ಬೆಂಗಳೂರು : ನಿನ್ನೆ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆ ಸಂಬಂಧ  ವಿವಿಧ ಸಂಸ್ಥೆಗಳು ನಡೆಸಿದ ಎಕ್ಸಿಟ್ ಪೋಲ್ ಫಲಿತಾಂಶ ಬಿಜೆಪಿ ಗೆ ಗೆಲುವು ಎನ್ನುವುದನ್ನು ಸೂಚಿಸಿದೆ. ಎಕ್ಸಿಟ್ ಪೋಲ್ ಫಲಿತಾಂಶ  ಕರ್ನಾಟಕ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ವಿಧಾನ ಸೌಧದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ 66ನೇ ಪುಣ್ಯ ಸ್ಮರಣೆ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರಿಗೆ ಮಾತನಾಡಿದ ಸಿಎಂ ಬೊಮ್ಮಾಯಿ , ಎಕ್ಸಿಟ್  ಪೋಲ್  ಪ್ರಕಾರ ಬಿಜೆಪಿ ಮುನ್ನಡೆ ಸಾಧಿಸಲಿದೆ. ಅಂದರೆ ಜನ ಅಭಿವೃದ್ಧಿ ಕಾರ್ಯವನ್ನ ಬೆಂಬಲಿಸಲಿದ್ದಾರೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ : ರಾಜ್ಯ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ ಹಣ ಪಾವತಿಗೆ ಒಪ್ಪಿಗೆ


ಜನ ಸುಳ್ಳು ಆರೋಪಗಳಿಗೆ ರಾಜಕೀಯ ಪ್ರೇರಿತ ಆರೋಪಗಳಿಗೆ ಬೆಂಬಲ ಕೊಡುವುದಿಲ್ಲ. ಎರಡೂ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಪ್ರ ಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವಕ್ಕೆ ಇಡೀ ಭಾರತ ಬೆಂಬಲ ನೀಡುತ್ತಿದೆ. ಗುಜರಾತ್ ನಲ್ಲಿ ಇದು 7 ನೇ ಬಾರಿಯ ಗೆಲುವಾಗಲಿದೆ. ಮುಂಬರುವ‌ ಚುನಾವಣೆಯಲ್ಲಿ ಕರ್ನಾಟಕದಲ್ಲೂ  ಒಳ್ಳೆಯ ಪರಿಣಾಮ ಆಗಲಿದೆ  ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 


ಇದೇ ಸಂದರ್ಭದಲ್ಲಿ ಮಾತಾನಾಡಿದ 2023 ರ ವಿಧಾನಸಭೆ ಚುನಾವಣೆಯಲ್ಲಿ  ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ  ಎಂದು ಹೇಳಿದ್ದಾರೆ. 


ಇದನ್ನೂ ಓದಿ : ʼಅಡ್ಡದಾರಿಗಳು ಬೇಡ, ಜ್ಞಾನಮಾರ್ಗದಲ್ಲಿ ನಡೆಯಿರಿʼ


ಮಹಾರಾಷ್ಟ್ರ ಗಡಿ ಕ್ಯಾತೆ :
ಇನ್ನು ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಹಳ ವರ್ಷದಿಂದ ವಿವಾದ ಮಾಡಿಕೊಂಡು ಬಂದಿದ್ದಾರೆ. ಎರಡೂ ರಾಜ್ಯಗಳ ಜನರ ನಡುವೆ ಸಾಮರಸ್ಯ ಇದೆ. ಸುಪ್ರೀಂ ಕೋರ್ಟ್ ನಲ್ಲಿ ಈ ಬಗ್ಗೆ ಪ್ರಕರಣ  ನಡೆಯುತ್ತಿದೆ. ಈ ಕೇಸ್ ನಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.  ಚುನಾವಣೆ ದೃಷ್ಟಿಯಲ್ಲಿ ವಿವಾದ ಎಬ್ಬಿಸುದು ಸರಿಯಲ್ಲ. ಜನರ ರಕ್ಷಣೆಗೆ ನಾವು  ಬದ್ದವಾಗಿದ್ದೇವೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆ ಮಾಡಲು ಸರ್ಕಾರ ಸಿದ್ದವಾಗಿದೆ ಎಂದು ಭರವಸೆ ನೀಡಿದ್ದಾರೆ. 


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.