Dr G Parameshwar On Guarantee Schemes: ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ. ಗ್ಯಾರಂಟಿ ಯೋಜನೆಗಳನ್ನು (Guarantee Schemes) ಜಾರಿಗೆ ತಂದಿರುವುದು ಕೇವಲ ಚುನಾವಣೆ ಉದ್ದೇಶದಿಂದ ಎನ್ನುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್,  ಯಾವುದೇ ಕಾರಣದಿಂದಲೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಉಡುಪಿಯಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಗ್ಯಾರಂಟಿ ಯೋಜನೆಗಳನ್ನು (Guarantee Schemes)  ಜಾರಿಗೊಳಿಸಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಪಟ್ಟಣ ಪ್ರದೇಶಗಳಲ್ಲಿ ಗ್ಯಾರಂಟಿ ಯೋಜನೆಯ ಅವಶ್ಯಕತೆ ಇದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ, ಹಳ್ಳಿ, ಗ್ರಾಮೀಣ ಭಾಗದ ಜನಕ್ಕೆ ಈ ಯೋಜನೆಗಳಿಂದ ಉಪಯೋಗವಾಗುತ್ತಿದೆ. ಯಾವುದೇ ಕಾರಣದಿಂದಲೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು. 


ಇದನ್ನೂ ಓದಿ- ಸಿಎಂ ಸಿದ್ದರಾಮಯ್ಯ ಸಿಗರೇಟ್ ಬಿಟ್ಟಿದ್ದು ಯಾವಾಗಾ ಗೊತ್ತಾ? ಈ ಬಗ್ಗೆ ಅವರು ಹೇಳಿದ್ದೇನು?


ಗ್ಯಾರಂಟಿ ಯೋಜನೆಗಳೊಂದಿಗೆ ಅಭಿವೃದ್ಧಿ: 
ಇನ್ನೂ ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತಿದೆ ಎಂದು ಪ್ರತಿಪಕ್ಷಗಳು ದೂರುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಡಾ. ಜಿ. ಪರಮೇಶ್ವರ್ (Home Minister Dr G Parameshwar), ಗ್ಯಾರಂಟಿ ಯೋಜನೆಗಳೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಕೂಡ ಮಾಡುತ್ತೇವೆ. ನಮ್ಮ ರಾಜ್ಯದ ಬಜೆಟ್ ಗಾತ್ರ ಹಿಗ್ಗಿದೆ, ಅಭಿವೃದ್ದಿ ಕಾರ್ಯಗಳಿಗೆ ಅಗತ್ಯ ಹಣಕಾಸಿನ ವ್ಯವಸ್ಥೆಯೂ ಇದ್ದು, ಆರ್ಥಿಕವಾಗಿ ಯಾವುದೇ ತೊಂದರೆ ಇಲ್ಲ ಎಂದವರು ತಿಳಿಸಿದರು. 


ಇದನ್ನೂ ಓದಿ- ಅಪಾಯದಲ್ಲಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು: ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ


ಬಿಜೆಪಿಯವರು ನಿರೀಕ್ಷೆ ತಲುಪಿಲ್ಲ, ನಾವು ನಮ್ಮ ನಿರೀಕ್ಷೆಗೂ ತಲುಪಿಲ್ಲ!
ಈ ವೇಳೆ ಲೋಕಸಭಾ ಚುನಾವಣೆ ಫಲಿತಾಂಶದ (Lok sabha Election Result) ಬಗ್ಗೆ ಪ್ರತಿಕ್ರಿಯಿಸಿದ ಡಾ. ಜಿ. ಪರಮೇಶ್ವರ್, ಎನ್‌ಡಿ‌ಎ  400 ಸ್ಥಾನಗಳನ್ನು ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿತ್ತು. ಜನ ಬಿಜೆಪಿಯನ್ನು, ಎನ್‌ಡಿಎ ಮೈತ್ರಿಯನ್ನು ತಿರಸ್ಕರಿಸಿದ್ದಾರೆ ಎಂಬುದು ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ.  ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ನ ವೋಟ್ ಶೇರ್ ಹೆಚ್ಚಾಗಿದೆ. ಬಿಜೆಪಿಯವರು ನಿರೀಕ್ಷೆ ತಲುಪಿಲ್ಲ, ನಾವು ನಮ್ಮ ನಿರೀಕ್ಷೆಗೂ ತಲುಪಿಲ್ಲ. ಕಾಂಗ್ರೆಸ್ ಸ್ವಲ್ಪ ಫೈನ್ ಟ್ಯೂನಿಂಗ್ ಮಾಡಿಕೊಳ್ಳಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಕೆಲಸ ಮಾಡುತ್ತೇವೆ ಎಂದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.