Gujarat Election Results 2022: ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ - ಸಿಎಂ ಬೊಮ್ಮಾಯಿ

Gujarat Election Results 2022 : ಇಂದು ಲಲಿತ್ ಅಶೋಕ್ ಹೋಟೆಲ್ ಬಳಿ  ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಗುಜರಾತ್  ಚುನಾವಣಾ  ಫಲಿತಾಂಶ ಸುಶಾಸನದ ಫಲ. ಭಾಜಪ ಮುನ್ನಡೆಯಲ್ಲಿದ್ದು, ಈ ಬಾರಿಯೂ ಗುಜರಾತ್ ನಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದೆ ಎಂದು ಹೇಳಿದರು. 

Written by - Prashobh Devanahalli | Edited by - Chetana Devarmani | Last Updated : Dec 8, 2022, 01:26 PM IST
  • ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ
  • ಈ ಬಾರಿಯೂ ಗುಜರಾತ್ ನಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದೆ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
Gujarat Election Results 2022: ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ - ಸಿಎಂ ಬೊಮ್ಮಾಯಿ  title=
ಬಸವರಾಜ ಬೊಮ್ಮಾಯಿ

ಬೆಂಗಳೂರು : ಗುಜರಾತ್  ಚುನಾವಣಾ  ಫಲಿತಾಂಶ ಸುಶಾಸನದ ಫಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಲಲಿತ್ ಅಶೋಕ್ ಹೋಟೆಲ್ ಬಳಿ  ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಭಾಜಪ ಮುನ್ನಡೆಯಲ್ಲಿದ್ದು, ಈ ಬಾರಿಯೂ ಗುಜರಾತ್ ನಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದೆ. ಕಳೆದ ಎಲ್ಲ ಚುನಾವಣೆ ಗಳಿಗಿಂತ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಇದು ಚುನಾವಣೋತ್ತರ ಸಮೀಕ್ಷೆ ಯಲ್ಲಿಯೂ ತಿಳಿದು ಬಂದಿತ್ತು. ಒಂದು ರಾಜ್ಯದಲ್ಲಿ ಸುಶಾಸನ ತಂದರೆ ಜನ ಬೆಂಬಲ ಕೊಡುತ್ತಾರೆ ಎಂದರು.

ಇದನ್ನೂ ಓದಿ :  ಗುಜರಾತ್ ಚುನಾವಣೆ ಫಲಿತಾಂಶ ರಾಜ್ಯದ ಚುನಾವಣೆಗೆ ಬೂಸ್ಟರ್: ಮಾಜಿ ಸಿಎಂ ಜಗದೀಶ್ ಶೆಟ್ಟರ್

ಇದುವರೆಗೂ ದೇಶದಲ್ಲಿ ಆಡಳಿತ ವಿರೋಧ  ಟ್ರೆಂಡ್ ಇತ್ತು. ಗುಜರಾತ್ ಆಡಳಿತದ ಪರವಾಗಿದೆ ಎಂದು ನಿರೂಪಿಸಿದೆ. 7 ನೇ ಬಾರಿ ಗೆಲ್ಲುತ್ತಿರುವುದು ಸುಲಭದ ಮಾತಲ್ಲ. ಆಡಳಿತದ ಪರವಾಗಿ ಜನ ನಿಲ್ಲಲು ಸರ್ಕಾರಗಳು ಕೆಲಸ ಮಾಡಬೇಕಾಗುತ್ತದೆ. ಆ ಕೆಲಸವನ್ನು ಗುಜರಾತ್ ಸರ್ಕಾರ ಮಾಡಿದೆ ಎಂದರು.

ಎಲ್ಲಕ್ಕೂ ಮಿಗಿಲಾಗಿ ಇದಕ್ಕೆ ಅಡಿಪಾಯ ಹಾಕಿ ಬೆಳಸಿ, ಮಾರ್ಗದರ್ಶನ ಮಾಡುತ್ತಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ.  ಅವರ ಸಕಾರಾತ್ಮಕ ನಾಯಕತ್ವ ಸುಮಾರು ಒಂದು ತಲೆಮಾರು ದಾಟಿದರೂ ಹಳೆ ಮತ್ತು ಹೊಸ  ಪೀಳಿಗೆ ಅವರ ಆಡಳಿತ, ದಕ್ಷತೆಯನ್ನು ಒಪ್ಪಿದ್ದಾರೆ. ದೇಶ ಮುನ್ನಡೆಸುವ ಶಕ್ತಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಳೆದ ಬಾರಿ 3 ರಾಜ್ಯಗಳಲ್ಲಿ ಸಹ  ಗೆದ್ದಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ಸಮಬಲದ ಹೋರಾಟವಿದೆ. ಅಂತಿಮವಾಗಿ ಬಿಜೆಪಿ ಗೆದ್ದು ಸರ್ಕಾರ ರಚಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. 

ನವದೆಹಲಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ  15 ವರ್ಷ ಆಡಳಿತ ಮಾಡುವುದೇ ದೊಡ್ಡ ಸಾಧನೆ. ಸ್ಥಳೀಯ ಸಮಸ್ಯೆಗಳು  ಬಹಳ ಇರುತ್ತವೆ. ಮತದಾರರ ಸಣ್ಣ ಸಂಖ್ಯೆ, ಬಹುಆಯಾಮದ ಸ್ಪರ್ಧೆ ಇರುತ್ತದೆ ಮುನಿಸಿಪಲ್ ಚುನಾವಣೆಯನ್ನು  ಸಾರ್ವತ್ರಿಕ ಚುನಾವಣೆಗೆ  ಹೋಲಿಕೆ ಮಾಡಲಾಗುವುದಿಲ್ಲ ಎಂದರು.  

ಇದನ್ನೂ ಓದಿ :  Gujarat Election Results 2022 live updates- ಗುಜರಾತ್‌ನಲ್ಲಿ ದಾಖಲೆ ಬರೆಯಲು ಸಜ್ಜಾದ ಬಿಜೆಪಿ

ಬಿಜೆಪಿ ಗೆಲುವಿನ ಪರಿಣಾಮ ಸಕಾರಾತ್ಮಕವಾಗಿ ಕರ್ನಾಟಕದ ಚುನಾವಣೆಯ ಮೇಲೆ ಆಗಿಯೇ ಆಗುತ್ತದೆ. ಭಾಜಪ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ದೊಡ್ಡ ನೈತಿಕ ಬಲ ಸಿಗಲಿದೆ. ಇನ್ನಷ್ಟು ಹುರುಪು, ಹುಮ್ಮಸ್ಸಿನಲ್ಲಿ ಕೆಲಸ ಮಾಡಿದರೆ  ಜಯ ನಿಶ್ಚಿತ. ಚುನಾವಣಾ ಫಲಿತಾಂಶ ಪರಿಣಾಮ ಬೀರುವುದಿಲ್ಲ ಎಂದಿರುವ ವಿಪಕ್ಷ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿಗಳು ಅವರು ಹಾಗೆಯೇ ಹೇಳಬೇಕು. ಅವರು ಹೇಳಿದ್ದು ಯಾವುದೂ ನಿಜವಾಗಿಲ್ಲ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News