ಮೈಸೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಶನಿವಾರ ಮೈಸೂರು ಅರಮನೆಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
‘ರಾಜ್ಯ ವಿಧಾನಸಭಾ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 2.50 ಹುದ್ದೆಗಳು ಖಾಲಿ ಇವೆ. ಈಗಾಗಲೇ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಅವರು ತಿಳಿಸಿದರು.
ಇದನ್ನೂ ಓದಿ: ಕರುನಾಡಿಗೆ ಆಪತ್ತು, ಜನರ ಅಕಾಲ ಮೃತ್ಯು: ಕೋಡಿಮಠದ ಶ್ರೀ
ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಕರ ನೇಮಕಾತಿ ಮಾಡಲಾಗುವುದು. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳು ಖಾಲಿ ಇದ್ದು, ಮೊದಲನೇ ಹಂತದಲ್ಲಿ 3-4 ಸಾವಿರ ಪೊಲೀಸ್ ಪೇದೆಗಳ ನೇಮಕ ಮಾಡಲಾಗುವುದು. 400 ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುತ್ತೇವೆ. 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಕೋರ್ಟ್ನಲ್ಲಿದೆ, ಈ ಬಗ್ಗೆ ನಮ್ಮ ಅಭಿಪ್ರಾಯವನ್ನು ತಿಳಿಸಲಿದ್ದೇವೆ. ಕೋರ್ಟ್ ನೀಡುವ ಆದೇಶದಂತೆ ನಾವು ಮುಂದುವರೆಯುತ್ತೇವೆ. ನಾವು ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲವೆಂದು ಹೇಳಿದರು.
ಇದನ್ನೂ ಓದಿ: ಕಾಂಗ್ರೆಸ್’ನಿಂದ ಬಿಜೆಪಿಗೆ ವಲಸೆ ಬಂದವರ ವಿರುದ್ಧ ಒಂದು ಪದವನ್ನೂ ಬಳಸಿಲ್ಲ: ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ
ಪೋಲಿಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಇದರಿಂದ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಾನು ಪೊಲೀಸ್ ಅಧಿಕಾರಿಗಳ ವಾರದ ರಜೆ ಪರವಿದ್ದೇನೆ. ಇದಲ್ಲದೇ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಭತ್ಯೆ ನೀಡುವುದರ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಾಗುವುದು ಎಂದು ಪರಮೇಶ್ವರ್ ಹೇಳಿದರು.
‘ಔರದರ್ಕರ್ ವರದಿ ಯಥಾವತ್ ಜಾರಿ ಮಾಡಲು ಸಾಧ್ಯವಾಗುವುದಿಲ್ಲ. ನಮ್ಮ ಸರ್ಕಾರವಿದ್ದಾಗ ಭಾಗಶಃ ಜಾರಿ ಮಾಡಲಾಗಿದೆ. ನಂತರ ಬೇರೆ ಸರ್ಕಾರ ಬಂತು ಅದನ್ನು ಜಾರಿ ಮಾಡಲಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಲಾಗುವುದು’ ಅಂತಾ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.