ಬೆಂಗಳೂರು: ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಗೆ ಕಳೆದ 10 ದಿನಗಳಲ್ಲಿ 7,005,892 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ ಚುನಾವಣೆ ವೇಳೆ ಘೋಷಿಸಿದ ಮೊದಲ ಗ್ಯಾರಂಟಿ ಇದಾಗಿದ್ದು, 200 ಯೂನಿಟ್‍ವರೆಗೂ ಉಚಿತ ವಿದ್ಯುತ್‌ ನೀಡುವ ಯೋಜನೆಯಾಗಿದೆ. ಜೂನ್‌ 18ರಿಂದಲೇ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆ ಆರಂಭವಾಗಿತ್ತು. ಆದರೆ ಸರ್ವರ್‌ ಡೌನ್‌ ಆಗಿ ಗ್ರಾಹಕರು ಪರದಾಡಿದ್ದರು.


COMMERCIAL BREAK
SCROLL TO CONTINUE READING

ಜೂನ್ 27ರ ಮಂಗಳವಾರ ಸಂಜೆ 6 ಗಂಟೆಯ ವೇಳೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 2,58,263 ಗ್ರಾಹಕರು ನೋಂದಾಯಿಸಿದ್ದಾರೆ. ಇನ್ನೂ ಸೆಸ್ಕ್‍ನಲ್ಲಿ 98,842, ಜೆಸ್ಕಾಂನಲ್ಲಿ 63,435, ಹೆಸ್ಕಾಂನಲ್ಲಿ 1,19,309, ಹುಕ್ಕೇರಿ (HRECS)ಯಲ್ಲಿ 2,926 ಮತ್ತು ಮೆಸ್ಕಾಂನಲ್ಲಿ 76,771 ಸೇರಿದಂತೆ ರಾಜ್ಯಾದ್ಯಂತ ಒಟ್ಟು 6,19,546 ಗ್ರಾಹಕರು ಹೆಸರು ನೋಂದಾಯಿಸಿಕೊಂಡಿದ್ದಾರೆ.


ಇದನ್ನೂ ಓದಿ: Rajkaluve: ರಾಜಕಾಲುವೆ ಒತ್ತುವರಿ ಕುರಿತಂತೆ ಬೃಹತ್ ಹಗರಣವನ್ನು CID ತನಿಖೆಗೆ ವಹಿಸಬೇಕೆಂದು ಆಗ್ರಹ!


ರಾಜ್ಯದ ಒಟ್ಟು 6 ವಿದ್ಯುತ್ ನಿಗಮಗಳಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ವೇಗ ಪಡೆದಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ಕನಿಷ್ಠ 10 ಲಕ್ಷಕ್ಕೂ ಹೆಚ್ಚು ಗ್ರಾಹಕರು ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದಾರೆ. ಇನ್ನೂ ಗೃಹಜ್ಯೋತಿ ನಿಯಮದನ್ವಯ ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗಲಿದೆ. ವಾಣಿಜ್ಯ ಉದ್ದೇಶಕ್ಕೆ ವಿದ್ಯುತ್ ಉಪಯೋಗಿಸಿದ್ದಲ್ಲಿ ಈ ಯೋಜನೆ ಅನ್ವಯವಾಗುವುದಿಲ್ಲ.


ರಾಜ್ಯದ ಇ-ಆಡಳಿತ ಗೃಹಜ್ಯೋತಿ ಯೋಜನೆಗೆ ಪ್ರತ್ಯೇಕವಾಗಿ ನೋಂದಣಿ ಲಿಂಕ್ ನೀಡಿದ ಬಳಿಕ ಅರ್ಜಿ ಸಲ್ಲಿಕೆಯು ದುಪ್ಪಟ್ಟಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲದೆ ವಿದ್ಯುತ್ ಕಚೇರಿ, ನಾಡಕಚೇರಿ ಹಾಗೂ ಕಂಪ್ಯೂಟರ್, ಲ್ಯಾಪ್‍ಟಾಪ್, ಮೊಬೈಲ್ ಫೋನ್‍ನಲ್ಲಿ ಅಧಿಕೃತ ಪೋರ್ಟಲ್ https://sevasindhugs.karnataka.gov.in ಮೂಲಕ ಹೆಸರು ನೋಂದಾಯಿಸಬಹುದು. ಮೇಲ್ಕಂಡ ವೆಬ್ಸೈಟ್ ಹೊರತುಪಡಿಸಿ ನೋಂದಣಿಗೆ ಯಾವುದೇ ಖಾಸಗಿ/ನಕಲಿ ವೆಬ್‍ಸೈಟ್ ಬಳಸದೇ ಇರುವುದು ಸೂಕ್ತ.


ಇದನ್ನೂ ಓದಿ: ಪಕ್ಷದ ಘನತೆಗೆ ಧಕ್ಕೆಯಾಗದಂತೆ ನಾಯಕರು ನೋಡಿಕೊಳ್ಳಬೇಕು : ಕಟೀಲ್


ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನೋಂದಣಿಗೆ ನಿಗದಿತ ಸೇವಾ ಶುಲ್ಕವನ್ನಷ್ಟೇ ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚುವರಿ ಹಣಕ್ಕೆ ಯಾರಾದರೂ ಬೇಡಿಕೆಯಿಟ್ಟಲ್ಲಿ ಗ್ರಾಹಕರು ಕೂಡಲೇ 24x7 ಸಹಾಯವಾಣಿ 1912ಕ್ಕೆ ಕರೆಮಾಡಿ ತಿಳಿಸಬಹುದು. ಇಂತಹ ಪ್ರಯತ್ನಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.