ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸತತವಾಗಿ ಅನ್ಯಾಯವಾಗುತ್ತಿದೆ. ಅದರಲ್ಲೂ ಮುಖ್ಯವಾಗಿ GST ತೆರಿಗೆ ಹಂಚಿಕೆ ವಿಚಾರದಲ್ಲಂತೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಹಿರಂಗವಾಗಿಯೇ ಅನ್ಯಾಯ ಎಸಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಹೀಗಾಗಿ ಕೇಂದ್ರದಿಂದ ಆಗುತ್ತಿರುವ GST ಮೋಸದ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಿದ್ಧರಿದ್ದಾರಾ? ಎಂದು ಸಚಿವ ಕೃಷ್ಣ ಬೈರೇಗೌಡ ಸವಾಲು ಹಾಕಿದ್ದಾರೆ. 


COMMERCIAL BREAK
SCROLL TO CONTINUE READING

ಕೇಂದ್ರದಿಂದ ಕರ್ನಾಟಕಕ್ಕೆ ಆಗುತ್ತಿರುವ GST ಅನ್ಯಾಯದ ಬಗ್ಗೆ ಮಾತನಾಡಿರುವ ಅವರು, ಹಣಕಾಸು ಆಯೋಗ 2020-21ನೇ ಸಾಲಿನ ಅಂತಿಮ ವರದಿಯಲ್ಲಿ ಕರ್ನಾಟಕಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅಲ್ಲದೆ 2021-26ನೇ ಸಾಲಿನ ವರದಿಯಲ್ಲೂ 6,000 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿದೆ. ಒಟ್ಟಾರೆ ಕೇಂದ್ರದಿಂದ ಕರ್ನಾಟಕಕ್ಕೆ 11,495 ಕೋಟಿ ರೂ. ಹಣ ವಿಶೇಷ ಅನುದಾನದ ರೂಪದಲ್ಲಿ ಬರಬೇಕಿದೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ: ಬೆಂಗಳೂರಿನಲ್ಲಿ ಹೂವಿಗೆ ಫುಲ್‌ ಡಿಮ್ಯಾಂಡ್


ಆದರೆ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಣಕಾಸು ಆಯೋಗ ಅಂತಹದ್ದೊಂದು ಶಿಫಾರಸು ಮಾಡೇ ಇಲ್ಲ. ನಾವು ಹಣಕಾಸು ಆಯೋಗದ ಒಂದೇ ಒಂದು ಶಿಫಾರಸ್ಸನ್ನು ಸಹ ತಿದ್ದಲು ಹೋಗುವುದಿಲ್ಲ ಎಂದು ಹಸಿ ಹಸಿ ಸುಳ್ಳುಗಳನ್ನು ಹೇಳುತ್ತಾ ರಾಜ್ಯಕ್ಕೆ ಅನ್ಯಾಯವೆಸಗುತ್ತಿದ್ದಾರೆ. ಒಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರದ ಬಗ್ಗೆ ಸುಳ್ಳು ಹೇಳುತ್ತಿದ್ದರೆ, ನಿರ್ಮಲಾ ಸೀತಾರಾಮನ್ ಅವರಂತೂ ತೆರಿಗೆ ಹಂಚಿಕೆ ಹಾಗೂ ಹಣಕಾಸು ಆಯೋಗದ ಶಿಫಾರಸಿನ ಬಗ್ಗೆ ಹಲವು ದಿನಗಳಿಂದಲೂ ಸರಣಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. 


ಕೋಲಾರದಿಂದಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ


ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲು ನಾನು ಈಗಾಗಲೇ ಒಪ್ಪಿಗೆ ಸೂಚಿಸಿದ್ದೇನೆ. ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಸಚಿವ ಸ್ಥಾನವನ್ನೂ ಅಲಂಕರಿಸಿರುವ ನಿರ್ಮಲಾ ಸೀತಾರಾಮನ್ ಅವರೂ ಸಹ ಸಕಾರಾತ್ಮಕವಾಗಿ ಸ್ಪಂದಿಸಿ ಈ ಚರ್ಚೆಯಲ್ಲಿ ಪಾಲ್ಗೊಂಡು GST ತೆರಿಗೆ ಹಂಚಿಕೆ ಕುರಿತು ರಾಜ್ಯದ ಜನ ಸಾಮಾನ್ಯರಲ್ಲಿ ಮೂಡಿರುವ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಈ ಮೂಲಕ ನಾನು ಅವರಲ್ಲಿ ಕೇಳಿಕೊಳ್ಳುತ್ತೇನೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ