Karnataka Unlock 2.O : ರಾಜ್ಯದಲ್ಲಿ ಮಾಲ್, ರೆಸ್ಟೋರೆಂಟ್, ಮದುವೆ ಮಂಟಪ ತೆರೆಯಲು ಗ್ರೀನ್ ಸಿಗ್ನಲ್!

ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್  ಜೂ.21ರಿಂದ ಪುನರಾರಂಭ

Last Updated : Jun 17, 2021, 05:22 PM IST
  • ರಾಜ್ಯದಲ್ಲಿ ಕೊರೋನಾ ಇಳಿಕೆಯಾಗುತ್ತಿರುವುದರಿಂದ
  • ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್ ಜೂ.21ರಿಂದ ಪುನರಾರಂಭ
  • ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ
Karnataka Unlock 2.O : ರಾಜ್ಯದಲ್ಲಿ ಮಾಲ್, ರೆಸ್ಟೋರೆಂಟ್, ಮದುವೆ ಮಂಟಪ ತೆರೆಯಲು ಗ್ರೀನ್ ಸಿಗ್ನಲ್! title=

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಇಳಿಕೆಯಾಗುತ್ತಿರುವುದರಿಂದ ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್ ಸೇರಿದಂತೆ ಕೆಲವೊಂದು ಆರ್ಥಿಕ ಚಟುವಟಿಕೆಗಳನ್ನು ಜೂ.21ರಿಂದ ಪುನರಾರಂಭಿಸಬಹುದು. ನಿಯಂತ್ರಿತ ಸಂಖ್ಯೆಯ ಜನರು ಸೇರುವಂತೆ ನೋಡಿಕೊಳ್ಳಬೇಕು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.

ಈ ಕುರಿತಂತೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ಅನ್ ಲಾಕ್ 2 .O(Karnataka Unlock 2.0) ದಲ್ಲಿ ರೆಸ್ಟೋರೆಂಟ್, ಮಾಲ್, ಕಟಿಂಗ್ ಶಾಪ್, ಸಲೂನ್, ಸ್ಪಾ, ಮದುವೆ ಮಂಟಪಗಳನ್ನು ತೆರೆಯಬಹುದು. ಆದರೆ, ಶೇ.50ರಷ್ಟು ಜನರು ಸೇರುವಂತೆ ಸೂಚಿಸಬೇಕು. ಅಲ್ಲದೆ, ಅನ್ ಲಾಕ್ 2.0 ಮತ್ತು 3.0 ರ ನಡುವೆ ಎರಡು ವಾರಗಳ ಅಂತರ ಇರುವಂತೆಯೂ ಸೂಚಿಸಿದೆ.

ಇದನ್ನೂ ಓದಿ : BMTC Bus Service : ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ : ಜೂ.​ 21ರಿಂದ ರಸ್ತೆಗಿಳಿಯಲಿವೆ BMTC ಬಸ್!​

ಈ ಪ್ರದೇಶಗಳಲ್ಲಿ ಹೆಚ್ಚೆಚ್ಚು ಜನರು ಸೇರುವುದರಿಂದ ಸೋಂಕು ಹೆಚ್ಚಾಗಿ ಹರಡಲಿದ್ದು, ಎರಡರ ನಡುವೆ 2 ವಾರಗಳ ಅಂತರ ಇರಬೇಕೆಂದು ಸರ್ಕಾರಕ್ಕೆ ತಿಳಿಸಿದೆ. ಅನ್ ಲಾಕ್ 3.0(Karnataka Unlock 3.0)ಗೂ ಮೊದಲೂ ಆಕ್ಸಿಜನ್ ಹಾಸಿಗೆಗಳು ಶೇ.60ಕ್ಕಿಂತಲೂ ಕಡಿಮೆ ಇರುವ ಜಿಲ್ಲೆಗಳನ್ನು ಪರಿಶೀಲನೆ ನಡೆಸಬೇಕೆಂದು ತಿಳಿಸಿದೆ.

ಇದನ್ನೂ ಓದಿ : 2nd PUC Result 2021 : ದ್ವಿತೀಯ PU ವಿದ್ಯಾರ್ಥಿಗಳಿಗೆ ಮತ್ತೆ ಶಾಕ್ ನೀಡಿದ ಹೈಕೋರ್ಟ್!

ಜೂನ್ ಅಂತ್ಯದವರೆಗೂ ನೈಟ್ ಕಫ್ರ್ಯೂ(Night Curfew) ಮುಂದುವರೆಸಬೇಕು. ಸಾರ್ವಜನಿಕ ರ್ಯಾಲಿ, ಧರಣಿ, ಜಾತ್ರೆ ಹಾಗೂ ಹಬ್ಬಗಳ ಮೇಲೆ ನಿರ್ಬಂಧ ಹೇರಬೇಕು. ಜೂ.21ರಿಂದ 2ನೇ ಹಂತದ ಅನ್‍ಲಾಕ್ ಆರಂಭವಾಗಲಿದ್ದು, ಜೂನ್.5 ರಿಂದ ಮೂರನೇ ಹಂತದ ಅನ್‍ಲಾಕ್ ಆರಂಭವಾಗಲಿದೆ.

ಇದನ್ನೂ ಓದಿ : Karnataka Heavy Rain : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ 'ಆರೆಂಜ್' ಅಲರ್ಟ್'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News