ಬಸ್ ಗೆ ನಮಸ್ಕರಿಸಿ ಪ್ರಯಾಣ ಬೆಳಸಿದ ಅಜ್ಜಿ..! ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವೆಂದ ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.

Written by - Manjunath N | Last Updated : Jun 11, 2023, 09:57 PM IST
  • ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
  • ಈ ಬೆನ್ನಲ್ಲೇ ಧಾರವಾಡ ಬಸ್ ನಿಲ್ದಾಣದಲ್ಲಿ ವಯಸ್ಸಾದ ಅಜ್ಜಿಯೊಬ್ಬರು ಬಸ್ ನಮಸ್ಕರಿಸಿ ಪ್ರಯಾಣ ಬೆಳೆಸಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಬಸ್ ಗೆ ನಮಸ್ಕರಿಸಿ ಪ್ರಯಾಣ ಬೆಳಸಿದ ಅಜ್ಜಿ..! ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವೆಂದ ಸಿಎಂ ಸಿದ್ದರಾಮಯ್ಯ title=

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.

ಈ ಬೆನ್ನಲ್ಲೇ ಧಾರವಾಡದ ಬಸ್ ನಿಲ್ದಾಣದಲ್ಲಿ ವಯಸ್ಸಾದ ಅಜ್ಜಿಯೊಬ್ಬರು ಬಸ್ ಗೆ ನಮಸ್ಕರಿಸಿ ಪ್ರಯಾಣ ಬೆಳೆಸಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಈ ಹೃದಯ ಸ್ಪರ್ಶಿ ಚಿತ್ರಕ್ಕೆ ಪ್ರತ್ರಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ "ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು.ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ.ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು" ಎಂದು ಅವರು ಬರೆದುಕೊಂಡಿದ್ದಾರೆ

.

ಇದಕ್ಶಕೂ ಮೊದಲು ಅವರು "ಶಕ್ತಿ ಯೋಜನೆ ಮಹಿಳೆಯರಿಗಾಗಿ ಮಾಡಿರುವ ಕಾರ್ಯಕ್ರಮ. ಸಮಾಜದಲ್ಲಿ ಅರ್ಧದಷ್ಟಿರುವ ಮಹಿಳೆಯರು ಶತಮಾನಗಳಿಂದ ಶೋಷಣೆಗೆ ಒಳಗಾಗಿದ್ದಾರೆ. ಅಲ್ಪಸಂಖ್ಯಾತರು, ಮಹಿಳೆಯರು, ಅವಕಾಶಗಳಿಂದ ಹಾಗೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ.ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಆ ದೇಶ ಅಭಿವೃದ್ಧಿಯಾಗುತ್ತದೆ. ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News