ಗ್ಯಾರಂಟಿ ಯೋಜನೆಗಳ ತೀರ್ಮಾನ ಕದ್ದುಮುಚ್ಚಿ ತೆಗೆದುಕೊಂಡಿರುವುದಲ್ಲ: ಸಚಿವ ಡಾ.ಜಿ ಪರಮೇಶ್ವರ
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಮಾಲೋಚನೆ ಮಾಡಿಕೊಂಡು ಮಾಡುವ ಪದ್ಧತಿ ಇದೆ. ಹೈಕಮಾಂಡ್‌ನೊಂದಿಗೆ ಚರ್ಚೆ ಮಾಡಿ, ಅವರಿಬ್ಬರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಸಚಿವ ಸಂಪುಟ ಪುನರ್ ರಚನೆ ವಿಚಾರ ಸಂಪೂರ್ಣವಾಗಿ ಮುಖ್ಯಮಂತ್ರಿಗಳಿಗೆ ಬಿಟ್ಟಿರುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಮಾಲೋಚನೆ ಮಾಡಿಕೊಂಡು ಮಾಡುವ ಪದ್ಧತಿ ಇದೆ. ಹೈಕಮಾಂಡ್‌ನೊಂದಿಗೆ ಚರ್ಚೆ ಮಾಡಿ, ಅವರಿಬ್ಬರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಧರ್ಮ ಕೀರ್ತಿರಾಜ್ ಮದುವೆ ಮುರಿದು ಬೀಳಲು ಏನು ಕಾರಣ? ಅನುಷಾ ಜೊತೆಗಿನ ಬ್ರೇಕಪ್ ಬಗ್ಗೆ ಬಿಚ್ಚಿಟ್ರು ಸತ್ಯ!
ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿವಾದಾತ್ಮಕ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ಸಂವಿಧಾನದ ಆಶಯಗಳು, ಸಂವಿಧಾನದಲ್ಲಿ ಪ್ರತಿಯೊಂದು ಸಮುದಾಯಗಳಿಗೆ ಮತ್ತು ಧರ್ಮಗಳಿಗೆ ಕೊಟ್ಟಿರುವ ಹಕ್ಕು ಮತ್ತು ಅವಕಾಶಗಳನ್ನು ಅವರು ಸರಿಯಾಗಿ ನೋಡಿಕೊಂಡಿಲ್ಲ. ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಅದಕ್ಕೆ ವ್ಯತಿರಿಕ್ತವಾಗಿ ನಾವು ಮಾತನಾಡುವುದಾಗಲಿ ಅಥವಾ ಕ್ರಮ ಮಾಡುವುದು ಸಾದುವಲ್ಲ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಯಾರು ಮಾತನಾಡಬಾರದು ಎಂದು ಹೇಳಿದರು.
ಎರಡು ಗ್ಯಾರಂಟಿ ಯೋಜನೆ ನಿಲ್ಲಿಸುವಂತೆ ಶಾಸಕ ಗವಿಯಪ್ಪ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಾರಿಗೂ ಗೊತ್ತಿಲ್ಲದೇ ಕದ್ದು ಮುಚ್ಚಿ ತೆಗೆದುಕೊಂಡಿರುವ ತೀರ್ಮಾನವೇನಲ್ಲ ಎಂದರು.
ಚುನಾವಣೆಗೂ ಮೊದಲೇ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನಸಮುದಾಯ ನಮ್ಮನ್ನು ನಂಬಿ ಮತ ಚಲಾಯಿಸಿರಬಹುದು. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಮಾಡುವುದು ನಮ್ಮ ಕರ್ತವ್ಯ. ನಮ್ಮನಮ್ಮ ಅಭಿಪ್ರಾಯಗಳು ಬೇರೆ ಇರಬಹುದು. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಬೇಕು. ಯಾವುದೇ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಹೇಳಿದರು.
ಅದಾನಿ ವಿಷಯ ರಾಷ್ಟ್ರೀಯ ವಿಚಾರಕ್ಕೆ ಸಂಬಂಧಿಸಿದ್ದು. ಅಮೆರಿಕನ್ ಎಸ್ಟಬ್ಲಿಷ್‌ಮೆಂಟ್ಸ್ ಯಾವ ರೀತಿ ಅವರ ಕಂಪನಿ ನಡೆದುಕೊಳ್ಳುತ್ತಿದೆ ಎಂಬುದನ್ನು ತೋರಿಸಿದೆ. ಈ ಬಗ್ಗೆ ಅದಾನಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಒತ್ತಾಯ ಮಾಡುವುದರಲ್ಲಿ ತಪ್ಪೇನಿದೆ. ರಾಹುಲ್ ಗಾಂಧಿಯವರು ಪ್ರತಿಯೊಂದು ಭಾಷಣದಲ್ಲಿ ಹೇಳಿಕೊಂಡು ಬಂದಿದ್ದಾರೆ. ಅದಾನಿ ಅವರು ಅನೇಕ ಅವ್ಯವಹಾರಗಳನ್ನು ಮಾಡುತ್ತಿದ್ದಾರೆ. ಅವರಿಗೆ ಬೆಂಬಲಿಸುತ್ತಿದ್ದೀರಿ ಎಂದು ಪ್ರಧಾನಿಯವರಿಗೆ ನೇರವಾಗಿ ಹೇಳಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುವ ವಿಚಾರಕ್ಕೆ ಕಾಂಗ್ರೆಸ್ ಪಕ್ಷ ಚರ್ಚಿಸಲು ಅವಕಾಶ ಕೇಳುವುದು ತಪ್ಪೇನಿದೆ ಎಂದರು.
ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಿಂತಿಲ್ಲ. ಹಿಂದಿನ ಸರ್ಕಾರವು ಲಕ್ಷಾಂತರ ಕೋಟಿ ರೂ. ಬಿಲ್ ಬಾಕಿ ಉಳಿಸಿ ಹೋಗಿತ್ತು. ಅದನ್ನೆಲ್ಲ ನಾವು ಭರಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ ರೂ. 56 ಸಾವಿರ ಕೋಟಿ ಹೆಚ್ಚುವರಿ ಖರ್ಚಾಗಿದೆ. ಬಜೆಟ್ ಅಮೌಂಟ್ ರೂ. 3.27 ಲಕ್ಷ ಕೋಟಿ ಯಿಂದ, ರೂ. 3.75 ಲಕ್ಷ ಕೋಟಿಗೆ ಹೆಚ್ಚಾಗಿದೆ. ಮುಂದಿನ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗೆ ಕೊಟ್ಟರು, ಹೆಚ್ಚಿನ ಹಣ ದೊರಕುತ್ತದೆ ಎಂದರು.
ಕೇಂದ್ರ ಸರ್ಕಾರವು ನಮಗೆ ಬರಬೇಕಾದ ಹಣವನ್ನು ಸರಿಯಾಗಿ ಹಣ ನೀಡುತ್ತಿಲ್ಲ. ಒತ್ತಾಯ ಮಾಡಿ ಹಣ ತಂದು, ಸಂಪನ್ಮೂಲ ಕ್ರೂಢೀಕರಣವನ್ನು ಜಾಸ್ತಿ ಮಾಡಲಾಗಿದೆ. ಹಣಕಾಸಿನ ಸ್ಥಿತಿಗತಿಯನ್ನು ಬ್ಯಾಲೆನ್ಸ್ ಮಾಡಲು ಮುಖ್ಯಮಂತ್ರಿಗಳು ಕ್ಯಾಬಿನೆಟ್‌ನಲ್ಲಿ ಎರಡು ಬಾರಿ ನಮಗೆಲ್ಲ ಹೇಳಿದ್ದಾರೆ. ಯಾವುದು ತೊಂದರೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ವ್ಯವಸ್ಥೆ ಸರಿ ಇಲ್ಲದಿರುವ ಕುರಿತು ಪೊಲೀಸ್ ಮಹಾನಿರ್ದೇಶಕರೊಂದಿಗೆ ಮಾತನಾಡುತ್ತೇನೆ. ಎರಡು ಬಾರಿ ಜೈಲುಗಳ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದರು.
ಇದನ್ನೂ ಓದಿ: ಈ ಸುಂದ್ರಿ ಏನಾದ್ರೂ ಸಿನಿರಂಗಕ್ಕೆ ಕಾಲಿಟ್ರೆ ರಶ್ಮಿಕಾ, ಶ್ರೀಲೀಲಾ ಮನೆಗೆ ಹೋಗೋದು ಫಿಕ್ಸ್..! ಈಕೆಯ ಸೊಗಸು.. ಆಹಾ.. ಅದ್ಭುತ..
ಭೋವಿ ನಿಗಮದಲ್ಲಿನ ಅವ್ಯವಹಾರ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಸಿಐಡಿ ಎಸ್‌ಐಟಿ ತನಿಖೆ ಮಾಡುತ್ತಿದೆ. ತನಿಖೆ ಪೂರ್ಣಗೊಳ್ಳುವವರೆಗೂ ಹೆಚ್ಚಿಗೆ ಏನು ಹೇಳಲು ಆಗುವುದಿಲ್ಲ. ಹಣ ಕೇಳಿರುವ ಆರೋಪಕ್ಕೆ ಸಬಂಧಿಸಿದಂತೆ ಸಿಐಡಿ ಅಧಿಕಾರಿಗಳ ಮೇಲೆ ಬೇರೆ ರೀತಿಯಲ್ಲಿ ತನಿಖೆ ಮಾಡುತ್ತೇವೆ. ಹಿರಿಯ ಅಧಿಕಾರಿಗಳಿಂದ ತನಿಖೆ ಮಾಡಿಸುತ್ತೇವೆ ಎಂದು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ