ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ಗ್ಯಾರೆಂಟೆಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಯೋಜನೆ

ಕೋವಿಡ್-19 ಕಾರಣದಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ಗ್ಯಾರೆಂಟೆಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಯೋಜನೆಯನ್ನು ಸರ್ಕಾರವು ಘೋಷಿಸಿರುತ್ತದೆ. ಈಗಾಗಲೇ ಅಸ್ಥಿತ್ವದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಘಟಕಗಳು 2020ರ ಫೆಬ್ರವರಿ.29ರ ಅಂತ್ಯಕ್ಕೆ ಸಾಲ ಬಾಕಿ ಇರುವ ಮೊತ್ತದ ಮೇಲೆ ಗರಿಷ್ಠ ಶೇ.20 ರಷ್ಟು ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ.

Last Updated : Jul 18, 2020, 04:22 PM IST
 ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ಗ್ಯಾರೆಂಟೆಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಯೋಜನೆ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್-19 ಕಾರಣದಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ಗ್ಯಾರೆಂಟೆಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಯೋಜನೆಯನ್ನು ಸರ್ಕಾರವು ಘೋಷಿಸಿರುತ್ತದೆ. ಈಗಾಗಲೇ ಅಸ್ಥಿತ್ವದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಘಟಕಗಳು 2020ರ ಫೆಬ್ರವರಿ.29ರ ಅಂತ್ಯಕ್ಕೆ ಸಾಲ ಬಾಕಿ ಇರುವ ಮೊತ್ತದ ಮೇಲೆ ಗರಿಷ್ಠ ಶೇ.20 ರಷ್ಟು ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ.

ಸಾಲ ಸೌಲಭ್ಯ ಪಡೆಯಲು ಆಸಕ್ತರಿರುವ ಉದ್ದಿಮೆದಾರರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಹಾಯವಾಣಿ ಸಂ: 080-23090500 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಅಥವಾ ಜಿಲ್ಲಾ ಕೈಗಾರಿಕಾ ಕೇಂದ್ರ, ಹಾಸನ ಕಚೇರಿಯ ದೂರವಾಣಿ ಸಂಖ್ಯೆ: 08172-240364 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Trending News