ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್! ಈ ತಿಂಗಳಲ್ಲಿ 3 ಕಂತುಗಳ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ!!

Gruhalakshmi: 2024 ಡಿಸೆಂಬರ್‌ವರೆಗೂ 17 ತಿಂಗಳ ಹಣ ಮಹಿಳೆಯರ ಖಾತೆಗೆ ಜಮೆಯಾಗಿದೆ. ಜನವರಿ ತಿಂಗಳ ಹಣವನ್ನು ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಮಾಡಲಾಗಿತ್ತು, ಇದೀಗ ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಹಣ ಬಿಡುಗಡೆಯಾಗಬೇಕಿದೆ.

Written by - Puttaraj K Alur | Last Updated : Apr 30, 2025, 05:19 PM IST
  • ಜನವರಿ, ಫೆಬ್ರವರಿ, ಮಾರ್ಚ್ ಮೂರು ತಿಂಗಳ 'ಗೃಹ ಲಕ್ಷ್ಮಿ' ಬಾಕಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು
  • ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯ ಅನುಮೋದನೆ ಸಿಕ್ಕಿದೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  • ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು
ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್! ಈ ತಿಂಗಳಲ್ಲಿ 3 ಕಂತುಗಳ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ!!

Gruhalakshmi: ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬರುತ್ತೆ? ಯುಗಾದಿ ಹಬ್ಬ ಮುಗಿದರೂ ಗೃಹಲಕ್ಷ್ಮಿ ಹಣ ಬಂದಿಲ್ಲವೆಂದು ರಾಜ್ಯದ ಲಕ್ಷಾಂತರ ಗೃಹಿಣಿಯರು ಕಾಯುತ್ತಿದ್ದಾರೆ. ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಗೃಹಲಕ್ಷ್ಮಿ ಹಣದ ಬಗ್ಗೆ ಮಹಿಳೆಯರಿಗೆ ಅಭಯ ನೀಡಿದ್ದರು. ಇದೀಗ ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಬಿಗ್‌ ಅಪ್‌ಡೇಟ್‌ ನೀಡಿದ್ದಾರೆ.

Add Zee News as a Preferred Source

ಹೌದು, ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೇ ತಿಂಗಳಲ್ಲಿ ಮೂರು ಕಂತಿನ ಹಣ ಬಿಡುಗಡೆಗೆ ಮಾಡುವುದಾಗಿ ಹೇಳಿದ್ದಾರೆ. ಬಾಕಿ ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮೋದನೆ ಸಿಕ್ಕಿದೆ. ಹೀಗಾಗಿ ಮೇ ತಿಂಗಳಲ್ಲಿ ಮೊದಲು ಮೂರು ವಾರಗಳಲ್ಲಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಸಚಿವೆ ತಿಳಿಸಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಪ್ರಚೋದನಕಾರಿ ಹೇಳಿಕೆ

ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಹೇಳಿಕೆಯನ್ನ ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ʼಜನವರಿ, ಫೆಬ್ರವರಿ, ಮಾರ್ಚ್ ಮೂರು ತಿಂಗಳ 'ಗೃಹ ಲಕ್ಷ್ಮಿ' ಬಾಕಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು. ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದುʼ ಎಂದು ತಿಳಿಸಿದೆ. 

ಯಾವ ತಿಂಗಳ ಹಣ ಜಮೆಯಾಗಬೇಕು?

ಗೃಹಲಕ್ಷ್ಮಿ ಯೋಜನೆಯು 2023ರ ಆಗಸ್ಟ್‌ ತಿಂಗಳಲ್ಲಿ ಆರಂಭವಾಯಿತು. 2024 ಡಿಸೆಂಬರ್‌ವರೆಗೂ 17 ತಿಂಗಳ ಹಣ ಮಹಿಳೆಯರ ಖಾತೆಗೆ ಜಮೆಯಾಗಿದೆ. ಜನವರಿ ತಿಂಗಳ ಹಣವನ್ನು ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಮಾಡಲಾಗಿತ್ತು, ಇದೀಗ ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಹಣ ಬಿಡುಗಡೆಯಾಗಬೇಕಿದೆ. ಇದೇ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುಡ್ ನ್ಯೂಸ್ ನೀಡಿದ್ದು, ಮೇ ತಿಂಗಳಲ್ಲಿ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗುವುದು ʼದೇಶಹದ್ರೋಹʼಕ್ಕೆ ಸಮಾನ : ಸಿಎಂ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News