್ಧ ಪ್ರತಿಭಟನೆ ಸಹ ನಡೆದಿದೆ.


ಏನಿದು ಆನೆಕಾಲು ಮಾತ್ರೆ:
ಆನೆಕಾಲು ರೋಗ ಬರದಂತೆ ತಡೆಯುವ ಸಲುವಾಗಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ವತಿಯಿಂದ ಈ ಮಾತ್ರೆಯನ್ನು ನೀಡಲಾಗುತ್ತದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.