ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಲಿ -ಪ್ರಿಯಾಂಕ್ ಖರ್ಗೆ

ರಾಜ್ಯದಲ್ಲಿರುವ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ  ಕಾರ್ಯ ನಿರ್ವಹಿಸುತ್ತಿರುವ ನೌಕರರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕೆಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

Last Updated : May 15, 2021, 04:11 PM IST
  • ರಾಜ್ಯದಲ್ಲಿರುವ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕೆಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
  ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಲಿ -ಪ್ರಿಯಾಂಕ್ ಖರ್ಗೆ  title=
Photo Courtesy: Facebook

ಬೆಂಗಳೂರು: ರಾಜ್ಯದಲ್ಲಿರುವ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ  ಕಾರ್ಯ ನಿರ್ವಹಿಸುತ್ತಿರುವ ನೌಕರರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕೆಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

ಸಿಎಂ ಬಿ.ಎಸ್ ಯಡಿಯೂರಪ್ಪ ನವರಿಗೆ ಪತ್ರ ಬರೆದಿರುವ ಪ್ರಿಯಾಂಕ್ ಖರ್ಗೆ ಅವರು "ಕೊರೋನಾ ಸಾಂಕ್ರಾಮಿಕವು ರಾಜ್ಯವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ದಿನಂಪ್ರತಿ ಸಾವಿರಾರು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಈ ಸಮಯದಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ನರ್ಸ್‌ಗಳು ಹಾಗೂ ಡಿ ಗ್ರೂಪ್ ನೌಕರರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಸೋಂಕಿತರ ಆರೈಕೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Covaxin, Covishield, Sputnik-V: ಭಾರತದ ಬಳಿ ಮೂರು ಅಸ್ತ್ರಗಳು, ಯಾವುದು ಎಷ್ಟು ಪರಿಣಾಮಕಾರಿ?

"ಇವರಲ್ಲಿ ಹಲವರು ಕೊರೋನಾ ಸೋಂಕಿಗೆ ಒಳಗಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇವರಿಗೆ ಗುತ್ತಿಗೆ ಆಧಾರದ ನೆಪವೊಡ್ಡಿ ವೈದ್ಯಕೀಯ ವೆಚ್ಚವನ್ನು ರಾಜ್ಯ ಸರ್ಕಾರವು ಮರುಪಾವತಿಸದೇ ಅನ್ಯಾಯವೆಸಗುತ್ತಿದೆ.ತಮ್ಮ ಕುಟುಂಬದ ಯೋಗಕ್ಷೇಮವನ್ನೂ ಲೆಕ್ಕಿಸದೇ, ದಿನವಿಡೀ ಸೋಂಕಿತರ ಆರೈಕೆ ಮಾಡುತ್ತಿರುವ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೈದ್ಯಕೀಯ ವೆಚ್ಚವನ್ನು ಭರಿಸುವಂತೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರಿಗೆ ಪತ್ರ ಬರೆದು ಆಗ್ರಹಿಸಿದ್ದೇನೆ " ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ವರ್ಷ ಕೊರೊನಾ ಭಾರಿ ಅಪಾಯಕಾರಿಯಾಗಿರಲಿದೆ-WHO ಎಚ್ಚರಿಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News