"ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ"

ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ತಂಬಾಕು ಮುಕ್ತ ಯುವ ಅಭಿಯಾನ ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

Written by - Manjunath N | Last Updated : Oct 15, 2024, 04:49 PM IST
  • ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ.
  • ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ.
  • ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ
 "ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ" title=

ಬೆಂಗಳೂರು: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ತಂಬಾಕು ಮುಕ್ತ ಯುವ ಅಭಿಯಾನ ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶ: ಪಾಲಿಸಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್‌ ವಿರುದ್ದ ಕ್ರಮಕ್ಕೆ ಸೂಚನೆ

ವಿಶ್ವ ಆರೋಗ್ಯ ಸಂಸ್ಥೆ (WHO) ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ - ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ಇದನ್ನು ನಿಲ್ಲಿಸಬೇಕು.

ರಾಜ್ಯದಲ್ಲಿ ಉತ್ತಮ ಮಳೆ - ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಹಾರೈಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News