Lok Sabha Elections 2024: ಅಗತ್ಯ ಸೇವೆಗಳ ಗೈರು ಮತದಾರರಿಗೆ ಅಂಚೆ ಮತದಾನ ಸೌಲಭ್ಯ!?

Lok Sabha Elections 2024 : ಚುನಾವಣಾ ಆಯೋಗವು 12 ವಿವಿಧ ಇಲಾಖೆಗಳನ್ನು ಅಗತ್ಯ ಸೇವೆಗಳೆಂದು ಪರಿಗಣಿಸಿದ್ದು, ಆಯಾ ಇಲಾಖಾವಾರು ನೀಡುವ ಪಟ್ಟಿಯ ಅನುಸಾರ ಅಂಚೆ ಮತದಾನದ ಮೂಲಕ ಮತ ಚಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು. 

Written by - Bhavya Sunil Bangera | Last Updated : Mar 19, 2024, 04:27 PM IST
    • ಲೋಕಸಭಾ ಚುನಾವಣೆ 2024
    • ಗೈರು ಮತದಾರರಿಗೆ ಅಂಚೆ ಮತದಾನ ವ್ಯವಸ್ಥೆ!
    • ಅಧಿಕಾರಿಗಳಿಗೆ ಸೂಚನೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರ ಸೂಚನೆ
Lok Sabha Elections 2024: ಅಗತ್ಯ ಸೇವೆಗಳ ಗೈರು ಮತದಾರರಿಗೆ ಅಂಚೆ ಮತದಾನ ಸೌಲಭ್ಯ!? title=

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 12 ವಿವಿಧ ಇಲಾಖೆಗಳ ಅಗತ್ಯ ಸೇವೆಗಳ ಗೈರು ಮತದಾರರಿಗೆ(AVES) ಅಂಚೆ ಮತದಾನ(ಪೋಸ್ಟಲ್ ಬ್ಯಾಲೆಟ್)ದ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಆಯಾ ಇಲಾಖೆಗಳಿಂದ ಪಟ್ಟಿ ನೀಡಲು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂಚೆ ಮತದಾನಕ್ಕೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಆಯೋಗವು 12 ವಿವಿಧ ಇಲಾಖೆಗಳನ್ನು ಅಗತ್ಯ ಸೇವೆಗಳೆಂದು ಪರಿಗಣಿಸಿದ್ದು, ಆಯಾ ಇಲಾಖಾವಾರು ನೀಡುವ ಪಟ್ಟಿಯ ಅನುಸಾರ ಅಂಚೆ ಮತದಾನದ ಮೂಲಕ ಮತ ಚಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು. 

ಇದನ್ನೂ ಓದಿ: ರಾಜ್ಯದಲ್ಲಿ ತೀವ್ರವಾಗಿದೆ ಹಿಂದೂ ವಿರೋಧಿ ನಡೆ: ಪ್ರಹ್ಲಾದ ಜೋಶಿ ಆಕ್ರೋಶ

ಇಲಾಖಾವಾರು ಅಗತ್ಯ ಸೇವೆಗಳ ಗೈರು ಮತದಾರರ ಅರ್ಹ ಮತದಾರರ ಪಟ್ಟಿ ನೀಡಿದ ನಂತರ 12ಡಿ ನಮೂನೆಗಳಲ್ಲಿ ಭರ್ತಿ ಮಾಡಿ, ದಿನಾಂಕ:  22/03/2024ರ ಶುಕ್ರವಾರದೊಳಗಾಗಿ ಸಲ್ಲಿಸಲು ಸೂಚಿಸಲಾಯಿತು.

ಅರ್ಹ ಮತದಾರರು ನೋಂದಣಿಯಾಗಿರುವ ಲೋಕಸಭಾ ಕ್ಷೇತ್ರದಲ್ಲಿ ಸ್ಥಾಪಿಸಲಾದ ಪೋಸ್ಟಲ್ ವೋಟಿಂಗ್ ಸೆಂಟರ್(ಪಿವಿಸಿ) ನಲ್ಲಿ ಮಾತ್ರ ಈ ಬಾರಿ ಅಂಚೆ ಮತದಾನ ಮಾಡಲು ಅವಕಾಶವಿದೆ. ಅಂಚೆ ಮೂಲಕ ಅಂಚೆ ಮತದಾನ ಪತ್ರವನ್ನು ನೀಡುವ/ತಲುಪಿಸುವ ವ್ಯವಸ್ಥೆ ಈ ಬಾರಿ ಇರುವುದಿಲ್ಲ ಎಂದು ಹೇಳಿದರು. 

ಅಗತ್ಯ ಸೇವೆಗಳ 12 ಇಲಾಖೆಗಳ ವಿವರ:

 1. ವಿದ್ಯುತ್ ಇಲಾಖೆ
 2. ಬಿ.ಎಸ್.ಎನ್.ಎಲ್ ಇಲಾಖೆ
 3. ರೈಲ್ವೆ ಇಲಾಖೆ
 4. ದೂರದರ್ಶನ ಇಲಾಖೆ
 5. ಆಲ್ ಇಂಡಿಯಾ ರೇಡಿಯೋ ಇಲಾಖೆ
 6. ಆರೋಗ್ಯ ಇಲಾಖೆ
 7. ವಾಯುಯಾನ ಇಲಾಖೆ
 8. ಬಸ್ ಸೇವೆಗಳು(ಕೆ.ಎಸ್.ಆರ್.ಟಿ.ಸಿ/ಬಿ.ಎಂ.ಟಿ.ಸಿ)
 9. ಅಗ್ನಿಶಾಮಕ ಸೇವೆಗಳ ಇಲಾಖೆ
10. ಭಾರತ ಚುನಾವಣಾ ಆಯೋಗದಿಂದ ಮತದಾನದ ದಿನಂದಂದು ಚುನಾವಣಾ ಕವರೇಜ್‌ಗಾಗಿ ಅಧಿಕೃತಗೊಂಡ ಮಾಧ್ಯಮ ವ್ಯಕ್ತಿಗಳು.
11. ಸಂಚಾರ ಪೊಲೀಸ್ ಇಲಾಖೆ ಹಾಗೂ
 12. ಆಂಬ್ಯುಲೆನ್ಸ್ ಸೇವೆಗಳು.

ಸಭೆಯಲ್ಲಿ ಆರೋಗ್ಯ ಇಲಾಖೆಯ ಆಯುಕ್ತರಾದ ಶ್ರೀ ಡಿ. ರಂದೀಪ್, ಪೋಸ್ಟಲ್ ಬ್ಯಾಲೆಟ್ ನೋಡಲ್ ಅಧಿಕಾರಿಯಾದ ಪಲ್ಲವಿ, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ರವಿ ಚಂದ್ರ ನಾಯ್ಕ್, 12 ವಿವಿಧ ಇಲಾಖೆಗಳ ನೋಡಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ‌ವೈ ವಿಜಯೇಂದ್ರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News