ಬೆಂಗಳೂರು :ತುಮಕೂರು ಮತ್ತು ಹಾಸನದಲ್ಲಿ ಮುಂದಿನ ತಿಂಗಳ 2 ಮತ್ತು 5 ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಲಿದೆ. ಈ ಸಮಾವೇಶಗಳ ಮೂಲಕ ಸರ್ಕಾರ ತನ್ನ ಬದ್ದತೆಯನ್ನು ಜನತೆಗೆ ತಲುಪಿಸುವ ಯೋಜನೆಗಳನ್ನು ವಿಸ್ತರಿಸಲು ಸಜ್ಜಾಗಿದ್ದು. Muda, ವಾಲ್ಮೀಕಿ ಹಾಗೂ Wakf ಆರೋಪದಿಂದ ಗ್ಯಾರೆಂಟಿ ಕಡೆ ಜನರ ಗಮನ ಸೆಳೆಯಲು ಪ್ರಯತ್ನ ಮಾಡುತ್ತಿದೆ.


COMMERCIAL BREAK
SCROLL TO CONTINUE READING

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂಬಂಧ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ, ಜೊತೆಗೆ ಉಪಚುನಾವಣೆಯ ಗೆಲುವಿನ ಜೋಶ್ ಅನ್ನು ಮುಂದಿನ ಚುನಾವಣೆಗಳಲ್ಲಿ ಬಳಸುವುದು, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ತಲುಪಿ, ಸರ್ಕಾರದ ಭರವಸೆಗಳನ್ನು ದೃಢಪಡಿಸುವುದು ಮುಖ್ಯ ಉದ್ದೇಶವಾಗಿದೆ. ಇದಲ್ಲದೆ ಮುಡಾ ಮತ್ತು ವಾಲ್ಮೀಕಿ ನಿಗಮ ಹಗರಣ ಸೇರಿದಂತೆ ಸರ್ಕಾರ ವಿರುದ್ಧ ಕೇಳಿಬಂದಿರುವ ಇತರೆ ಹಗರಣಗಳನ್ನ ವಿಷಯಾಂತರ ಮಾಡುವ ತಂತ್ರವನ್ನು ಕಾಂಗ್ರೆಸ್ ರೂಪಿಸಿದೆ.


ಇತ್ತಿಚಿನ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸರ್ಕಾರ, ಈ ಸಮಾವೇಶಗಳನ್ನು ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಲು ಉಪಯೋಗಿಸಲಿದೆ. ಗ್ಯಾರಂಟಿ ಯೋಜನೆಗಳ ಕುರಿತು ಸರ್ಕಾರದ ಬದ್ದತೆಯನ್ನು ಜನರಿಗೆ ಮನವರಿಕೆ ಮಾಡುವುದು ಇದರ ಪ್ರಮುಖ ಅಂಶ.


ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ:
ಈ ಸಮಾವೇಶಗಳು ಮುಂದೆ ಬರುವ ಸ್ಥಳೀಯ ಸಂಸ್ಥೆಗಳ ಚುನಾವನೆಗೆ ಬುನಾದಿ ಹಾಕಲು ಸಹಾಯ ಮಾಡಲಿವೆ. ಜನರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳ ಕುರಿತು ಸಂಪೂರ್ಣ ಮಾಹಿತಿ ನೀಡುವುದರ ಮೂಲಕ ಭವಿಷ್ಯದ ಚುನಾವಣಾ ಸಮರ್ಥನೆ ತಯಾರಿಸುವ ಉದ್ದೇಶವೂ ಇದೆ.


ತುಮಕೂರು ಮತ್ತು ಹಾಸನದ ಮಾದರಿಯಲ್ಲಿ ಇತರ ಜಿಲ್ಲೆಗಳಲ್ಲಿ ಸಹ ಸಮಾವೇಶಗಳನ್ನು ನಡೆಸಲು ಸಿದ್ಧತೆಗಳು ಆರಂಭಗೊಂಡಿವೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮುಂದಿನ ದಿನಗಳಲ್ಲಿ ಹೆಚ್ಚು ಜನರ ಮನ ಗೆಲ್ಲುವಲ್ಲಿ ಪ್ರಾಮುಖ್ಯ ಪಾತ್ರವಹಿಸಲಿವೆ ಎಂಬುದು ಸರ್ಕಾರದ ಲೆಕ್ಕಾಚಾರವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.