ಗ್ಯಾರಂಟಿ ಯೋಜನೆಗಳು ದೇಶ ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲೂ ಗಮನ ಸೆಳೆಯುತ್ತಿವೆ: ಕಾಂಗ್ರೆಸ್

ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿದೆ ನಮ್ಮ ಸರ್ಕಾರ. ಸಾಕ್ಷಿ, ಪುರಾವೆ ಕೇಳುತ್ತಿದ್ದವರಿಗೆ ತನಿಖೆಯ ನಂತರ ಉತ್ತರ ಸಿಗಲಿದೆ, ಉತ್ತರವಷ್ಟೇ ಅಲ್ಲ ಶಿಕ್ಷೆಯೂ ಸಿಗಲಿದೆ! ಎಂದು ಕಾಂಗ್ರೆಸ್ ಎಚ್ಚರಿಸಿದೆ.

Written by - Puttaraj K Alur | Last Updated : Aug 19, 2023, 03:45 PM IST
  • ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಆಕ್ಸ್‌ಫರ್ಡ್ ಯೂನಿವರ್ಸಿಟಿಯ ಮಾನವ ಹಕ್ಕುಗಳ ವೇದಿಕೆಯ ಶ್ಲಾಘನೆ
  • ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಗಳ ಬಗ್ಗೆಯೂ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ
  • ನಮ್ಮ ಗ್ಯಾರಂಟಿ ಯೋಜನೆಗಳು ದೇಶದಲ್ಲಿ ಮಾತ್ರವಲ್ಲ ಜಾಗತಿಕ ಮಟ್ಟದಲ್ಲೂ ಗಮನ ಸೆಳೆಯುತ್ತಿವೆ
ಗ್ಯಾರಂಟಿ ಯೋಜನೆಗಳು ದೇಶ ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲೂ ಗಮನ ಸೆಳೆಯುತ್ತಿವೆ: ಕಾಂಗ್ರೆಸ್ title=
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಮೆಚ್ಚುಗೆ!

ಬೆಂಗಳೂರು: ಜಗತ್ತಿನ ಪ್ರತಿಷ್ಠಿತ ಆಕ್ಸ್‌ಫರ್ಡ್ ಯೂನಿವರ್ಸಿಟಿಯ ಮಾನವ ಹಕ್ಕುಗಳ ವೇದಿಕೆಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿ ತನ್ನ ವೆಬ್ಸೈಟ್‌ನಲ್ಲಿ ಲೇಖನ ಪ್ರಕಟಿಸಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಗಳು ಸಮಾಜಕಲ್ಯಾಣದ ಯೋಜನೆಗಳಾಗಿದ್ದರೂ ಪರಿಸರ ಹಾಗೂ ಹವಾಮಾನ ಸುಧಾರಣೆಯ ಅನುಕೂಲತೆಗಳ ಬಗ್ಗೆ ಬೆಳಕು ಚೆಲ್ಲುವ ವಿಶೇಷತೆ ಹೊಂದಿದೆ ಈ ಲೇಖನ. ನಮ್ಮ ಗ್ಯಾರಂಟಿ ಯೋಜನೆಗಳು ದೇಶದಲ್ಲಿ ಮಾತ್ರವಲ್ಲ ಜಾಗತಿಕ ಮಟ್ಟದಲ್ಲೂ ಗಮನ ಸೆಳೆಯುತ್ತಿವೆ’ ಎಂದು ಖುಷಿ ವ್ಯಕ್ತಪಡಿಸಿದೆ.

‘ಬಿಜೆಪಿಯ 40% ಕಮಿಷನ್ ಲೂಟಿಯ ಆರೋಪವನ್ನು ಕೇವಲ ಆರೋಪ, ಸಾಕ್ಷಿ ಎಲ್ಲಿದೆ ಎನ್ನುತ್ತಿದ್ದರು ಬಿಜೆಪಿ ನಾಯಕರು. ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿದೆ ನಮ್ಮ ಸರ್ಕಾರ. ಸಾಕ್ಷಿ, ಪುರಾವೆ ಕೇಳುತ್ತಿದ್ದವರಿಗೆ ತನಿಖೆಯ ನಂತರ ಉತ್ತರ ಸಿಗಲಿದೆ, ಉತ್ತರವಷ್ಟೇ ಅಲ್ಲ ಶಿಕ್ಷೆಯೂ ಸಿಗಲಿದೆ!’ ಎಂದು ಎಚ್ಚರಿಸಿದೆ.

ಇದನ್ನೂ ಓದಿ: ಕರ್ಕಶ್ ಶಬ್ದದ ಸೈಲೆನ್ಸರ್ ಹಾಕಿಕೊಂಡು ಓಡಾಟ: ಧಾರವಾಡದಲ್ಲಿ ಬೈಕ್‌ ವಶಕ್ಕೆ

ಕಾಂಗ್ರೆಸ್ ಸರ್ಕಾರವೇ ಬರಬೇಕಾಯ್ತು!

ಶಾಲಾ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ಸಲುವಾಗಿ ಮೊಟ್ಟೆ ಬಾಳೆಹಣ್ಣು ನೀಡುವ ಯೋಜನೆಗೆ ಚಾಲನೆ ದೊರಕಿದೆ. ಸದೃಢ ಪ್ರಜೆಗಳನ್ನು ರೂಪಿಸಿದಾಗ ಮಾತ್ರ ಸದೃಢ ಕರ್ನಾಟಕವನ್ನು ನಿರ್ಮಿಸಲು ಸಾಧ್ಯವೆಂಬ ನಂಬಿಕೆಯೊಂದಿಗೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಮೊಟ್ಟೆ ಖರೀದಿಯಲ್ಲಿ ಲೂಟಿ ಮಾಡಿದ್ದು ಬಿಟ್ಟರೆ ಅಪೌಷ್ಟಿಕತೆಯ ನಿವಾರಣೆಗೆ ಹಿಂದಿನ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ, ಜನಪರ ಯೋಜನೆ ರೂಪಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯ್ತು’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

‘ಇಂದಿನ ಮಕ್ಕಳೇ ಕರ್ನಾಟಕದ ಭವಿಷ್ಯದ ಆಸ್ತಿ, ಮಕ್ಕಳ ಶಿಕ್ಷಣ ಹಾಗೂ ಪೌಷ್ಟಿಕತೆಯ ಉತ್ತೇಜನಕ್ಕೆ ಕಾಂಗ್ರೆಸ್ ಸರ್ಕಾರ ಹಲವು ಪೂರಕ ಕ್ರಮಗಳನ್ನು ಕೈಗೊಂಡಿದೆ. 1-10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಹಾಗೂ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ದೊರಕಿದೆ. ಕಳೆದ 4 ವರ್ಷಗಳಲ್ಲಿ ರಾಜ್ಯದಲ್ಲಿ ಜನಪರ ಯೋಜನೆಗಳ ಸದ್ದು ಸುದ್ದಿಯೇ ಇರಲಿಲ್ಲ, ಜನರ ಪರವಾಗಿ ಕೆಲಸ ಮಾಡಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯ್ತು’ ಎಂದು ಹೇಳಿದೆ.

ಇದನ್ನೂ ಓದಿ: ಪ್ರಚಾರದಲ್ಲಿರಲು ಆರೋಪ : ಎಚ್ಡಿಕೆಗೆ ಸಂಸದ ಡಿ.ಕೆ.ಸುರೇಶ್ ಟಾಂಗ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News