ಚಾಮರಾಜನಗರ:  ಕಾಂಗ್ರೆಸ್ ರಾಷ್ಟ್ರೀಯ ನಾಯಕ  ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಶುಕ್ರವಾರ ಬೆಳಗ್ಗೆ ಗುಂಡ್ಲುಪೇಟೆ ಮೂಲಕ ಕರುನಾಡಿಗೆ ಪ್ರವೇಶಿಸಲಿದೆ. ಭಾರತ್ ಜೋಡೋ ಯಾತ್ರೆಗಾಗಿ ಗುಂಡ್ಲುಪೇಟೆಯಲ್ಲಿ ಭರ್ಜರಿ ತಯಾರಿ ನಡೆದಿದ್ದು, ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಬೃಹತ್ ಕಟೌಟ್ ಗಳನ್ನು ನಿರ್ಮಿಸಲಾಗಿದೆ.


COMMERCIAL BREAK
SCROLL TO CONTINUE READING

ರಾಹುಲ್ ಗಾಂಧಿ ಮತ್ತು ತಂಡ ಈಗಾಗಲೇ ಕೇರಳದ ರಾಜ್ಯ ಪ್ರವಾಸ ಮುಗಿಸಿ ತಮಿಳುನಾಡಿನ ಗಡಿಭಾಗ ಗೂಡಲೂರಿಗೆ ಆಗಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ 8 ರಿಂದ 8.30ರ ಹೊತ್ತಿಗೆ ರಾಹುಲ್ ಗಾಂಧಿ ಗುಂಡ್ಲುಪೇಟೆಗೆ ಬಂದಿಳಿಯಲಿದ್ದು 9 ರ ಸುಮಾರಿಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಸಭಿಕರು ಕೂರಲು ಆಸನ ವ್ಯವಸ್ಥೆ ಮಾಡಲಾಗಿದೆ. 


ಊಟಿ ವೃತ್ತದಲ್ಲಿ ನೆಚ್ಚಿನ ನಾಯಕ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಬೃಹತ್ ಕಮಾನು ನಿರ್ಮಿಸುತ್ತಿದ್ದು ಎಲ್ಲರ ಹುಬ್ಬೇರಿಸುತ್ತಿದೆ. ರಾಗಾ ಹೆಜ್ಜೆ ಹಾಕುವ ಮಾರ್ಗದುದ್ದಕ್ಕೂ ರಾಹುಲ್ ಗಾಂಧಿ ಮತ್ತು ರಾಜ್ಯ ನಾಯಕರುಗಳ ಬೃಹತ್ ಕಟೌಟ್ ಗಳನ್ನು ನಿಲ್ಲಿಸಿದ್ದು ಇಡೀ ರಾಷ್ಟ್ರೀಯ ಹೆದ್ದಾರಿ ಕಾಂಗ್ರೆಸ್ ಮಯವಾಗಿದೆ. 


ಇದನ್ನೂ ಓದಿ- ಕೇವಲ ನನ್ನ ವಿರುದ್ಧ ಮಾತ್ರ ಸಿಬಿಐ ತನಿಖೆ ಯಾಕೆ?


ಸೋಲಿಗರು, ಸಂತ್ರಸ್ತರೊಟ್ಟಿಗೆ ಸಂವಾದ: 
ಅಂಬೇಡ್ಕರ್ ಭವನ ಕಾರ್ಯಕ್ರಮದ ಬಳಿಕ 10-11 ರ ವೇಳೆಗೆ ಪಾದಯಾತ್ರೆ ಆರಂಭಗೊಳ್ಳಲಿದ್ದು ಗುಂಡ್ಲುಪೇಟೆ ಪಟ್ಟಣದ ಹೊರವಲಯದಲ್ಲಿರುವ ಕೆಬ್ಬೆಕಟ್ಟೆ ಶನೀಶ್ವರ ದೇವಾಲಯ ಸಮೀಪ ಬಿಳಿಗಿರಿರಂಗನ ಬೆಟ್ಟ ಸೋಲಿಗರು ಮತ್ತು ಚಾಮರಾಜನಗರ ಜಿಲ್ಲಾಸ್ಪತ್ರೆಯ ಆಮ್ಲಜನಕ ದುರಂತದ ಸಂತ್ರಸ್ತರ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ‌. 


ಇನ್ನು, ರಾಗಾ ಯಾತ್ರೆ ಕರ್ನಾಟಕ ಪ್ರವೇಶ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ನಾಯಕರುಗಳಾದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ರಾಜ್ಯ ನಾಯಕರುಗಳ ದಂಡೇ ಹರಿದು ಬರಲಿದೆ. 


ಇದನ್ನೂ ಓದಿ- "ಜನರ ಅನುಕೂಲಕ್ಕೆ ಆಸ್ಪತ್ರೆ ಕಟ್ಟಿಸಿರುವ ಲೀಲಾವತಿ ಅವರ ಮನಸ್ಸು ದೊಡ್ಡದು"


30 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ: 
ಭಾರತ್ ಜೋಡೋ ಪಾದಯಾತ್ರೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದ್ದು ಗುಂಡ್ಲುಪೇಟೆ ಪಟ್ಟಣದಲ್ಲಿ ಇರುವ ಎಲ್ಲಾ ಕಲ್ಯಾಣ ಮಂಟಪಗಳನ್ನು ಬಾಡಿಗೆಗೆ ಪಡೆದು ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ. ಪಾದಯಾತ್ರೆ ಉದ್ದಕ್ಕೂ ಕಾರ್ಯರ್ತರಿಗೆ ಮಜ್ಜಿಗೆ, ನೀರು ಮತ್ತು ತಿಂಡಿಗಳನ್ನು ನೀಡಲು ಸ್ಥಳೀಯ ಕಾರ್ಯಕರ್ತರು ಸಿದ್ದತೆ ಮಾಡಿಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.