ಆಗಸ್ಟ್ 30ಕ್ಕೆ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Gruha Lakshmi Yojana: ಕಾಂಗ್ರೆಸ್ ಸರ್ಕಾರದ ‘ಗೃಹಲಕ್ಷ್ಮಿ ಯೋಜನೆ’ಯ ಉದ್ಗಾಟನೆಯನ್ನು ಆಗಸ್ಟ್‌ 27ರ ಬದಲು ಆಗಸ್ಟ್ 30ಕ್ಕೆ ಮುಂದೂಡಲಾಗಿದೆ. ಇದಲ್ಲದೆ ಬೆಳಗಾವಿ ಬದಲು ಮೈಸೂರಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Written by - Prashobh Devanahalli | Edited by - Puttaraj K Alur | Last Updated : Aug 19, 2023, 02:47 PM IST
  • ‘ಗೃಹಲಕ್ಷ್ಮಿ ಯೋಜನೆ’ಯ ಉದ್ಗಾಟನೆ ಆಗಸ್ಟ್‌ 27ರ ಬದಲು ಆಗಸ್ಟ್ 30ಕ್ಕೆ ಮುಂದೂಡಿಕೆ
  • ಬೆಳಗಾವಿ ಬದಲು ಮೈಸೂರಿನಲ್ಲಿ ‘ಗೃಹಲಕ್ಷ್ಮಿ ಯೋಜನೆ’ಯ ಉದ್ಘಾಟನಾ ಕಾರ್ಯಕ್ರಮ ಆಯೋಜನೆ
  • ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ
ಆಗಸ್ಟ್ 30ಕ್ಕೆ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ title=
ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ನಡೆದ 'ನಮ್ಮೂರ ನಾಗಪಂಚಮಿ-2022' ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಅವರು ಈ ಮಾಹಿತಿಯನ್ನು ನೀಡಿದರು.

ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಇಂದು ಮೈಸೂರಿಗೆ ತೆರಳುತ್ತಿದ್ದು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸುವುದಾಗಿ ಹೇಳಿದರು.

ಇದನ್ನೂ ಓದಿ: ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಗೃಹಲಕ್ಷ್ಮಿ ಗುದ್ದಾಟ!

ಮೈಸೂರಿನಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ. ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದರು.

ದಿನಾಂಕ ಮುಂದೂಡಿಕೆ & ಜಾಗ ಬದಲು!

ಕಾಂಗ್ರೆಸ್ ಸರ್ಕಾರದ ‘ಗೃಹಲಕ್ಷ್ಮಿ ಯೋಜನೆ’ಯ ಉದ್ಗಾಟನೆಯನ್ನು ಆಗಸ್ಟ್‌ 27ರ ಬದಲು ಆಗಸ್ಟ್ 30ಕ್ಕೆ ಮುಂದೂಡಲಾಗಿದೆ. ಇದಲ್ಲದೆ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಮಾಡಬೇಕಿದ್ದ ಜಾಗವನ್ನು ಕೂಡ ಬದಲಾವಣೆ ಮಾಡಲಾಗಿದ್ದು, ಬೆಳಗಾವಿ ಬದಲು ಮೈಸೂರಿನಲ್ಲಿ ಆಯೋಜಿಸಲಾಗಿದೆ. ಕಾರಣಾಂತರಗಳಿಂದ ಸಿಎಂ ಸಿದ್ದರಾಮಯ್ಯರ ತವರು ಜಿಲ್ಲೆಯಲ್ಲಿ ಈ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News