ಮೈಸೂರು: ಲೋಕಾಯುಕ್ತಕ್ಕೆ ಮೂಲ ಸ್ವರೂಪ ನೀಡಲು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾವ ನಾಯಕರು ಮುಂದಾಗುತ್ತಿಲ್ಲ. ಏಕೆಂದರೆ ಮೂರು ಪಕ್ಷಗಳ ನಾಯಕರಿಗೂ ಲೋಕಾಯುಕ್ತದ ಬಗ್ಗೆ ಭಯವಿದೆ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ನುಡಿದರು.
ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ಕರ್ನಾಟಕದಲ್ಲಿ ಭ್ರಷ್ಟಾಚಾರ ನಿಗ್ರಹ ಮಾಡುವ ನಿಟ್ಟಿನಲ್ಲಿ ಹೈಕೋರ್ಟ್ ಬೀಸಿದ ಚಾಟಿಯಿಂದಾಗಿ ಓರ್ವ ಜಿಲ್ಲಾಧಿಕಾರಿ, ಓರ್ವ ಐಪಿಎಸ್ ಅಧಿಕಾರಿಯೇ ಜೈಲು ಸೇರಿದ್ದಾರೆ. ಬೆಕ್ಕಿಗೆ ನಾನೇ ಗಂಟೆ ಕಟ್ಟುತ್ತೇನೆಂದು ನಾಡಿನ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹೇಳಿದ್ದಾರೆ. ಇದು ಜನ ಸಾಮಾನ್ಯರಲ್ಲಿ ನ್ಯಾಯಾಂಗದ ಬಗ್ಗೆ ನಂಬಿಕೆ ಹುಟ್ಟಿಸಿದೆ. ಅದಕ್ಕೆ ನಾನು ಅವರನ್ನು ಅಭಿನಂದಿಸುತ್ತೇನೆ ಎಂದರು.
ಇದನ್ನೂ ಓದಿ- ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಮುಂದುವರೆಯಲಿ: ಭಾಸ್ಕರ್ ರಾವ್
ಶಾಸಕಾಂಗ, ಕಾರ್ಯಾಂಗ ವಿಫಲವಾದಾಗ ನ್ಯಾಯಾಂಗ ತನ್ನ ಮಹತ್ವದ ಕಾರ್ಯ ಮಾಡಿ ತೋರಿಸಿದೆ. ಭ್ರಷ್ಟಾಚಾರ ನಿಗ್ರಹ ದಳ, ಸಿಒಡಿಗೆ ಮುಕ್ತ ಅವಕಾಶ ನೀಡಿದ್ದರಿಂದ 30 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಜೈಲು ಪಾಲಾಗಿದ್ದಾರೆ ಎಂದವರು ತಿಳಿಸಿದರು.
ಇದನ್ನೂ ಓದಿ- ಪೋಷಕರಿಗೆ ಮತ್ತೊಂದು ದರ ಏರಿಕೆ ಬಿಸಿ : ವಾಹನ ಶುಲ್ಕ ಹೆಚ್ಚಳಕ್ಕೆ ಖಾಸಗಿ ಶಾಲೆಗಳ ನಿರ್ಧಾರ
1984ರಲ್ಲಿ ಲೋಕಪಾಲ್ ಕೇಂದ್ರಕ್ಕೆ ಬೇಕು, ಲೋಕಾಯುಕ್ತ ರಾಜ್ಯಕ್ಕೆ ಬೇಕು ಎಂದು ಮೊರಾರ್ಜಿಬಾಯ್ ನೇತೃತ್ವದ ಸಮಿತಿ ಶಿಫಾರಸ್ಸು ಮಾಡಿತ್ತು. ಪರಿಣಾಮ ನಮ್ಮ ರಾಜ್ಯದಲ್ಲೂ ಬಲಿಷ್ಠ ಲೋಕಾಯುಕ್ತವಿತ್ತು. ದುರದೃಷ್ಟವಶಾತ್ ಮುಚ್ಚಿಹೋಗಿದ್ದ ಲೋಕಾಯುಕ್ತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮರುಜೀವ ನೀಡಿದ್ದಾರೆ. ಲೋಕಾಯುಕ್ತಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು. ಲೋಕಾಯುಕ್ತರಿಗೆ ಪರಮಾಧಿಕಾರ ಕೊಡಬೇಕು ಎಂದು ಎಚ್ ವಿಶ್ವನಾಥ್ ಆಗ್ರಹಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.