ಇಂದಿನಿಂದ ಗೃಹಜ್ಯೋತಿ ಯೋಜನೆ ಪ್ರಾರಂಭ: ಸಿಎಂ ಸಿದ್ದರಾಮಯ್ಯ ಮಾಹಿತಿ

ಗೃಹಜ್ಯೋತಿ ಯೋಜನೆಯ ಬಿಲ್ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು.

Written by - Prashobh Devanahalli | Edited by - Bhavishya Shetty | Last Updated : Jul 1, 2023, 12:41 PM IST
    • ಗೃಹಜ್ಯೋತಿ ಯೋಜನೆಯ ಬಿಲ್ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು.
    • ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ.
    • ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಜ್ಯೋತಿ ಯೋಜನೆಯ ಬಗ್ಗೆ ಮಾಹಿತಿ
ಇಂದಿನಿಂದ ಗೃಹಜ್ಯೋತಿ ಯೋಜನೆ ಪ್ರಾರಂಭ: ಸಿಎಂ ಸಿದ್ದರಾಮಯ್ಯ ಮಾಹಿತಿ title=
Griha Jyoti Yojana

ಬೆಂಗಳೂರು: ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಬಿಜೆಪಿ ನಾಯಕರಿಗೆ ಸೆಡ್ಡು ಹೊಡೆದ ಎಂ.ಪಿ.ರೇಣುಕಾಚಾರ್ಯ

ಗೃಹಜ್ಯೋತಿ ಯೋಜನೆಯ ಬಿಲ್ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆಯುತ್ತಿರುವ ಬಗ್ಗೆ ಮಾತನಾಡಿ ವಿರೋಧ ಪಕ್ಷ ಅವರ ಒಳಜಗಳವನ್ನು ಮೊದಲು ಸರಿಪಡಿಸಿಕೊಳ್ಳಲಿ ಎಂದರು.

ಕಾಂಗ್ರೆಸ್ ವ್ಯಂಗ್ಯ ಟ್ವೀಟ್:

ವಿಧಾನಸಭಾ ಚುನಾವಣೆ ಮುಗಿದು, ಹೊಸ ಸರ್ಕಾರ ರಚನೆಗೊಂಡು ತಿಂಗಳೇ ಕಳೆದರೂ ಇನ್ನೂ ಬಿಜೆಪಿ ಮಾತ್ರ ವಿರೋಧ ಪಕ್ಷದ ನಾಯಕನ ಆಯ್ಕೆ‌ ಮಾಡಿಲ್ಲ. ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಬಿಜೆಪಿ ಕುರಿತು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಟ್ವಿಟರ್’ನಲ್ಲಿ  ಈ ಕುರಿತು ವ್ಯಂಗ್ಯವಾಡಿರುವ ರಾಜ್ಯ ಕಾಂಗ್ರೆಸ್ ಖಾಲಿ ಇರುವ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹುದ್ದೆಗೆ ಸೂಕ್ತ ವ್ಯಕ್ತಿಗಳು ಬೇಕಾಗಿದ್ದಾರೆ. ತುರ್ತಾಗಿ ಬೇಕಾಗಿದ್ದಾರೆ ಎಂದು ಖಾಲಿ ಕುರ್ಚಿ ಇರುವ ಪೋಸ್ಟರ್ ಬಿಡುಗಡೆ ಮಾಡಿದೆ.

“ಅಷ್ಟೇ ಅಲ್ಲದೇ ವಿರೋಧ ಪಕ್ಷ ನಾಯಕನಲ್ಲಿ ಇರಬೇಕಾದ ಲಕ್ಷಣಗಳನ್ನೂ ಕಾಂಗ್ರೆಸ್ ತಿಳಿಸಿದೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 'RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು' ವಿಪಕ್ಷ ನಾಯಕ ಬೇಕಾಗಿದ್ದಾರೆ- ಕಾಂಗ್ರೆಸ್

“ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕನಾಗಿ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆಂದು” ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಬಿಜೆಪಿ ಕುರಿತು ವ್ಯಂಗ್ಯವಾಡಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News