ಬೆಂಗಳೂರು: ಜೆಡಿಎಸ್ ನ ಏಳು ಬಂಡಾಯ ಶಾಸಕರ ವಿರುದ್ಧ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಹೈಕೋರ್ಟ್ ಮೊರೆ ಹೋಗಲು ತೀರ್ಮಾನ ಕೈಗೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡಿದ ಹಿನ್ನೆಲೆಯಲ್ಲಿ ಈ ಬಗ್ಗೆ ಈಗಾಗಲೇ ಸ್ಪೀಕರ್ ಗೆ ದೂರು ನೀಡಲಾಗಿದೆ. ಆದರೆ ಈ ಬಗ್ಗೆ ಇಂದಿನವರೆಗೂ ಯಾವುದೇ ರೀತಿಯ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಲು ಎಚ್.ಡಿ. ದೇವೇಗೌಡ ನಿರ್ಧರಿಸಿದ್ದಾರೆ.


ಇನ್ನೊಂದೆಡೆ ಜೆಡಿಎಸ್ ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್, ಮಂಡ್ಯ ಶಾಸಕ ಎನ್. ಚಾಲುವಾರಿಯಸ್ವಾಮಿ, ಪುಲಕೇಶ್ ನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಹಗರಿಬೋಮ್ಮಮನಹಳ್ಳಿ ಶಾಸಕ ಭೀಮಾ ನಾಯಕ್, ಶ್ರೀರಂಗಪಟ್ಟಣ ಶಾಸಕ ರಮೇಶ್ ಬ್ಯಾಂಡಿಸಿಡೆಗೌಡ ಮತ್ತು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಈ ಏಳು ಶಾಸಕರು ಮಾರ್ಚ್‌ 25 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲು ಸಜ್ಜಾಗಿದ್ದಾರೆ.