ಮಲೆಮಹದೇಶ್ವರ ಬೆಟ್ಟ ಬಳಿ ಗುಜರಾತ್ ಪ್ರವಾಸಿಗರ ಬಸ್ ಪಲ್ಟಿ- 15ಕ್ಕೂ ಹೆಚ್ಚು ಮಂದಿಗೆ ಗಾಯ
ತಮಿಳುನಾಡು ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ವೇಳೆ ಪಾಲಾರ್ ನ ಎರಡನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಸ್ ಹಿಂದಕ್ಕೆ ಜಾರಿ ಪಲ್ಟಿಯಾಗಿದೆ.
ಚಾಮರಾಜನಗರ: ಗುಜರಾತ್ ಪ್ರವಾಸಿಗರ ಬಸ್ಸೊಂದು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಮೀಪ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿಗ ಗಾಯಗೊಂಡಿರುವ ದುರ್ಘಟನೆ ಸಂಭವಿಸಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗುಜರಾತ್ ಮೂಲದ ಸ್ಲೀಪರ್ ಕೋಚ್ ಬಸ್ ಇದಾಗಿದ್ದು ತಮಿಳುನಾಡು ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ವೇಳೆ ಪಾಲಾರ್ ನ ಎರಡನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಸ್ ಹಿಂದಕ್ಕೆ ಜಾರಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.
ಇದನ್ನೂ ಓದಿ- ದಾಸರಹಳ್ಳಿ ವಲಯ: ವಿವಿಧ ಸ್ಥಳಗಳ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಈ ಬಸ್ ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲರನ್ನೂ ಮಲೆಮಹದೇಶ್ವರ ಬೆಟ್ಟದ ಆಸ್ಪತ್ರೆಗೆ ರವಾನಿಸಿದ್ದು ಚಿಕಿತ್ಸೆ ಕೊಡಲಾಗುತ್ತಿದೆ.
ಇದನ್ನೂ ಓದಿ- ತಾಕತ್ ಇದ್ದರೆ ನನ್ನ ವಿರುದ್ಧದ ಆರೋಪದ ಬಗ್ಗೆ ತನಿಖೆ ನಡೆಸಿ: ಮಾಜಿ ಸಿಎಂ ಸಿದ್ದರಾಮಯ್ಯ
ಈ ಬಸ್ ನಲ್ಲಿದ್ದ ಪ್ರವಾಸಿಗರು ಒಂದು ತಿಂಗಳ ಭಾರತ ಪ್ರವಾಸಕ್ಕಾಗಿ ಗುಜರಾತ್ ನಿಂದ ಬಂದಿದ್ದರು ಎಂದು ತಿಳಿದುಬಂದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.