ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಹಾಕುವಾಗ ತಪ್ಪು ಮಾಹಿತಿ ಒದಗಿಸಿದ್ದ ಅಭ್ಯರ್ಥಿಗಳಿಗೆ ಇದನ್ನು ಸರಿಪಡಿಸಿಕೊಳ್ಳಲು ಫೆ.12 ಮತ್ತು 13ರ ಮಟ್ಟಿಗೆ ಎರಡು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-10 Rupee Coin: 10 ರೂಪಾಯಿಯ ಯಾವ ನಾಣ್ಯ ಮಾನ್ಯವಾಗಿದೆ? ಗೊಂದಲ ನಿವಾರಿಸಿದ ಸರ್ಕಾರ


ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಈಗಾಗಲೇ ಮೊದಲನೇ ಸುತ್ತಿನ ಕೌನ್ಸೆಲಿಂಗ್ ಮುಗಿದಿದ್ದು, ಆಯ್ಕೆಯಾಗಿರುವ ಬಹುತೇಕರು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಆದರೆ, ಕೆಲವರು ಅರ್ಜಿ ಸಲ್ಲಿಸುವಾಗ ಸೇವಾ ಅನುಭವ ವಿವರ, ಸ್ನಾತಕೋತ್ತರ ಪದವಿ ಅಂಕಗಳು, ಪಿಎಚ್.ಡಿ/ಎಂ.ಫಿಲ್ ಪದವಿಗೆ ಸಂಬಂಧಿಸಿದ ವಿವರಗಳನ್ನು ತಪ್ಪಾಗಿ ತುಂಬಿದ್ದು, ಇವುಗಳನ್ನು ಸರಿಪಡಿಸಿಕೊಳ್ಳಲು ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ದಿನ ಅವಕಾಶ ಕೊಡಲಾಗುತ್ತಿದೆ’ ಎಂದು ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.


ಇದನ್ನೂ ಓದಿ-#JamesTeaser: ದೊಡ್ಮನೆ ಅಭಿಮಾನಿಗಳಿಗೆ ಬಿಗ್ ಗಿಫ್ಟ್; ಬಹುನಿರೀಕ್ಷಿತ 'ಜೇಮ್ಸ್' ಚಿತ್ರದ ಟೀಸರ್ ರಿಲೀಸ್


ಅಭ್ಯರ್ಥಿಗಳು ವಾಸ್ತವ ಮಾಹಿತಿಯನ್ನು ಒದಗಿಸದೆ, ಪುನಃ ತಪ್ಪು ಮಾಡಿದಲ್ಲಿ ಅಂತಹವರನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.