Gujarat Election Results 2022: ಗುಜರಾತ್ ರಾಜ್ಯದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅಭೂತಪೂರ್ವ ಜಯ ಸಿಕ್ಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಗುಜರಾತ್ ಚುನಾವಣೆ ಫಲಿತಾಂಶವು 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಬೂಸ್ಟರ್ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಗುಜರಾತ್ ರಾಜ್ಯದ ಅಭೂತಪೂರ್ವ ಜಯ ನಿಜಕ್ಕೂ ರಾಜ್ಯದ ಚುನಾವಣೆಗೆ ಬೂಸ್ಟರ್ ಆಗಿ ಪರಿಣಮಿಸುತ್ತದೆ. ಗುಜರಾತ್ ರಾಜ್ಯದ ಜನರು ಭಾರತೀಯ ಜನತಾ ಪಕ್ಷದ ಅಧಿಕಾರದ ಕಾರ್ಯವೈಖರಿ ಹಾಗೂ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಮನ್ನಣೆ ನೀಡಿರುವುದು ನಿಜಕ್ಕೂ ಅಭಿನಂದನಾ ಪೂರಕವಾಗಿದೆ ಎಂದರು.
ಇದನ್ನೂ ಓದಿ- ಗುಜರಾತ್ನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ : ಮತ್ತೆ ಕೇಳಿ ಬಂತು ʼಬ್ಯಾನ್ EVMʼ ಮಾತು
ಇದೇ ಸಂದರ್ಭದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಕುರಿತು ಸಿದ್ಧರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗುಜರಾತ್ ಚುನಾವಣೆ ಫಲಿತಾಂಶ ರಾಜ್ಯದ ಚುನಾವಣೆಗೆ ದಿಕ್ಸೂಚಿ ಆಗದೇ ಇರಬಹುದು. ಆದರೆ ಈ ಚುನಾವಣೆ ರಾಜ್ಯದ ಚುನಾವಣೆಗೆ ದೊಡ್ಡಮಟ್ಟದ ಪರಿಣಾಮದ ಮೂಲಕ ಬೂಸ್ಟರ್ ಆಗಿ ಪರಿಣಮಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ- Video: ಹೌದೋ ಹುಲಿಯಾ! ಕಿಕ್ಕಿರಿದ ಬಸ್ ಅನ್ನು ಈ ಹುಡುಗಿ ಹತ್ತಿದ ರೀತಿ ಕಂಡು ಬೆಚ್ಚಿಬಿದ್ದ ಜನ!
ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುವ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಜಗದೀಶ್ ಶೆಟ್ಟರ್, ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.