ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ಅಧಿನಿಯಮ 1993 ರ ಪ್ರಕರಣ 7(2) ರನ್ವಯ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಪಕ್ಷರಹಿತವಾಗಿ ನಡೆಸಲಾಗುತ್ತಿದೆ. ಈ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪವನ್ನು ತಡೆಗಟ್ಟಲು ರಾಜ್ಯ ಚುನಾವಣಾ ಆಯೋಗವು ಕೆಳಕಂಡ ನಿರ್ದೇಶನಗಳನ್ನು ಜಾರಿಗೊಳಿಸಿದೆ.


COMMERCIAL BREAK
SCROLL TO CONTINUE READING

ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಬಾವುಟ, ಬ್ಯಾನರ್‍ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿ(Candidates)ಗಳನ್ನು ತಮ್ಮ ಪಕ್ಷದ, ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ.


ದೇಶದೆದುರು 'ರಾಜ್ಯದ ಮಾನ ಹರಾಜು'- ವಿಧಾನ ಪರಿಷತ್'ನಲ್ಲಿ ಕಿತ್ತಾಡಿದ ಬಿಜೆಪಿ-ಕಾಂಗ್ರೆಸ್ ಸದಸ್ಯರು!


ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ, ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು ಹಾಗೂ ಹಚ್ಚುವುದು ಮಾಡುವಂತಿಲ್ಲ.


ಬೇಸಿಗೆ ರಜೆಯನ್ನು ಬಲಿ ಪಡೆಯುವುದೇ ಕೊರೊನಾ?


ರಾಜಕೀಯ ಮುಖಂಡರ ಭಾವಚಿತ್ರ, ರಾಜಕೀಯ ಪಕ್ಷಗಳ ಚೆಹ್ನೆ ಇರುವ ಕರಪತ್ರಗಳು, ಕಟೌಟ್‍ಗಳು, ಬ್ಯಾನರ್ ಮತ್ತು ಬಂಟಿಂಗ್‍ಗಳ ಮೂಲಕ ಪ್ರಚಾರ ಮಾಡುವಂತಿಲ್ಲ. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿ.ವಿ. ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ.


ಶಿಕ್ಷಣ ಸಚಿವರಿಂದ ಶಾಲೆ ಪುನಾರಂಭದ ಬಗ್ಗೆ ಮಹತ್ವದ ಮಾಹಿತಿ..!


ಈ ಚುನಾವಣೆ ಸಂದರ್ಭದಲ್ಲಿ ಮೇಲ್ಕಂಡ ಚುನಾವಣಾ ಆಯೋಗದ ನಿರ್ದೇಶನವು ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಅಂತಹ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಪಟ್ಟ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.


'ಈ‌ ಹಿಂದೆ ಕುಮಾರಸ್ವಾಮಿ ನಮಗೆ ಚಪ್ಪಲಿಯಿಂದ ಹೊಡೆಸಿದ್ದಾರೆ'